The shooting of the first phase of 'Powder' is over

`ಪೌಡರ್’ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯ - CineNewsKannada.com

`ಪೌಡರ್’ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯ

ಕೆ.ಆರ್.ಜಿ ಸ್ಟುಡಿಯೋಸ್ ಮತ್ತು ಟಿ.ವಿ.ಎಫ್ ಮೋಷನ್ ಪಿಕ್ಚರ್ಸ್ ನಿರ್ಮಾಣದಲ್ಲಿ ತಯಾರಾಗುತ್ತಿರುವ `ಪೌಡರ್’ ಚಿತ್ರದ ಮೊದಲ ಹಂತದ ಚಿತ್ರೀಕರಣ ಮೈಸೂರಿನಲ್ಲಿ ಮುಕ್ತಾಯವಾಗಿದೆ.

30 ದಿನಗಳ ಕಾಲ ನಡೆದ ಈ ಮೊದಲ ಹಂತದ ಚಿತ್ರೀಕರಣದಲ್ಲಿ ದಿಗಂತ್, ಧನ್ಯಾ ರಾಮ್‍ಕುಮಾರ್, ಶರ್ಮಿಳಾ ಮಾಂಡ್ರೆ, ರಂಗಾಯಣ ರಘು, ಅಚ್ಯುತ್ ಕುಮಾರ್, ಅನಿರುದ್ಧ್ ಆಚಾರ್ಯ, ರವಿಶಂಕರ್ ಗೌಡ ಮುಂತಾದ ಪ್ರತಿಭಾವಂತ ಕಲಾವಿದರು ಸಂತೋಷದಿಂದ ಚಿತ್ರೀಕರಣ ಮುಗಿಸಿದೆ.

ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡವು ಸದ್ಯದಲ್ಲೇ ಬೆಂಗಳೂರಿನಲ್ಲಿ ಎರಡನೆ ಹಂತದ ಚಿತ್ರೀಕರಣ ಪ್ರಾರಂಭಿಸಲು ಸಜ್ಜಾಗುತ್ತಿದೆ.

ಪೌಡರ್' ಒಂದು ಹಾಸ್ಯಮಯ ಚಿತ್ರವಾಗಿದ್ದು, ಎಲ್ಲಾ ವರ್ಗದ ಪ್ರೇಕ್ಷಕರಿಗೆ ಮನರಂಜನೆಯ ರಸದೌತಣವಾಗಲಿದೆ. ಈ ಚಿತ್ರಕ್ಕೆ ಜನಾರ್ದನ್ ಚಿಕ್ಕಣ್ಣ ಕಥೆ ಬರೆದು ನಿರ್ದೇಶಿಸುತ್ತಿದ್ದು, ಕೆ.ಆರ್.ಜಿ ಸ್ಟುಡಿಯೋಸ್ ಮತ್ತು ಟಿ.ವಿ.ಎಫ್ ಮೋಷನ್ ಪಿಕ್ಚರ್ಸ್ ಜೊತೆಯಾಗಿ ನಿರ್ಮಿಸಿವೆ. 2024ರ ಏಪ್ರಿಲ್‍ನಲ್ಲಿಪೌಡರ್’ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

Editor

error: Our contents are protected!! We discourage piracy of our website articles and contents. Thanks -Admin