ಡಿಸೆಂಬರ್ 15 ರಂದು “45” ಚಿತ್ರದ ಟ್ರೈಲರ್ ಬಿಡುಗಡೆ” ಹಲವು ವಿಶೇಷತೆಗಳಿಗೆ ಸಾಕ್ಷಿ - CineNewsKannada.com

ಡಿಸೆಂಬರ್ 15 ರಂದು “45” ಚಿತ್ರದ ಟ್ರೈಲರ್ ಬಿಡುಗಡೆ” ಹಲವು ವಿಶೇಷತೆಗಳಿಗೆ ಸಾಕ್ಷಿ

ಕನ್ನಡ ಚಿತ್ರರಂಗದಲ್ಲಿ ಸದಭಿರುಚಿಯ ನಿರ್ಮಾಪಕ ಎಂದೇ ಗುರುತಿಸಿಕೊಂಡಿರುವ ನಿರ್ಮಾಪಕ ರಮೇಶ್ ರೆಡ್ಡಿ ಮತ್ತು ಸಂಗೀತ ಮಾಂತ್ರಿಕ ಅರ್ಜುನ್ ಜನ್ಯ ಕಾಂಬಿನೇಷನ್‍ನಲ್ಲಿ ಮೂಡಿಬಂದಿರುವ ಬಹುತಾರಾಗಣ ಮತ್ತು ಬಹುನಿರೀಕ್ಷೆಯ ಚಿತ್ರ “45” ಡಿಸೆಂಬರ್ 25 ರಂದು ರಾಜ್ಯಾದ್ಯಂತ ತೆರೆಗೆ ಬರಲು ಸಜ್ಜಾಗಿದೆ. ಈ ನಡುವೆ ಇದೇ ತಿಂಗಳ 15 ರಂದು ಬೆಂಗಳೂರು ಸೇರಿದಂತೆ ರಾಜ್ಯದ 7 ಕಡೆ ಟ್ರೈಲರ್ ಬಿಡುಗಡೆ ನೇರ ಪ್ರಸಾರ ವ್ಯವಸ್ಥೆ ಮಾಡಲಾಗಿದೆ.

ಡಿಸೆಂಬರ್ 15 ರಂದು ಬೆಂಗಳೂರಿನ ವಿದ್ಯಾಪೀಠದ ಬಳಿಯಿರುವ ಕೆಂಪೇಗೌಡ ಮೈದಾನದಲ್ಲಿ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ನಡೆಯಲಿದ್ದು ಈ ಕಾರ್ಯಕ್ರಮವನ್ನು ಮೈಸೂರು, ಮಂಗಳೂರು, ತುಮಕೂರು, ದಾವಣಗೆರೆ, ಶಿವಮೊಗ್ಗ, ಹೊಸಪೇಟೆ, ಹುಬ್ಬಳ್ಳಿ ಚಿತ್ರಮಂದಿರಗಳಲ್ಲಿ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿದೆ. ಈ ಮೂಲಕ ಕನ್ನಡದಲ್ಲಿ ಹೊಸತನಕ್ಕೆ ಮುನ್ನುಡಿ ಬರೆದಿದೆ

ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮೊದಲ ನಿರ್ದೇಶನದ ಹಾಗೂ ರಮೇಶ್ ರೆಡ್ಡಿ ನಿರ್ಮಾಣ ಮಾಡಿರುವ “45” ಚಿತ್ರ ಬಹುಭಾಷೆಯಲ್ಲಿ ಡಿಸೆಂಬರ್ 25 ರಂದು ತೆರೆಗೆ ಬರಲಿದೆ

ನಿರ್ದೇಶಕ ಅರ್ಜುನ್ ಜನ್ಯ ಮಾತನಾಡಿ ಅಭಿಮಾನಿಗಳಿಗೆ ಆಯಾ ಜಿಲ್ಲೆಗಳಲ್ಲಿ ಪಾಸ್ ವ್ಯವಸ್ಥೆ ಮಾಡಲಾಗಿದ್ದು, ಉಚಿತ ಪ್ರವೇಶವಿರುತ್ತದೆ. ಏಕಕಾಲಕ್ಕೆ ಏಳು ಊರುಗಳಲ್ಲೂ ಟ್ರೇಲರ್ ಅನಾವರಣವಾಗಲಿದೆ. ಟ್ರೇಲರ್ ವೀಕ್ಷಣೆಯ ನಂತರ ಅಭಿಮಾನಿಗಳನ್ನುದ್ದೇಶಿಸಿ ಚಿತ್ರದ ಮೂವರು ನಾಯಕರು ಮಾತನಾಡಲಿದ್ದಾರೆ. ಇಲ್ಲಿಯವರೆಗೂ ನಮಗೆ ತಿಳಿದ ಹಾಗೆ ಯಾರು ಈ ಪ್ರಯತ್ನ ಮಾಡಿಲ್ಲ. ಇದೇ ಮೊದಲು ಎನ್ನಬಹುದು. ಇಷ್ಟೇ ಅಲ್ಲದೆ ಟ್ರೇಲರ್ ಬಿಡುಗಡೆ ದಿನ ಮತ್ತೊಂದು ವಿಶೇಷ ಕೂಡ ಇರಲಿದೆ. ಅದು ಏನೆಂದು ಎಲ್ಲರಿಗೂ ಆ ದಿನವೇ ತಿಳಿಯುತ್ತದೆ. ಡಿಸೆಂಬರ್ 15ರ ನಂತರ ಚಿತ್ರತಂಡ ಪ್ರಚಾರ ಕಾರ್ಯದ ನಿಮಿತ್ತವಾಗಿ ಬೇರೆ ರಾಜ್ಯಗಳಿಗೆ ಭೇಟಿ ನೀಡಲಿದೆ ಎಂದು ತಿಳಿಸಿದರು.

ನಿರ್ಮಾಪಕ ರಮೇಶ್ ರೆಡ್ಡಿ ಮಾತನಾಡಿ ಭಾರತದ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಚಿತ್ರವನ್ನು ನಿರ್ಮಿಸಿರುವ ಹೆಮ್ಮೆ ಇದೆ. ಅದನ್ನು ಜನರು ಮೆಚ್ಚಿಕೊಳ್ಳುತ್ತಾರೆ ಎಂಬ ಭರವಸೆಯೂ ಇದೆ. ಡಿಸೆಂಬರ್ 15 ರ ಟ್ರೇಲರ್ ಬಿಡುಗಡೆ ಸಮಾರಂಭ ವಿಭಿನ್ನವಾಗಿ ನಡೆಯಲಿದೆ. ಚಿತ್ರದ ಆರಂಭದಿಂದಲೂ ತಾವು ನೀಡುತ್ತಿರುವ ಪೆÇ್ರೀತ್ಸಾಹ ಹಾಗೆ ಮುಂದುವರೆಯಲಿ ಎಂದರು

ಈಗಲ್ ಮೀಡಿಯಾ ನವರಸನ್ ಮಾತನಾಡಿ ಕರ್ನಾಟಕದ ಪ್ರಮುಖ ಏಳು ಊರುಗಳ ಚಿತ್ರಮಂದಿರದಲ್ಲಿ ಕ್ಯೂಬ್ ಬಳಸಿ ಪ್ರದರ್ಶಿಸಲಾಗುತ್ತಿದೆ. ಇದಕ್ಕಾಗಿ ಆ ಸಂಸ್ಥೆಯನ್ನು ಸಂಪರ್ಕಿಸಲಾಗಿದೆ ಎಂಟು ಕಡೆ ಮಾಡಬಹುದು ಎಂದರು. ನಿರ್ಮಾಪಕರು ಎಂಟು ಕಡೆ ಬೇಡ. ಏಳು ಊರುಗಳಲ್ಲಿ ಮಾಡೋಣ. ಏಳು ನನ್ನ ಅದೃಷ್ಟದ ಸಂಖ್ಯೆ ಎಂದರು. ಇಡೀ ಭಾರತದಲ್ಲೇ ಇದು ಮೊದಲ ಪ್ರಯತ್ನ ಎನ್ನಬಹುದು ಎಂದು ಹೇಳಿದರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin