Title track of Dolly Dhananjaya starrer Hoysala released

ಡಾಲಿ ಧನಂಜಯ ಅಭಿನಯದ ಹೊಯ್ಸಳ” ಚಿತ್ರದ ಟೈಟಲ್ ಟ್ರ್ಯಾಕ್ ಬಿಡುಗಡೆ - CineNewsKannada.com

ಡಾಲಿ ಧನಂಜಯ ಅಭಿನಯದ ಹೊಯ್ಸಳ” ಚಿತ್ರದ ಟೈಟಲ್ ಟ್ರ್ಯಾಕ್ ಬಿಡುಗಡೆ

ಖ್ಯಾತ ಗಾಯಕ ನಕಾಶ್ ಅಜೀಜ್ ಕಂಠಸಿರಿಯಲ್ಲಿ ಮೂಡಿಬಂದಿದೆ ಈ ಭರ್ಜರಿ ಮಾಸ್ ಸಾಂಗ್ಡಾಲಿ ಧನಂಜಯ ನಾಯಕರಾಗಿ ಅಭಿನಯಿಸಿರುವ ಬಹು ನಿರೀಕ್ಷಿತ “ಹೊಯ್ಸಳ” ಚಿತ್ರದ ಟೈಟಲ್ ಟ್ರ್ಯಾಕ್ ಬಿಡುಗಡೆಯಾಗಿದೆ‌‌.ತಮ್ಮ ಅಮೋಘ ಕಂಠದಿಂದ ಜನಪ್ರಿಯವಾಗಿರುವ ನಕಾಶ್ ಅಜೀಜ್ ಈ ಭರ್ಜರಿ ಮಾಸ್ ಸಾಂಗ್ ಅನ್ನು ಅಮೋಘವಾಗಿ ಹಾಡಿದ್ದಾರೆ.

Rap ಗೆ ಯೋಗಿ ಬಿ ಧ್ವನಿಯಾಗಿದ್ದಾರೆ. ಸಂತೋಷ್ ಆನಂದರಾಮ್ ಈ ಹಾಡನ್ನು ಬರೆದಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೆಸಿಸಿ ಪಂದ್ಯದ ವೇಳೆ ಈ ಹಾಡು ಪ್ಲೇ ಆಗಿದೆ. ಕ್ರೀಡಾಂಗಣದಲ್ಲಿದ್ದ ಗಣ್ಯರು ಹಾಗೂ ಪ್ರೇಕ್ಷಕರು ಹಾಡಿಗೆ ಮೆಚ್ಚುಗೆ ಸೂಚಿಸಿದ್ದಾರೆ. ಸಮಾಜಿಕ ತಾಣದಲ್ಲೂ ಹಾಡಿಗೆ ಭಾರೀ‌ ಪ್ರಶಂಸೆ ವ್ಯಕ್ತವಾಗುತ್ತಿದೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.ಬಿಡುಗಡೆಗೂ ಮುನ್ನವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಈ ಚಿತ್ರ ಮಾರ್ಚ್ 30, ಶ್ರೀರಾಮನವಮಿ ಶುಭದಿನದಂದು ತೆರೆಗೆ ಬರಲಿದೆ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತೀಕ್ ಗೌಡ ಹಾಗೂ ಯೋಗಿ ಜಿ ರಾಜ್ ನಿರ್ಮಿಸಿದ್ದಾರೆ.

ವಿಜಯ್ ನಾಗೇಂದ್ರ ನಿರ್ದೇಶನದ ಈ ಚಿತ್ರದಲ್ಲಿ ಧನಂಜಯ, ಜಯದೇವ ಹೊಯ್ಸಳ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಮೃತ ಅಯ್ಯಂಗಾರ್ ಈ ಚಿತ್ರದ ನಾಯಕಿ.ಅಚ್ಯುತಕುಮಾರ್, ಪ್ರತಾಪ್ ನಾರಾಯಣ್, ನವೀನ್ ಶಂಕರ್, ಅವಿನಾಶ್ ಕೆ.ಜಿ.ಎಫ್, ರಾಘು ಶಿವಮೊಗ್ಗ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಪೂರ್ತಿಯಾಗಿ ಓದಿ

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin