Trailer of the film "Mankuthimmana Kagga" released: To be released in cinemas next month

“ಮಂಕುತಿಮ್ಮನ ಕಗ್ಗ” ಚಿತ್ರದ ಟ್ರೇಲರ್ ಬಿಡುಗಡೆ: ಮುಂದಿನ ತಿಂಗಳು ಸಿನಿಮಾ ತೆರೆಗೆ - CineNewsKannada.com

“ಮಂಕುತಿಮ್ಮನ ಕಗ್ಗ” ಚಿತ್ರದ ಟ್ರೇಲರ್ ಬಿಡುಗಡೆ: ಮುಂದಿನ ತಿಂಗಳು ಸಿನಿಮಾ ತೆರೆಗೆ

ಹೆಸರಾಂತ ಸಾಹಿತಿ ಡಾ.ಡಿ.ವಿ.ಗುಂಡಪ್ಪ ಅವರ ಜನಪ್ರಿಯ ಪದ್ಯ “ಮಂಕುತಿಮ್ಮನ ಕಗ್ಗ”. ಕನ್ನಡದಲ್ಲಿ ಈಗಾಗಲೇ ಕೆಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ರಾಜ ರವಿಶಂಕರ್ (ವಿ.ರವಿ), ಡಿ.ವಿ.ಜಿ ಅವರ “ಮಂಕುತಿಮ್ಮನ ಕಗ್ಗ”ವನ್ನು ಚಿತ್ರದ ಮುಂದಿನ ತಿಂಗಳು ತೆರೆಗೆ ಬರಲಿದೆ.

ಎನ್ ಎ ಶಿವಕುಮಾರ್ ನಿರ್ಮಿಸಿರುವ ಹಾಗೂ ಮೀನಾ ಶಿವಕುಮಾರ್ ಸಹ ನಿರ್ಮಾಣವಿರುವ ಚಿತ್ರದ ಟ್ರೇಲರ್ ಇತ್ತೀಚೆಗೆ ಅದ್ದೂರಿಯಾಗಿ ಬಿಡುಗಡೆಯಾಯಿತು.

ರಾಮೋಹಳ್ಳಿ ಶ್ರೀಗಳು, ಸಾ.ರಾ.ಗೋವಿಂದು, ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ಉಪಾಧ್ಯಕ್ಷ ಶಿಲ್ಪ ಶ್ರೀನಿವಾಸ್, ಕಾರ್ಯದರ್ಶಿ ಪ್ರವೀಣ್ ಕುಮಾರ್, ನಿರ್ದೇಶಕ ಸಾಯಿಪ್ರಕಾಶ್, ನಿರ್ದೇಶಕಿ, ನಟಿ ರೂಪ ಅಯ್ಯರ್, ನಟ ಸುಂದರರಾಜ್, ಸಂಗೀತ ನಿರ್ದೇಶಕ ವಿ.ಮನೋಹರ್, ಸಂಗಮೇಶ್ ಉಪಾಸೆ, ನಿರ್ಮಲ ಸಿ ಎಲಿಗಾರ್, ಮಾಜಿ ಶಾಸಕ ಲಕ್ಷ್ಮೀನಾರಾಯಣ್ ಸೇರಿದಂತೆ ಅನೇಕ ಗಣ್ಯರು ಡಿ.ವಿ.ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಟ್ರೇಲರ್ ಅನಾವರಣ ಮಾಡಿದರು.

ನಿರ್ದೇಶಕ ರಾಜ ರವಿಶಂಕರ್ ಮಾತನಾಡಿ,ಚಿತ್ರದಲ್ಲಿ ಡಿ.ವಿ.ಜಿ ಅವರ ಬಾಲ್ಯದ ದಿನಗಳ ಬಗ್ಗೆ ತೋರಿಸಲಾಗಿದೆ. ಬಾಲ್ಯದಲ್ಲಿ ಡಿ.ವಿ.ಜಿ ಅವರ ಮೇಲೆ ಅತ್ಯಂತ ಪ್ರಭಾವ ಬೀರಿದ್ದು ಅವರ ಸೋದರಮಾವ ತಿಮ್ಮಣ್ಣ ಮೇಷ್ಟ್ರು. ಸೋದರಮಾವ ಹಾಗೂ ಸೋದರಳಿಯನ ಬಾಂಧವ್ಯವನ್ನು ಈ ಚಿತ್ರದಲ್ಲಿ ತೋರಿಸಿದ್ದೇವೆ. ತಿಮ್ಮಣ್ಣ ಮೇಷ್ಟ್ರು ಪಾತ್ರದಲ್ಲಿ ಹಿರಿಯ ನಟ ರಾಮಕೃಷ್ಣ, ಸೋಮಿ (ಡಿ.ವಿ.ಜಿ) ಅವರ ಪಾತ್ರದಲ್ಲಿ ಮಾಸ್ಟರ್ ರಣವೀರ್, ಅಲಮೇಲು ಪಾತ್ರದಲ್ಲಿ ಭವ್ಯಶ್ರೀ ರೈ, ವೆಂಕರಮಣಯ್ಯ ಪಾತ್ರದಲ್ಲಿ ರವಿನಾರಾಯಣ್ ಹಾಗೂ ಅಜ್ಜಿಯ ಪಾತ್ರದಲ್ಲಿ ಲಕ್ಷ್ಮೀ ನಾಡಗೌಡ ಅಭಿನಯಿಸಿದ್ದಾರೆ ಎಂದರು

ಸಾಯಿಪ್ರಕಾಶ್, ನರಸೇಗೌಡ, ಶ್ರೀನಿವಾಸ್ ಕೆಮ್ತೂರ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ನನಗೆ ಹಾಗೂ ನಿರ್ಮಾಪಕರಿಗೆ ಈ ಚಿತ್ರ ಮಾಡಬೇಕೆನಿಸಿದಾಗ ಗೋಖುಲೆ ಇನ್ಸ್ಟಿಟ್ಯೂಟ್ ಅವರ ಬಳಿ “ಮಂಕುತಿಮ್ಮನ ಕಗ್ಗ”ವನ್ನು ಸಿನಿಮಾ ಮಾಡುತ್ತೇವೆ ಎಂದು ಕೇಳಿದಾಗ ಸಂತೋಷದಿಂದ ಒಪ್ಪಿಗೆ ನೀಡಿದರು. ಈಗ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಮೇ ಎರಡನೇ ವಾರದಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.

ನಿರ್ಮಾಪಕ ಶಿವಕುಮಾರ್ ಮಾತನಾಡಿ ಹಲವು ವರ್ಷಗಳಿಂದ ಪ್ರಸಾದನ ಕಲಾವಿದನಾಗಿ ಕನ್ನಡ ಚಿತ್ರರಂಗದಲ್ಲಿದ್ದೇನೆ. ಇಪ್ಪತ್ತು ವರ್ಷಗಳ ಹಿಂದೆ ” ಅವಳೆ ನನ್ನ ಗೆಳತಿ” ಚಿತ್ರ ನಿರ್ಮಾಣ ಮಾಡಿದ್ದೆ. ಇದು ಎರಡನೇ ಚಿತ್ರ. ಡಿ.ವಿ.ಜಿ ಅವರ ಚಿತ್ರ ಮಾಡಿರುವುದಕ್ಕೆ ಹೆಮ್ಮೆ ಇದೆ ಎಂದು ತಿಳಿಸಿದರು.

ಹಿರಿಯ ನಟ ರಾಮಕೃಷ್ಣ ಮಾತನಾಡಿ ತಿಮ್ಮಣ್ಣ ಮೇಷ್ಟ್ರು ಪಾತ್ರ ಮಾಡಿರುವುದು ಬಹಳ ಖುಷಿಯಾಗಿದೆ ಎಂದರು .

ಚಿತ್ರದಲ್ಲಿ ನಟಿಸಿರುವ ಭವ್ಯಶ್ರೀ ರೈ, ರವಿನಾರಾಯಾಣ್, ಓಂ ಸಾಯಿಪ್ರಕಾಶ್, ಮಾಸ್ಟರ್ ರಣವೀರ್ ಹಾಗೂ ಸಂಗೀತ ನಿರ್ದೇಶಕ ಎ.ಟಿ.ರವೀಶ್ ಮುಂತಾದವರು “ಮಂಕುತಿಮ್ಮನ ಕಗ್ಗ” ಚಿತ್ರದ ಕುರಿತು ಮಾತನಾಡಿದರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin