Thriller movie "Jungle Mangal" to release on July 4th

ಜುಲೈ 4 ರಂದು ಥ್ರಿಲ್ಲರ್ ಸಿನಿಮಾ “ಜಂಗಲ್ ಮಂಗಲ್” ತೆರೆಗೆ - CineNewsKannada.com

ಜುಲೈ 4 ರಂದು ಥ್ರಿಲ್ಲರ್ ಸಿನಿಮಾ “ಜಂಗಲ್ ಮಂಗಲ್” ತೆರೆಗೆ

ಸ್ಯಾಂಡಲ್‍ವುಡ್‍ನಲ್ಲಿ ಭಿನ್ನ ವಿಭಿನ್ನ ಕಂಟೆಂಟಿಗೆ ಬೆಂಬಲ ಸಿಕ್ಕೇ ಸಿಗುತ್ತೆ. ಹಾಗೆ ಖ್ಯಾತನಾಮ ನಿರ್ದೇಶಕರಿಂದ ಮೆಚ್ಚುಗೆ ಪಡೆದ ಚಿತ್ರವೇ “ಜಂಗಲ್ ಮಂಗಲ್”. ಇನ್ನೇನು ಇದೇ ಜುಲೈ 4ರಂದು ರಾಜ್ಯಾದ್ಯಂತ ಈ ಸಿನಿಮಾ ತೆರೆಗೆ ಬರಲಿದೆ. ಲೈಟ್ ಹಾರ್ಟೆಡ್ ಥ್ರಿಲ್ಲರ್ ಶೈಲಿಯಲ್ಲಿ “ಜಂಗಲ್ ಮಂಗಲ್” ಸಿನಿಮಾವನ್ನು ನಿರ್ದೇಶಕ ರಕ್ಷಿತ್ ಕುಮಾರ್ ಕಟ್ಟಿಕೊಟ್ಟಿದ್ದಾರೆ.

ಕಳೆದ ಎಂಟತ್ತು ವರ್ಷಗಳಿಂದ ಸಿನಿಮಾ, ಸೀರಿಯಲ್ ಹೀಗೆ ಬಣ್ಣದ ಲೋಕದಲ್ಲಿ ಸಕ್ರಿಯರಾಗಿ ಇದೀಗ ಸ್ವತಂತ್ರ ನಿರ್ದೇಶಕರಾಗಿ ಆಗಮಿಸುತ್ತಿದ್ದು ಜಂಗಲ್ ಮಂಗಲ್ ಯುವ ಜೋಡಿಯ ಸುತ್ತ ಒಂದು ದಿನದ ಅವಧಿಯಲ್ಲಿ ನಡೆಯುವ ಲೈಟ್ ಹಾರ್ಟೆಡ್ ಥ್ರಿಲ್ಲರ್ ಚಿತ್ರವಿದು. ಯಾವುದೋ ಒಂದು ಕಾರಣಕ್ಕೆ ಕಾಡಿಗೆ ಹೋಗುವ ಜೋಡಿಗೆ, ಎದುರಾಗುವ ಸಮಸ್ಯೆಗಳೇ ಈ ಚಿತ್ರದ ಹೈಲೈಟ್. ಇನ್ನೊಂದು ಮಜವೆಂದರೆ ಇದು ನೈಜ ಪಾತ್ರಗಳನ್ನು ಆಧರಿಸಿ ಜೋಡಿಸಿದ ಕಾಲ್ಪನಿಕ ಕಥೆ ಎಂದಿದ್ದಾರೆ

ದುಷ್ಟಶಕ್ತಿಯೊಂದನ್ನು ನಾಶ ಮಾಡುವ ತಾಕತ್ತು ಪ್ರಕೃತಿಗಿದೆ ಅನ್ನೋದನ್ನ ಸಿನಿಮಾ ಮೂಲಕ ಹೇಳುವ ಪ್ರಯತ್ನ ಚಿತ್ರದಲ್ಲಾಗಿದೆ ಎನ್ನುವ ನಿರ್ದೇಶಕರು, “ಇದರಲ್ಲಿ ಬರುವ ಪಾತ್ರಗಳು ಮತ್ತು ಘಟನೆಗಳು ನೈಜ. ಅದನ್ನೆಲ್ಲ ಒಂದೆಡೆ ಸೇರಿ ಮಾಡಿದ ಕಥೆ ಕಾಲ್ಪನಿಕ. ತೆರೆ ಮೇಲೆ ಕಾಣುವ ಪಾತ್ರಗಳು ಕರಾವಳಿ ಭಾಗಕ್ಕೆ ಹತ್ತಿರವಾದವು. ಎಷ್ಟೋ ಯುವ ಜೋಡಿಗಳು ಕಾಡಿನಲ್ಲಿ ಹಳ್ಳಿಗರ ಕೈಗೆ ಸಿಕ್ಕಿಬಿದ್ದ ಉದಾಹರಣೆಗಳಿವೆ. ಉತ್ತರ ಭಾರತದ ಕಡೆಗೆ ಹೀಗೆ ಸಿಕ್ಕವರನ್ನು “ಜಂಗಲ್ ಮೇ ಮಂಗಲ್” ಅಂತ ಕರೀತಾರೆ” ಎನ್ನುತ್ತಾರೆ.

ಎಂಟು ವರ್ಷದ ಸಿನಿಮಾ..

ಸಿನಿಮಾದಲ್ಲಿ ನಿರ್ದೇಶಕನಾಗಬೇಕು ಅನ್ನೋ ಕಾರಣಕ್ಕೆ ನಾನು ಸುಚಿತ್ರ ಇನ್‍ಸ್ಟಿಟ್ಯೂಟ್‍ನಲ್ಲಿ ನಟನೆ ಕಲಿತೆ. ಅದಾದ ಮೇಲೆ ರಂಗಭೂಮಿಯಲ್ಲಿ ನಟನಾಗಿ ಸೆಟ್ ಪ್ರಾಪರ್ಟಿಯಲ್ಲಿಯೂ ಕೆಲಸ ಮಾಡಿದ್ದೇನೆ. ಅಲ್ಲಿಂದ ಸೀರಿಯಲ್‍ಗೆ ಬಂದೆ. ಸೀರಿಯಲ್‍ನಿಂದ ಸಿನಿಮಾಕ್ಕೆ ಬಂದು ಎಂಟು ವರ್ಷಗಳಾಗಿವೆ. ಒಂದಷ್ಟು ತುಳು, ಕನ್ನಡ ಸಿನಿಮಾಗಳಿಗೆ ಅಸಿಸ್ಟಂಟ್ ನಿರ್ದೇಶಕನಾಗಿ, ಕೋ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದೇನೆ. ಇದೀಗ “ಜಂಗಲ್ ಮಂಗಲ್” ಎಂಬುದು ನನ್ನ ಮೊದಲ ಸಿನಿಮಾ” ಎಂಬುದು ರಕ್ಷಿತ್ ಕುಮಾರ್ ಮಾತು.

ಕಥೆ ಬರೆದ ಬಳಿಕ ಕಲಾವಿದರ ಆಯ್ಕೆ..

ಕರಾವಳಿ ಸುತ್ತಮುತ್ತಲಿನ ಕಲಾವಿದರನ್ನೇ ನಾವಿಲ್ಲಿ ಬಳಸಿಕೊಂಡಿದ್ದೇವೆ. ಮೊದಲಿಗೆ ಕಥೆ ಬರೆದೇ, ಕಲಾವಿದರನ್ನು ನಾನು ಸೆಲೆಕ್ಟ್ ಮಾಡುತ್ತೇನೆ. ನನ್ನ ತಲೆಯಲ್ಲಿ ನಾನೇ ನೋಡಿದ ಒಂದಷ್ಟು ವ್ಯಕ್ತಿಗಳು, ವ್ಯಕ್ತಿತ್ವಗಳಿವೆ. ಅಂಥ ಪಾತ್ರಗಳನ್ನೇ ಈ ಸಿನಿಮಾದಲ್ಲಿ ಬಳಿಸಿಕೊಂಡಿದ್ದೇನೆ. ಯಶ್ ಶೆಟ್ಟಿ ನನಗೆ 10 ವರ್ಷಗಳಿಂದ ಗೊತ್ತು. ನಾಯಕನ ಪಾತ್ರಕ್ಕೆ ಅವರೇ ನನ್ನ ಮೊದಲ ಆಯ್ಕೆ ಆಗಿದ್ದರು. ಬಾಬು ಪಾತ್ರಕ್ಕೆ ಉಗ್ರಂ ಮಂಜು ಅವರೇ ಸೂಕ್ತ ಅನಿಸಿತು. ನಾಯಕಿ ಪಾತ್ರಕ್ಕೆ ಬೆಂಗಳೂರು ಮೂಲದ ನಟಿಯನ್ನು ಆಯ್ಕೆ ಮಾಡಿ ಅವರಿಂದ ನಟನೆ ತೆಗೆಸಿದ್ದೇವೆ” ಎಂದಿದ್ಧಾರೆ

ಹಳ್ಳಿಗರಿಂದಲೂ ಸಹಾಯ ಸಿಕ್ತು..

“ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದಲ್ಲಿ ನಮ್ಮ ಚಿತ್ರದ ಇಡೀ ಕಥೆ ನಡೆಯುತ್ತದೆ. ಅದೊಂದು ತುಂಬ ರಿಮೋಟ್ ಏರಿಯಾ. ಆ ಸ್ಥಳಕ್ಕೆ ಬೈಕ್ ಬಿಟ್ಟರೆ ಜೀಪ್ ಮಾತ್ರವೇ ಹೋಗುತ್ತೆ. 40 ಮನೆಗಳಷ್ಟೇ ಇವೆ. ಖುಷಿಯ ವಿಚಾರ ಏನೆಂದರೆ, ಹಳ್ಳಿಯಲ್ಲಿ ಸಿನಿಮಾದ ಶೂಟಿಂಗ್ ಆಗ್ತಿದೆ ಅನ್ನೋ ಕಾರಣಕ್ಕೆ ಆ ಹಳ್ಳಿಯ ಜೀಪ್ ಡೈವರ್‍ಗಳು ಫ್ರೀ ಇದ್ದಾಗ, ನಮಗೂ ಸಾಕಷ್ಟು ಸಹಾಯ ಮಾಡಿದ್ದಾರೆ.”

ಸಿಂಪಲ್ ಸುನಿ ಅವರ ಸಹಕಾರ ದೊಡ್ಡದು..

ನಮ್ಮ ಸಿನಿಮಾಕ್ಕೆ ಸಿಂಪಲ್ ಸುನಿ ಅವರ ಸಹಕಾರ ದೊಡ್ಡದು. ನಮ್ಮ ಚಿತ್ರ ನೋಡಿ ಮೆಚ್ಚಿಕೊಂಡಿದ್ದಷ್ಟೇ ಅಲ್ಲದೆ, “ನಮ್ಮ ಕಡೆಯಿಂದ ಏನಾಗಬೇಕು” ಅಂದ್ರು. ಆಗ ನಮ್ಮ ತಲೆಯಲ್ಲಿ ಬಂದಿದ್ದು ಏನೆಂದರೆ, ಪರಿಚಯಿಸಿದವರೆಲ್ಲ, ಇಂಡಸ್ಟ್ರಿಯಲ್ಲಿ ಒಳ್ಳೆಯ ಹೆಸರು ಮಾಡಿದ್ದಾರೆ. ನಮ್ಮ ತಂಡವನ್ನೂ ಅವರೇ ಪ್ರಸೆಂಟ್ ಮಾಡಲಿ ಎನ್ನುತ್ತ, ಬ್ಯಾನರ್‍ನಲ್ಲಿಯೇ ನಮ್ಮ ಸಿನಿಮಾ ಬರಬೇಕೆಂದು ಕೇಳಿಕೊಂಡೆವು. ಅದಕ್ಕೆ ಅಷ್ಟೇ ಖುಷಿಯಿಂದ ಒಪ್ಪಿದ್ದಾರೆ” ಎಂದು ಮಾಹಿತಿ ಹಂಚಿಕೊಂಡಿದ್ದಾರೆ

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin