The star couple releases the song "Ningavva Ningavva" from the movie "Land Lord"

ತಾರಾ ದಂಪತಿಗಳಿಂದ “ಲ್ಯಾಂಡ್ ಲಾರ್ಡ್” ಚಿತ್ರದ “ನಿಂಗವ್ವ ನಿಂಗವ್ವ” ಹಾಡು ಬಿಡುಗಡೆ” - CineNewsKannada.com

ತಾರಾ ದಂಪತಿಗಳಿಂದ “ಲ್ಯಾಂಡ್ ಲಾರ್ಡ್” ಚಿತ್ರದ “ನಿಂಗವ್ವ ನಿಂಗವ್ವ” ಹಾಡು ಬಿಡುಗಡೆ”

ಸಾರಥಿ ಫಿಲಂಸ್ ಲಾಂಛನದಲ್ಲಿ ಕೆ.ವಿ. ಸತ್ಯಪ್ರಕಾಶ್ – ಹೇಮಂತ್ ಗೌಡ ಕೆ.ಎಸ್ ನಿರ್ಮಿಸಿರುವ, ಜಡೇಶ್ ಕೆ.ಹಂಪಿ ನಿರ್ದೇಶನದ ಹಾಗೂ ದುನಿಯಾ ವಿಜಯ್, ರಚಿತರಾಮ್ ಅಭಿನಯದ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕಾಗಿ ಯೋಗರಾಜ್ ಭಟ್ ಬರೆದಿರುವ, ಅಜನೀಶ್ ಲೋಕನಾಥ್ ಸಂಗೀತ ನೀಡಿರುವ “ನಿಂಗವ್ವ ನಿಂಗವ್ವ” ಹಾಡು ಬಿಡುಗಡೆಯಾಗಿದೆ.

ವಿಜಯ್ ಪ್ರಕಾಶ್ – ಅನನ್ಯ ಭಟ್ ಕಂಠಸಿರಿಯಲ್ಲಿ ಮೂಡಿಬಂದಿರುವ ಹಾಡಿಗೆ ಭೂಷಣ್ ನೃತ್ಯ ಸಂಯೋಜನೆ ಮಾಡಿದ್ದಾರೆ. ದುನಿಯಾ ವಿಜಯ್ – ರಚಿತರಾಮ್ ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.

ಸ್ಯಾಂಡಲ್ ವುಡ್ ನ ತಾರಾ ದಂಪತಿಗಳಾದ “ನೆನಪಿರಲಿ” ಪ್ರೇಮ್ – ಜ್ಯೋತಿ, ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ಹಾಗೂ ತರುಣ್ ಸುಧೀರ್ – ಸೋನಾಲ್ ಅವರಿಂದ “ನಿಂಗವ್ವ ನಿಂಗವ್ವ” ಹಾಡು ಬಿಡುಗಡೆಯಾಯಿತು. ಹಾಡು ಬಿಡುಗಡೆ ಮಾಡಿ ಮಾತನಾಡಿದ ದಂಪತಿಗಳು ಯೋಗರಾಜ್ ಭಟ್ ಸಾಹಿತ್ಯ, ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ, ವಿಜಯ್ ಪ್ರಕಾಶ್ ಗಾಯನ ಹಾಗೂ ವಿಶೇಷವಾಗಿ ದುನಿಯಾ ವಿಜಯ್, ರಚಿತರಾಮ್ ಅಭಿನಯದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.

ಸ್ವಾಮಿ ಛಾಯಾಗ್ರಹಣ ಪೈಟಿಂಗ್ ಇದ್ದ ಹಾಗೆ ಇದೆ ಎಂದು ಬಣ್ಣಿಸಿದರು. ನಿರ್ದೇಶಕರ ಕಾರ್ಯವೈಖರಿ ಚೆನ್ನಾಗಿದೆ ಎಂದು ತಿಳಿಸಿ, ನಿರ್ಮಾಪಕರಿಗೆ ಶುಭವನ್ನು ಕೋರಿದರು. ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ಆನಂತರ ದಂಪತಿಗಳಿಗೆ ದುನಿಯಾ ವಿಜಯ್ ಹಾಗೂ ರಚಿತರಾಮ್ ಬಾಗಿನ ನೀಡಿ ಸನ್ಮಾನಿಸಿದರು. ನೀನಾಸಂ ಸತೀಶ್ ಹಾಗೂ ಗುರು ದೇಶಪಾಂಡೆ ಅತಿಥಿಗಳಾಗಿ ಆಗಮಿಸಿದ್ದರು.

