The song "Hodi Syaavigyaga Majgi" from the movie Udala goes viral.

ಉಡಾಳ ಚಿತ್ರದ “ಹೊಡಿ ಶ್ಯಾವಿಗ್ಯಾಗ ಮಜ್ಗಿ” ಹಾಡು ವೈರಲ್ - CineNewsKannada.com

ಉಡಾಳ ಚಿತ್ರದ “ಹೊಡಿ ಶ್ಯಾವಿಗ್ಯಾಗ ಮಜ್ಗಿ” ಹಾಡು ವೈರಲ್

“ಪದವಿ ಪೂರ್ವ”ಚಿತ್ರ ನಿರ್ಮಿಸಿದ್ದ ದಾವಣಗೆರೆಯ ರವಿ ಶಾಮನೂರು ಹಾಗೂ ಯೋಗರಾಜ್ ಭಟ್ ನಿರ್ಮಿಸಿರುವ, ಅಮೋಲ್ ಪಾಟೀಲ್ ನಿರ್ದೇಶನದ ಹಾಗೂ “ಪದವಿಪೂರ್ವ” ಖ್ಯಾತಿಯ ಪೃಥ್ವಿ ಶಾಮನೂರು ನಾಯಕನಾಗಿ ನಟಿಸಿರುವ “ಉಡಾಳ” ಚಿತ್ರದ “ಹೊಡಿ ಶ್ಯಾವಿಗ್ಯಾಗ ಮಜ್ಗಿ” ಹಾಡು ವೈರಲ್ ಆಗಿದೆ

ಯೋಗರಾಜ್ ಭಟ್ ಬರೆದು ಚೇತನ್ ಡ್ಯಾವಿ ಸಂಗೀತ ನೀಡಿರುವ ಹಾಡನ್ನು ಮಾಳು ನಿಪ್ನಾಳ್ ಹಾಗೂ ಸೃಷ್ಟಿ ಶಾಮನೂರ್ ಹಾಡಿದ್ದಾರೆ. ಹಾಡು ಬಿಡುಗಡೆಯಾದ ಕ್ಷಣದಿಂದಲೇ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಅಪಾರ ಮೆಚ್ಚುಗೆ ಪಡೆದುಕೊಂಡಿದೆ.

ಈ ಹಾಡಿಗೆ ರೀಲ್ಸ್ ಮಾಡುತ್ತಿರುವವರ ಸಂಖ್ಯೆ ಕೂಡ ಅಧಿಕವಾಗಿದೆ. ಈಗ ಈ ಹಾಡು ಭಾರತದಲ್ಲೇ ಎರಡನೇ ಸ್ಥಾನದಲ್ಲಿದೆ, ಚಿತ್ರದ ಎರಡನೇ ಹಾಡು ಶೀಘ್ರದಲ್ಲಿ ಬಿಡುಗಡೆಯಾಗಲಿದ್ದು, ಈಗಾಗಲೇ ಬಿಡುಗಡೆಯಾಗಿರುವ ಮೊದಲ ಹಾಡು ಹಾಗೂ ಟೀಸರ್ ನಿಂದಲೇ ಎಲ್ಲರ ಗಮನ ಸೆಳೆದಿರುವ “ಉಡಾಳ” ಚಿತ್ರ ನವೆಂಬರ್ 14 ರಂದು ತೆರೆಗೆ ಬರಲಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin