“ದೂರ ತೀರ ಯಾನ”ದ ಶೀರ್ಷಿಕೆ ಗೀತೆ ಬಿಡುಗಡೆ; ಜುಲೈ 11 ಕ್ಕೆ ಚಿತ್ರ ತೆರೆಗೆ
ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಚಿತ್ರಗಳನ್ನು ನೀಡಿರುವ ದೇವರಾಜ್ ಆರ್. ನಿರ್ಮಾಣ ಹಾಗು ಮಂಸೋರೆ ನಿರ್ದೇಶನದಲ್ಲಿ ವಿಜಯ್ ಕೃಷ್ಣ – ಪ್ರಿಯಾಂಕ ಕುಮಾರ್ ನಾಯಕ – ನಾಯಕಿಯಾಗಿ ನಟಿಸಿರುವ “ದೂರ ತೀರ ಯಾನ” ಚಿತ್ರದ ಶೀರ್ಷಿಕೆ ಗೀತೆ ಇತ್ತೀಚೆಗೆ ಬಿಡುಗಡೆಯಾಗಿದ್ದು ಗಮನ ಸೆಳೆದಿದೆ

ಕಿರಣ್ ಕಾವೇರಪ್ಪ ಬರೆದು ಬಕ್ಕೇಶ್ ಹಾಗೂ ಕಾರ್ತಿಕ್ ಸಂಗೀತ ನೀಡಿದ್ದಾರೆ. ಬಕ್ಕೇಶ್ – ಇಶಾ ಸುಚಿ ಹಾಡಿರುವ ಶೀರ್ಷಿಕೆ ಗೀತೆಯನ್ನು ನಿರ್ಮಾಪಕ ದೇವರಾಜ್ ಪುತ್ರ ಜಯರಾಮ್ ಬಿಡುಗಡೆ ಮಾಡಿದರು. ಹೆಸರಾಂತ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಹಾಗೂ ನಟ ನವೀನ್ ಶಂಕರ್ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಎಂ.ಆರ್.ಟಿ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಈ ಹಾಡಿಗೆ ಪ್ರೇಕ್ಷಕರು ಫಿದಾ ಆಗಿದ್ದು, ಇಲ್ಲಿ ಮಾತ್ರವಲ್ಲದೆ ವಿದೇಶದಲ್ಲಿಯೂ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ..

ನಿರ್ದೇಶಕ ಮಂಸೋರೆ ಮಾತನಾಡಿ “ದೂರ ತೀರ ಯಾನ” ಬೆಂಗಳೂರಿನಿಂದ ಗೋವಾದವರೆಗೂ ನಡೆಯುವ ಪಯಣದ ಕಥೆ. ಇದು ಪ್ರೇಮ ಕಥೆಯಲ್ಲ. ಪ್ರೇಮದ ಕಥೆ. ಜುಲೈ 11 ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ.ಲಾಂಗ್ ಡ್ರೈವ್ ಮಾಡುವ ಪಯಣಿಗರಿಗೆ ಸಿಕ್ಕ ಸುಮಧುರ ಗೀತೆ ಕೂಡ. ಚಿತ್ರದಲ್ಲಿ ಆರು ಹಾಡು ಹಾಗೂ ಎರಡು ಬಿಟ್ಸ್ ಗಳಿವೆ.ಎಂ.ಆರ್.ಟಿ ಮ್ಯೂಸಿಕ್ ಮೂಲಕ ಹಾಡು ಬಿಡುಗಡೆಯಾಗಿದೆ. ಚಿತ್ರ ಉತ್ತಮವಾಗಿ ಮೂಡಿಬರಲು ನಿರ್ಮಾಪಕ ದೇವರಾಜ್ ಸಹಕಾರ ಅಪಾರವಾಗಿದೆ. ಎಂದಿನಂತೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.
ನಿರ್ಮಾಪಕ ದೇವರಾಜ್ ಮಾತನಾಡಿ ಚಿತ್ರತಂಡದ ಸಹಕಾರದಿಂದ ಒಂದೊಳ್ಳೆ ಸಿನಿಮಾ ನಿರ್ಮಾಣವಾಗಿದೆ. ಜುಲೈ 11ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ನೋಡಿ ಹಾರೈಸಿ ಎಂದು ಕೇಳಿಕೊಂಡರು.
ನಾಯಕ ವಿಜಯ್ ಕೃಷ್ಣ ಮಾತನಾಡಿ ಟೈಟಲ್ ಸಾಂಗ್ ನಲ್ಲಿ ಸಖತ್ ಎನರ್ಜಿ ಇದೆ. ಅದೇ ಎನರ್ಜಿ ಯಲ್ಲಿ ಚಿತ್ರತಂಡ ಕೆಲಸ ಮಾಡಿದೆ.ಹಾಡು ಬಿಡುಗಡೆ ಸಮಾರಂಭ. ಹಾಗಾಗಿ ಅದರ ಬಗ್ಗೆ ಹೇಳಿದ್ದೀನಿ. ಪಾತ್ರದ ಕುರಿತು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದು ಹೇಳಿದರು

ನಾಯಕಿ ಪ್ರಿಯಾಂಕ ಕುಮಾರ್ ಮಾತನಾಡಿ ಇದು ನನ್ನ ಇಷ್ಟದ ಗೀತೆ ಕೂಡ ಎಂದು ತಿಳಿಸಿದರು.
ಸಂಗೀತ ನಿರ್ದೇಶಕ ಹಾಗೂ ಗಾಯಕ ರೋಣದ ಬಕ್ಕೇಶ್ ಮಾತನಾಡಿ “ದೂರ ತೀರ ಯಾನ” ದಲ್ಲಿ ಆರು ಹಾಡುಗಳು ಹಾಗೂ ಎರಡು ಮ್ಯೂಸಿಕಲ್ ಬಿಟ್ಸ್ ಇದೆ. ಶೀರ್ಷಿಕೆ ಗೀತೆ ಹಾಡಿಗೆ ಕಿರಣ್ ಕಾವೇರಪ್ಪ ಸಾಹಿತ್ಯ ಬರೆದಿದ್ದು, ತಾವು ಹಾಗೂ ಕಾರ್ತಿಕ್ ಸಂಗೀತ ನೀಡಿದ್ದೇವೆ. ತಾವು ಹಾಗೂ ಇಶಾ ಸುಚಿ ಹಾಡಿದ್ದೇವೆ ಎಂದು ಹೇಳಿದರು
ಎಂ ಆರ್ ಟಿ ಮ್ಯೂಸಿಕ್ ನ ಆನಂದ್, ಸಂಗೀತ ನಿರ್ದೇಶಕ ಕಾರ್ತಿಕ್, ಹಾಡು ಬರೆದಿರುವ ಕಿರಣ್ ಕಾವೇರಪ್ಪ, ಗಾಯಕಿ ಇಶಾ ಸುಚಿ ಮುಂತಾದವರು “ದೂರ ತೀರ ಯಾನ”ದ ಶೀರ್ಷಿಕೆ ಗೀತೆ ಬಗ್ಗೆ ಮಾತನಾಡಿದರು.


