The second song of the movie Kendada Seragu is released PRO Harish Arasu stepped in with Purnima

ಕೆಂಡದ ಸೆರಗು ಚಿತ್ರದ ಎರಡನೇ ಹಾಡು ಬಿಡುಗಡೆ : ಪೂರ್ಣಿಮಾ ಜೊತೆ ಹೆಜ್ಜೆ ಹಾಕಿದ ಪಿ ಆರ್ ಓ ಹರೀಶ್ ಅರಸು - CineNewsKannada.com

ಕೆಂಡದ ಸೆರಗು ಚಿತ್ರದ ಎರಡನೇ ಹಾಡು ಬಿಡುಗಡೆ : ಪೂರ್ಣಿಮಾ ಜೊತೆ ಹೆಜ್ಜೆ ಹಾಕಿದ ಪಿ ಆರ್ ಓ ಹರೀಶ್ ಅರಸು

ಸ್ಯಾಂಡಲ್‍ವುಡ್ ಕನಸಿನ ರಾಣಿ ಮಾಲಾಶ್ರೀ ನಟನೆಯ ಕೆಂಡದ ಸೆರಗು ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಪಿ ಆರ್ ಓ ಕಮ್ ಯುವ ನಟ ಹರೀಶ್ ಅರಸು ಹಾಗೂ ಪೂರ್ಣಿಮಾ ಹೆಜ್ಜೆ ಹಾಕಿರುವ ಎರಡನೇ ಹಾಡು ಬಿಡುಗಡೆಯಾಗಿದೆ.

ಕಾದಂಬರಿ ಆಧಾರಿತ ಈ ಚಿತ್ರ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ಸ್ ಕೆಲಸದಲ್ಲಿ ಬ್ಯುಸಿಯಾಗಿದೆ. ಇದೀಗ ಈ ಕೆಂಡದ ಸೆರಗು ಸಿನಿಮಾದ ಎರಡನೇ ಹಾಡು ಅನಾವರಣಗೊಂಡಿದೆ. ಕೆಂಡದ ಸೆರಗು’ ಚಿತ್ರವನ್ನು ನಿರ್ದೇಶಿಸಿರುವ ರಾಕಿ ಸೋಮ್ಲಿ ಈ ಹುಡುಗಿ ಎಷ್ಟು ಚೆಂದ ಹಾಡಿಗೆ ಸಾಹಿತ್ಯ ಬರೆದಿದ್ದು, ಅನಿರುದ್ಧ್ ಶಾಸ್ತ್ರೀ ಕಂಠ ಕುಣಿಸಿದ್ದು, ವೀರೇಶ್ ಕಬ್ಲಿ ಟ್ಯೂನ್ ಹಾಕಿದ್ದಾರೆ.

ಕುಸ್ತಿ ಸುತ್ತ ಹೆಣೆಯಲಾದ ಚಿತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ ಪೊಲೀಸ್ ಕಮಿಷನರ್ ಪಾತ್ರದಲ್ಲಿ ನಟಿಸಿದ್ದು, ಭೂಮಿ ಶೆಟ್ಟಿ ಕುಸ್ತಿ ಪಟುವಾಗಿ ಬಣ್ಣ ಹಚ್ಚಿದ್ದಾರೆ. ನಿರ್ದೇಶಕ ರಾಕಿ ಸೋಮ್ಲಿ ಬರೆದ ‘ಕೆಂಡದ ಸೆರಗು’ ಕಾದಂಬರಿ ಆಧಾರಿತ ಚಿತ್ರ ಇದಾಗಿದೆ.

ಶ್ರೀ ಮುತ್ತು ಟಾಕೀಸ್ ಮತ್ತು ಎಸ್.ಕೆ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಕೆ. ಕೊಟ್ರೇಶ್ ಗೌಡ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಯಶ್ ಶೆಟ್ಟಿ, ವರ್ಧನ್ ತೀರ್ಥಹಳ್ಳಿ, ಪ್ರತಿಮಾ, ಹರೀಶ್ ಅರಸು, ಬಸು ಹಿರೇಮಠ್, ಶೋಭಿತ, ಸಿಂಧು ಲೋಕನಾಥ್ ಚಿತ್ರದ ತಾರಾಬಳಗದಲ್ಲಿದ್ದಾರೆ. ವಿಪಿನ್ ವಿ ರಾಜ್ ಛಾಯಾಗ್ರಹಣ, ವೀರೇಶ್ ಕಂಬ್ಲಿ ಸಂಗೀತ ನಿರ್ದೇಶನ, ಶ್ರೀಕಾಂತ್ ಸಂಕಲನ ಚಿತ್ರಕ್ಕಿದೆ.

ಪೂರ್ತಿಯಾಗಿ ಓದಿ

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin