ಟೈಗರ್ ವಿನೋದ್ ಪ್ರಭಾಕರ್ ಅಭಿನಯದ ‘ಬಲರಾಮನ ದಿನಗಳು’ ಚಿತ್ರೀಕರಣ ಪೂರ್ಣ
ಟೈಗರ್ ವಿನೋದ್ ಪ್ರಭಾಕರ್ ಅಭಿನಯದ “ಮಾದೇವ” ಚಿತ್ರ ಭರ್ಜರಿ ಯಶಸ್ಸು ಕಂಡಿದೆ. ಆ ಚಿತ್ರದ ನಂತರ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ “ಬಲರಾಮನ ದಿನಗಳು” ಚಿತ್ರ ಸಹ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಚಿತ್ರೀಕರಣ ಮುಕ್ತಾಯವಾಗಿದೆ.
ಬೆಂಗಳೂರು, ಮೈಸೂರು, ಶಿವಮೊಗ್ಗ, ಸಕಲೇಶಪುರ ಮುಂತಾದ ಕಡೆ 80 ದಿನಗಳ ಚಿತ್ರೀಕರಣ ನಡೆದಿದೆ. ಸದ್ಯದಲ್ಲೇ ಪೆÇೀಸ್ಟ್ ಪೆÇ್ರಡಕ್ಷನ್ ವರ್ಕ್ ಆರಂಭವಾಗಲಿದೆ.

ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಚೊಚ್ಚಲ ನಿರ್ಮಾಣದಲ್ಲಿ ಅದ್ದೂರಿಯಾಗಿ ಮೂಡಿಬರುತ್ತಿರುವ ಚಿತ್ರವನ್ನು “ಆ ದಿನಗಳು” ಖ್ಯಾತಿಯ ಕೆ.ಎಂ.ಚೈತನ್ಯ ನಿರ್ದೇಶಿಸುತ್ತಿದ್ದಾರೆ. ಟೈಗರ್ ವಿನೋದ್ ಪ್ರಭಾಕರ್ ಅವರಿಗೆ ನಾಯಕಿಯಾಗಿ ಪ್ರಿಯಾ ಆನಂದ್ ಅಭಿನಯಿಸುತ್ತಿದ್ದಾರೆ. ಹೆಸರಾಂತ ಕಲಾವಿದರಾದ ಅತುಲ್ ಕುಲಕರ್ಣಿ, ಆಶಿಶ್ ವಿದ್ಯಾರ್ಥಿ ಅವರಂತಹ ಅನುಭವಿ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. “
ಬಿಗ್ ಬಾಸ್” ಖ್ಯಾತಿಯ ವಿನಯ್ ಗೌಡ ಸಹ ಚಿತ್ರದಲ್ಲಿ ನಟಿಸಿದ್ದಾರೆ. ಕನ್ನಡ ಸೇರಿದಂತೆ ಅನೇಕ ಭಾಷೆಗಳಲ್ಲಿ ಅಭಿನಯಿಸಿರುವ ಖ್ಯಾತ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದು, ಸದ್ಯದಲ್ಲಿಯೇ ತಂಡದ ವಿವರ ನೀಡಲಿದೆ
1980ರ ಕಾಲಘಟ್ಟದಲ್ಲಿ ನಡೆಯುವ ಕಥಾಹಂದರ ಹೊಂದಿರುವ ಚಿತ್ರಕ್ಕೆ ಭಾರತದ ಹೆಸರಾಂತ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಸಂಗೀತ ನೀಡುತ್ತಿದ್ದಾರೆ. ಸಂತೋಷ್ ನಾರಾಯಣನ್ ಸಂಗೀತ ನೀಡುತ್ತಿರುವ ಮೊದಲ ಕನ್ನಡ ಚಿತ್ರವಾಗಿದೆ. ಹಿರಿಯ ಛಾಯಾಗ್ರಾಹಕ ಎಚ್.ಸಿ ವೇಣು “ಬಲರಾಮನ ದಿನಗಳು” ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದಾರೆ.

