The village-forest story "Maddane" is gearing up for shooting in Chikkamagalur

ಹಳ್ಳಿ-ಕಾಡಿನ ನಡುವಿನ ಕಥೆಯ “ಮದ್ದಾನೆ”ಗೆ ಚಿಕ್ಕಮಗಳೂರಿನಲ್ಲಿ ಚಿತ್ರೀಕರಣಕ್ಕೆ ಸಿದ್ದತೆ - CineNewsKannada.com

ಹಳ್ಳಿ-ಕಾಡಿನ ನಡುವಿನ ಕಥೆಯ “ಮದ್ದಾನೆ”ಗೆ ಚಿಕ್ಕಮಗಳೂರಿನಲ್ಲಿ ಚಿತ್ರೀಕರಣಕ್ಕೆ ಸಿದ್ದತೆ

ಕನ್ನಡ ಚಿತ್ರರಂಗಕ್ಕೆ ಹೊಸ ಹೊಸ ಪ್ರತಿಭೆಗಳು ಆಗಮಿಸುತ್ತಿದ್ದಾರೆ.ಅವರಲ್ಲಿ ಬಹುತೇಕರು ಚಿತ್ರರಂಗದಲ್ಲಿ ನೆಲೆ ಕಂಡುಕೊಳ್ಳುವ ಉದ್ದೇಶದಿಂದ ಬಂದವರು. ಇದೀಗ ಆ ಸಾಲಿಗೆ ಮತ್ತೊಂದು ತಂಡ ಹೊಸ ಸೇರ್ಪಡೆ. ಹಳ್ಳಿ ಮತ್ತು ಕಾಡಿನ ನಡುವಿನ ಕಥೆಯ ತಿರುಳು ಹೊಂದಿರುವ”ಮದ್ದಾನೆ”ಗೆ ಚಿಕ್ಕಮಗಳೂರಿನಲ್ಲಿ ಬಹುತೇಕ ಚಿತ್ರೀಕರಣ ಮಾಡಲು ಸಿದ್ದತೆ ಮಾಡಿಕೊಳ್ಳಲಾಗಿದೆ.

ರಂಜನ ಎಂ ಕುಮಾವತ್ ಬಂಡವಾಳ ಹೂಡಿ ಸತೀಶ್ ಕುಮಾರ್ ಎಸ್ ಚೊಚ್ಚಲ ನಿರ್ದೇಶನದ “ಮದ್ದಾನೆ” ಚಿತ್ರದಲ್ಲಿ ನಿಹಾಲ್ ರಾಜ್ ನಾಯಕನಾಗಿ ನಟಿಸುತ್ತಿದ್ದಾರೆ. ಚಿತ್ರದ ಮುಹೂರ್ತ ನಡೆಯಿತು. ಈ ವೇಳೆ ನಿರ್ಮಾಪಕರಾದ ಕೆ.ಮಂಜು , ರಮೇಶ್ ಯಾದವ್ ಹಾಗೂ ಕಡ್ಡಿಪುಡಿ ಚಂದ್ರು ಮತ್ತಿತರರು ಆಗಮಿಸಿ ಚಿತ್ರಕ್ಕೆ ಮತ್ತು ತಂಡಕ್ಕೆ ಶುಭಹಾರೈಸಿದರು.

ಈ ವೇಳೆ ಮಾತಿಗಿಳಿದ ನಿರ್ದೇಶಕ ಸತೀಶ್ ಕುಮಾರ್, “ಮದ್ದಾನೆ” ಮೊದಲ ನಿರ್ದೇಶನದ ಚಿತ್ರ.ಹಳ್ಳಿ ಹಾಗೂ ಕಾಡಿನ ನಡುವೆ ನಡೆಯುವ ಕಥೆ. ಹೆಚ್ಚಿನ ಭಾಗದ ಚಿತ್ರೀಕರಣ ಚಿಕ್ಕಮಗಳೂರಿನಲ್ಲೇ ನಡೆಯುತ್ತದೆ ರಂಜನ ಎಂ ಕುಮಾವತ್ ಚಿತ್ರಕ್ಕೆ ಬಂಡವಾಳು ಹೂಡಿದ್ದಾರೆ. ವಿನೋದ್ ಭಾರತಿ ಛಾಯಾಗ್ರಹಣ, ಸ್ವಾಮಿನಾಥನ್ ಸಂಗೀತ ನಿರ್ದೇಶನ, ಪುನೀತ್ ಆರ್ಯ ಸಾಹಿತ್ಯ ಹಾಗೂ ಡಿಫರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಚಿತ್ರದಲ್ಲಿ ಅರವಿಂದ್ ರಾವ್ ನಟಿಸುತ್ತಿದ್ದಾರೆ. ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ. ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ. ಮೂಲತಃ ಮಾರ್ಷಲ್ ಆಟ್ರ್ಸ್ ಕಲಾವಿದನಾಗಿರುವ ಈವರೆಗೂ ಸಾಕಷ್ಟು ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಭಾಗವಹಿಸಿ ಪದಕ ಪಡೆದಿದ್ದೇನೆ. ಬೆಂಗಳೂರಿನ ಕೆಲವು ಕಡೆ ಮಾರ್ಷಲ್ ಆಟ್ರ್ಸ್ ತರಭೇತಿ ಶಾಲೆಗಳನ್ನು ನಡೆಸುತ್ತಿದ್ದೇನೆ. ಮೂವತ್ತು ವರ್ಷಗಳಿಂದ ಕನ್ನಡ ಚಿತ್ರಗಳನ್ನೇ ನೋಡಿಕೊಂಡು ಬರುತ್ತಿರುವ ಪ್ರೇಕ್ಷಕ ನಾನು. ಸಿನಿಮಾ ನಿರ್ದೇಶನ ನನ್ನ ಕನಸು. ನಿರ್ದೇಶನದ ಬಗ್ಗೆಯೂ ಓದಿಕೊಂಡು ಬಂದು ಈಗ ಮೊದಲ ನಿರ್ದೇಶನದ ಚಿತ್ರ ಆರಂಭಿಸಿದ್ದೇನೆ ಎಂದು ಹೇಳಿದರು

ನಾಯಕ ನಿಹಾಲ್ ರಾಜ್ ಮಾತನಾಡಿ ಮೂಲತಃ ರಂಗಭೂಮಿ ಕಲಾವಿದ. “ರಾಣಾ” ಹಾಗೂ “ವಿಷ್ಣುಪ್ರಿಯ” ಚಿತ್ರಗಳಲ್ಲಿ ನಟಿಸಿದ್ದೇನೆ ಮೊದಲ ಬಾರಿಗೆ ಅವಕಾಶ ಮಾಡಿಕೊಟ್ಟ ಇಡೀ ತಂಡಕ್ಕೆ ಕೃತಜ್ಞತೆ ಎಂದರು

ಮೊದಲ ನಿರ್ಮಾಣದ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕಿ ರಂಜನ ಎಂ ಕುಮಾವತ್. ಸಂಗೀತ ನಿರ್ದೇಶಕ ಸ್ವಾಮಿನಾಥನ್, ಛಾಯಾಗ್ರಾಹಕ ವಿನೋದ್ ಭಾರತಿ, ಗೀತರಚನೆಕಾರ ಪುನೀತ್ ಆರ್ಯ, ಸಾಹಸ ನಿರ್ದೇಶಕ ಡಿಫರೆಂಟ್ ಡ್ಯಾನಿ ಹಾಗೂ ನಟ ಅರವಿಂದ್ ರಾವ್ ತಮ್ಮ ಪಾತ್ರದ ಕುರಿತು ಮಾಹಿತಿ ಹಂಚಿಕೊಂಡರು

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin