ಸುಮಂತ್ ಶೈಲೇಂದ್ರ ನಟನೆಯ “ಚೇಸರ್” ಚಿತ್ರದ ಚಿತ್ರೀಕರಣ ಮುಕ್ತಾಯ
ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ “ಬುದ್ದಿವಂತ -2 ” ಚಿತ್ರ ತೆರೆಗೆ ಬರುವ ಮುನ್ನವೇ ನಿರ್ದೇಶಕ ಎಂ ಜಯ್ಯರ್ರಮಃ ಮತ್ತೊಂದು ಚಿತ್ರ ” ಚೇಸರ್ ” ಕೈಗೆತ್ತಿಕೊಂಡು ಸದ್ದಿಲ್ಲದೆ ಪೂರ್ಣಗೊಳಿಸಿದ್ದು ಸದ್ಯದಲ್ಲಿಯೇ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ

ಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣದ “ದಿಲ್ವಾಲ” ಚಿತ್ರದ ಮೂಲಕ ನಾಯಕರಾಗಿ ಚಿತ್ರರಂಗ ಪ್ರವೇಶಿಸಿ, ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಜನಪ್ರಿಯರಾಗಿರುವ ಸುಮಂತ್ ಶೈಲೇಂದ್ರ ನಾಯಕನಾಗಿ ನಟಿಸಿರುವ “ಚೇಸರ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.
ಲವ್ ಜಾನರ್ ಜೊತೆಗೆ ಸಸ್ಪೆನ್ಸ್ ವಿತ್ ಆಕ್ಷನ್ ಕಥಾಹಂದರವನ್ನೂ ಹೊಂದಿರುವ ಚಿತ್ರಕ್ಕೆ ನಿರ್ದೇಶಕ ಎಂ.ಜಯ್ಯರ್ರಮಃ ಕಥೆ, ಚಿತ್ರಕಥೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಸ್ ಚಂದ್ರಶೇಖರ್ ಛಾಯಾಗ್ರಹಣ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಈ ಚಿತ್ರಕ್ಕಿದೆ.

ಸುಮಂತ್ ಶೈಲೇಂದ್ರ ನಾಯಕರಾಗಿರುವ ಚಿತ್ರಕ್ಕೆ ಮಾಲತಿ ಶೇಖರ್ ಬಂಡವಾಳ ಹಾಕಿದ್ದು ಬಿಕೆ ಮಂಜಣ್ಣ ಕಳೆ ಮತ್ತು ಜೋಡಿದಾರ್ ಹರೀಶ್ ಸಹ ನಿರ್ಮಾಣದಲ್ಲಿ ಕೈಜೋಡಿಸಿದ್ದಾರೆ.
ಸುಮಂತ್ ಶೈಲೇಂದ್ರ ಅವರಿಗೆ ನಾಯಕಿಯಾಗಿ ರಕ್ಷ ಮೆನನ್ ನಟಿಸಿದ್ದಾರೆ. ರವಿಶಂಕರ್, ರಂಗಾಯಣ ರಘು, ಸಾಧುಕೋಕಿಲ, ಚಿಕ್ಕಣ್ಣ, ಕುರಿ ಪ್ರತಾಪ್, ಸುಚೇಂದ್ರ ಪ್ರಸಾದ್, ಕಡಿಪುಡಿ ಚಂದ್ರು, ಸಂಗೀತ ಮುಂತಾದವರು “ಚೇಸರ್” ಚಿತ್ರದ ತಾರಾಬಳಗದಲ್ಲಿದ್ದಾರೆ.