ನಾಯಕ ವಿಜಯ್ ಕುಮಾರ್ ಮಾತನಾಡಿ ಸಾಮಾನ್ಯವಾಗಿ ನಾಯಕಿಯರು ವಯಸ್ಸಿನ ಪಾತ್ರ ಒಪ್ಪಿಕೊಳ್ಳುವುದು ಕಡಿಮೆ. ರಚಿತರಾಮ್ ಒಪ್ಪಿಕೊಂಡು ಈ ಪಾತ್ರ ಮಾಡಿದ್ದಾರೆ. ನನಗೂ ಕೂಡ ಈ ಹಾಡು ಬಿಡುಗಡೆ ಆಗುವವರೆಗೂ ನನ್ನ ಪಾತ್ರದ ಬಗ್ಗೆ ಎಲ್ಲರೂ ಏನು ಹೇಳಬಹುದು ಎಂಬ ಕುತೂಹಲವಿತ್ತು. ಈಗ ಎಲ್ಲರೂ ಪ್ರಶಂಸೆ ನೀಡುತ್ತಿದ್ದಾರೆ. ಒಳ್ಳೆಯ ಕಥೆ ಮಾಡಿಕೊಂಡಿರುವ ನಿರ್ದೇಶಕ ಜಡೇಶ್ ಕೆ ಹಂಪಿ ಅವರಿಗೆ ಹಾಗೂ ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣ ಮಾಡಿರುವ ನಿರ್ಮಾಪಕರಿಗೆ ಅಭಿನಂದನೆ ಎಂದರು

ನಾಯಕಿ ರಚಿತರಾಮ್ ಮಾತನಾಡಿ ಸ್ವಾಮಿ ಛಾಯಾಗ್ರಹಣ, ಯೋಗರಾಜ್ ಭಟ್ ಸಾಹಿತ್ಯ, ಅಜನೀಶ್ ಲೋಕನಾಥ್ ಸಂಗೀತ ಹಾಗು ವಿಜಯ್ ಪ್ರಕಾಶ್ ಗಾಯನ ಎಲ್ಲವೂ ಚೆನ್ನಾಗಿದೆ. ಇನ್ನೂ, ವಿಜಯ್ ರಾಚಯ್ಯ ಪಾತ್ರದಲ್ಲಿ, ನಿಂಗವ್ವ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇವೆ. ಹಾಡಲ್ಲಿ ನಮ್ಮಿಬ್ಬರ ಅಭಿನಯಕ್ಕೆ ಎಲ್ಲರೂ ನೀಡುತ್ತಿರುವ ಮೆಚ್ಚುಗೆಗೆ ಮನ ತುಂಬಿ ಬಂದಿದೆ ಎಂದು ಹೇಳಿದರು

ನಿರ್ದೇಶಕ ಜಡೇಶ್ ಕೆ ಹಂಪಿ ಮಾತನಾಡಿ ವಿಜಿ ಸರ್ ಹಾಗು ಯೋಗರಾಜ್ ಭಟ್ ಕಾಂಬಿನೇಶನ್ ನಲ್ಲಿ ಬಂದಿರುವ ಎಲ್ಲಾ ಹಾಡುಗಳು ಸೂಪರ್ ಹಿಟ್ ಆಗಿದೆ. ಈಗ ಆ ಸಾಲಿಗೆ “ನಿಂಗವ್ವ” ಕೂಡ ಸೇರಲಿದೆ. ನನ್ನ ಹಿಂದಿನ ಎರಡು ಚಿತ್ರಗಳಿಗೂ ಸಂಗೀತ ಸಂಯೋಜಿಸಿದ್ದ ಅಜನೀಶ್ ಅವರೆ ಈ ಚಿತ್ರಕ್ಕೂ ಸಂಗೀತ ನೀಡಿದ್ದಾರೆ. ವಿಜಯ್ ಪ್ರಕಾಶ್ ಹಾಗೂ ಅನನ್ಯ ಭಟ್ ಸೊಗಸಾಗಿ ಹಾಡಿದ್ದಾರೆ. ನಿರ್ಮಾಪಕರು ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣ ಮಾಡಿದ್ದಾರೆ. ಎಂದರು

ನಿರ್ಮಾಪಕ ಕೆ.ವಿ.ಸತ್ಯಪ್ರಕಾಶ್ ಮಾತನಾಡಿ ಜಡೇಶ್ ಮೊದಲು ಕಥೆ ಹೇಳಿದಾಗ ಸದ್ಯಕ್ಕೆ ಸಿನಿಮಾ ಮಾಡುವುದಿಲ್ಲ ಎಂದು ಹೇಳಿದ್ದೆ. ಆದರೆ ಅವರು ನಿರ್ಮಾಣ ಮಾಡುವವರೆಗೂ ಬಿಡಲಿಲ್ಲ. ಮಗ ಹೇಮಂತ್ ಗೌಡ ಈ ಚಿತ್ರದ ನಿರ್ಮಾಪಕರು. ನಾನು ಅವರ ಜೊತೆ ಇದ್ದೀನಿ. ಜನವರಿ 23 ರಂದು ತೆರೆಗೆ ಬರುತ್ತಿರುವ ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪೆÇ್ರೀತ್ಸಾಹವಿರಲಿ ಎಂದು ಹೇಳಿದರು

ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್, ಗಾಯಕ ವಿಜಯ ಪ್ರಕಾಶ್, ಸಂಭಾಷಣೆ ಬರೆದಿರುವ ಮಾಸ್ತಿ, ಶ್ರೀಕಾಂತ್, ಛಾಯಾಗ್ರಾಹಕ ಸ್ವಾಮಿ ಜೆ ಗೌಡ, ಸಿ.ಆರ್ ಬಾಬಿ ಹಾಗೂ ಆನಂದ್ ಆಡಿಯೋ ಶ್ಯಾಮ್ ಮಾಹಿತಿ ಹಂಚಿಕೊಂಡರು

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin