The trailer of the film "Prabhutva" which conveys the importance of voting, is highly appreciated

ಮತದಾನದ ಮಹತ್ವ ಸಾರುವ “ಪ್ರಭುತ್ವ” ಚಿತ್ರದ ಟ್ರೇಲರ್ ಗೆ ಭಾರಿ ಮೆಚ್ಚುಗೆ - CineNewsKannada.com

ಮತದಾನದ ಮಹತ್ವ ಸಾರುವ “ಪ್ರಭುತ್ವ” ಚಿತ್ರದ ಟ್ರೇಲರ್ ಗೆ ಭಾರಿ ಮೆಚ್ಚುಗೆ
  • ಚೇತನ್ ಚಂದ್ರ ನಾಯಕರಾಗಿ ನಟಿಸಿರುವ ಈ ಚಿತ್ರ ಸದ್ಯದಲ್ಲೇ ತೆರಗೆ .ಇತ್ತೀಚೆಗೆ ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಸಿನಿಮಾಗಳೇ ಹೆಚ್ಚು ಗೆಲುತ್ತಿದೆ. ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಉತ್ತಮ ಕಥಾಹಂದರ ಹೊಂದಿರುವ “ಪ್ರಭುತ್ವ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಚೇತನ್ ಚಂದ್ರ ನಾಯಕರಾಗಿ ನಟಿಸಿರುವ ಈ ಚಿತ್ರದ ಟ್ರೇಲರನ್ನು ರಾಜಕೀಯ ಮುಖಂಡರಾದ ರವೀಂದ್ರ ಅನಾವರಣ ಮಾಡಿದರು.

ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಈ ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.ಪ್ರತಿಯೊಬ್ಬ ಪ್ರಜೆ ಈ ಚಿತ್ರವನ್ನು ನೋಡಬೇಕು. ಮತದಾನ ಅಮೂಲ್ಯವಾದ್ದದ್ದು. ಹಾಗಾಗಿ ಮತದಾನವನ್ನು ಮಾರಾಟ ಮಾಡಿಕೊಳ್ಳಬಾರದು. ಈ ರೀತಿ ಮತದಾನದ ಮಹತ್ವ ಸಾರುವ ಈ ಸಿನಿಮಾಗೆ ನಾನೇ ಕಥೆ ಬರೆದಿದ್ದೇನೆ. ನನ್ನ ಮಗ ರವಿರಾಜ್ ಎಸ್ ಕುಮಾರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ಮೇಘಡಹಳ್ಳಿ ಡಾ.ಶಿವಕುಮಾರ್.

ಟ್ರೇಲರ್ ಬಿಡುಗಡೆಯಾಗಿದೆ. ಸದ್ಯದಲ್ಲೇ ಚಿತ್ರ ಕೂಡ ತೆರೆಗೆ ಬರಲಿದೆ. ಚುನಾವಣೆ ಮುಂಚೆಯೇ ಚಿತ್ರವನ್ನು ಬಿಡುಗಡೆ ‌ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ನಿರ್ಮಾಪಕ ರವಿರಾಜ್ ಎಸ್ ಕುಮಾರ್ ತಿಳಿಸಿದರು. ಚಿತ್ರದ ಕಥಾಹಂದರದ ಬಗ್ಗೆ ಪರಿಚಯ ನೀಡಿದ್ದ, ನಿರ್ದೇಶಕ ಆರ್ ರಂಗನಾಥ್, ಚಿತ್ರ ಉತ್ತಮವಾಗಿ ಮೂಡಿಬರಲು ಸಹಕಾರ ನೀಡಿದ ತಮ್ಮ ತಂಡಕ್ಕೆ ಧನ್ಯವಾದ ಹೇಳಿದರು.

ಇದು ನನ್ನ ಹನ್ನೆರಡನೇ ಸಿನಿಮಾ. ಮೇಘಡಹಳ್ಳಿ ಡಾ.ಶಿವಕುಮಾರ್ ಅವರು ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಒಳ್ಳೆಯ ಕಥೆ ಬರೆದಿದ್ದಾರೆ. ರಂಗನಾಥ್ ಅಷ್ಟೇ ಚೆನ್ನಾಗಿ ನಿರ್ದೇಶನ ಮಾಡಿದ್ದಾರೆ. ತಂತ್ರಜ್ಞರ ಕಾರ್ಯವೈಖರಿ ಹಾಗೂ ಎಲ್ಲಾ ಕಲಾವಿದರ ಅಭಿನಯ ಅದ್ಭುತವಾಗಿದೆ ಎಂದರು ನಾಯಕ ಚೇತನ್ ಚಂದ್ರ.

ಅನು ಎಂಬ ಪಾತ್ರದಲ್ಲಿ ನಟಿಸಿರುವುದಾಗಿ ನಾಯಕಿ ಪಾವನ ತಿಳಿಸಿದರು. ಚಿತ್ರದಲ್ಲಿ ಅಭಿನಯಿಸಿರುವ ಅರವಿಂದ್ ರಾವ್, ಹರೀಶ್ ರಾಯ್, ಆದಿ ಲೋಕೇಶ್, ವಿಜಯ್ ಚೆಂಡೂರ್, ವೀಣಾ ಸುಂದರ್, ಅನಿತಾ‌ ಭಟ್ ಮುಂತಾದ ಕಲಾವಿದರು ಹಾಗೂ ಸಂಭಾಷಣೆ ಬರೆದಿರುವ ವಿನಯ್ “ಪ್ರಭುತ್ವ” ಚಿತ್ರದ ಕುರಿತು ‌ಮಾತನಾಡಿದರು.

ಎಮಿಲ್ ಸಂಗೀತ ನಿರ್ದೇಶನ, ಕೆ.ಎಸ್ ಚಂದ್ರಶೇಖರ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಅವರ ಸಂಕಲನವಿರುವ ಈ ಚಿತ್ರದ ತಾರಾಬಳಗದಲ್ಲಿ ಚೇತನ್ ಚಂದ್ರ, ಪಾವನ, ನಾಸರ್, ಶರತ್ ಲೋಹಿತಾಶ್ವ, ಆದಿ ಲೋಕೇಶ್, ಅರವಿಂದ್ ರಾವ್, ಹರೀಶ್ ರಾಯ್, ವಿಜಯ್ ಚೆಂಡೂರ್, ವೀಣಾ ಸುಂದರ್, ರಾಜೇಶ್ ನಟರಂಗ, ಅನಿತಾ ಭಟ್ ಮುಂತಾದವರಿದ್ದಾರೆ.

ಪೂರ್ತಿಯಾಗಿ ಓದಿ

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin