The shooting of Ragini Dwivedi starrer "Bingo" is completed

ರಾಗಿಣಿ ದ್ವಿವೇದಿ ಅಭಿನಯದ “ಬಿಂಗೊ” ಚಿತ್ರದ ಚಿತ್ರೀಕರಣ ಪೂರ್ಣ - CineNewsKannada.com

ರಾಗಿಣಿ ದ್ವಿವೇದಿ ಅಭಿನಯದ “ಬಿಂಗೊ” ಚಿತ್ರದ ಚಿತ್ರೀಕರಣ ಪೂರ್ಣ

“ಶಂಭೋ ಶಿವ ಶಂಕರ” ಚಿತ್ರ ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ ನಿರ್ದೇಶನದ, ಆರ್ ಕೆ ಚಂದನ್ ಹಾಗೂ ರಾಗಿಣಿ ದ್ವಿವೇದಿ ನಾಯಕ ನಾಯಕಿಯಾಗಿ ನಟಿಸಿರುವ “ಬಿಂಗೊ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.

ಸಸ್ಪೆನ್ಸ್ ಥ್ರಿಲ್ಲರ್ ಜಾನರ್ ನ ಈ ಚಿತ್ರಕ್ಕೆ ಬೆಂಗಳೂರಿನಲ್ಲೇ ಚಿತ್ರೀಕರಣ ನಡೆದಿದೆ. ಪೋಸ್ಟ್ ಪ್ರೊಡಕ್ಷನ್ಸ್ ವರ್ಕ್ ಬಿರುಸಿನಿಂದ ಸಾಗಿದೆ.

ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಆರ್ ಕೆ ಚಂದನ್ , ರಾಗಿಣಿ ದ್ವಿವೇದಿ, ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್), ಮುರಳಿ ಪೂರ್ವಿಕ್, ಅಪೂರ್ವ, ಶ್ರವಣ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಹಿತನ್ ಹಾಸನ್ ಸಂಗೀತ ನೀಡಿರುವ ಮೂರು ಹಾಡುಗಳು ಸುಮಧುರವಾಗಿ ಮೂಡಿಬಂದಿದೆ. ಸದ್ಯದಲ್ಲೇ ಅದ್ದೂರಿ ಸಮಾರಂಭ ಆಯೋಜಿಸಿ ಟ್ರೇಲರ್ ಹಾಗೂ ಹಾಡುಗಳನ್ನು ಬಿಡುಗಡೆ ಮಾಡುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.

ನಟರಾಜ್ ಮುದ್ದಾಲ್ ಅವರ ಛಾಯಾಗ್ರಹಣವಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಸಾಹಸ ಸನ್ನಿವೇಶಗಳಿದ್ದು, ನರಸಿಂಹ ಸಾಹಸ ನಿರ್ದೇಶನ ಮಾಡಿದ್ದಾರೆ. ಕಂಬಿ ರಾಜು ಅವರ ನೃತ್ಯ ನಿರ್ದೇಶನ ಹಾಗೂ ವೆಂಕಿ uಜv ಸಂಕಲನ “ಬಿಂಗೊ” ಚಿತ್ರಕ್ಕಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin