Trailer of the film “Namo Venkateswara” released: Curiosity increases

“ನಮೋ ವೆಂಕಟೇಶ” ಚಿತ್ರದ ಟ್ರೈಲರ್ ಬಿಡುಗಡೆ: ಕುತೂಹಲ ಹೆಚ್ಚಳ - CineNewsKannada.com

“ನಮೋ ವೆಂಕಟೇಶ” ಚಿತ್ರದ ಟ್ರೈಲರ್ ಬಿಡುಗಡೆ: ಕುತೂಹಲ ಹೆಚ್ಚಳ

ಹಲವಾರು ವರ್ಷಗಳಿಂದ ಕಿರುತೆರೆ, ಚಿತ್ರರಂಗದಲ್ಲಿ ತೊಡಗಿಸಿಕೊಂಡಿರುವ ವಿಜಯ್ ಭಾರದ್ವಾಜ್ ನಾಯಕನಾಗಿ ನಟಿಸಿರುವ ಚಿತ್ರ ‘ನಮೋ ವೆಂಕಟೇಶ’. ಚಿತ್ರದ ಟ್ರೈಲರ್ ಬಿಡಗಡೆಯಾಗಿದ್ದು ಗಮನ ಸೆಳೆದಿದೆ, ಚಿತ್ರಕ್ಕೆ ಅವರೇ ಚಿತ್ರದ ನಿರ್ದೇಶಕ ಕೂಡ. ಚಿತ್ರ ತೆರೆಗೆ ಬರಲು ಸಜ್ಜಾಗಿದೆ

ಚಿತ್ರತಂಡ ಟ್ರೈಲರ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರೊಮೋಷನ್ಸ್ ಗೆ ಚಾಲನೆ ನೀಡಿದೆ, “ನಮೋ ವೆಂಕಟೇಶ” ಚಿತ್ರಕ್ಕೂ ತಿರುಪತಿಯ ಶ್ರೀನಿವಾಸ ದೇವನಿಗೂ ಯಾವುದೇ ಸಂಬಂಧವಿಲ್ಲ, ಈಗಿನ ಕಾಲದಲ್ಲಿ ನಡೆಯೋ ಅಪ್ಪಟ ಫ್ಯಾಮಿಲಿ ಎಂಟರ್‍ಟೈನರ್ ಚಿತ್ರ. ಕಥೆಗೆ ಹೊಂದಾಣಿಕೆಯಾಗುತ್ತದೆ ಎಂಬ ಕಾರಣಕ್ಕೆ ಚಿತ್ರತಂಡ ‘ನಮೋ ವೆಂಕಟೇಶ’ ಎಂಬ ಟೈಟಲ್ ಇಟ್ಟಿದೆ. ನವಿರಾದ ಹಾಸ್ಯದ ಜೊತೆಗೊಂದು ಪ್ರೇಮಕಥೆಯನ್ನು ಹೇಳುವ ರೊಮ್ಯಾಂಟಿಕ್ ಕಾಮಿಡಿ ಚಿತ್ರವಿದು,

ಶ್ರೀನಿವಾಸ ಗೆಜ್ಜಲಗೆರೆ ಚಿತ್ರ ನಿರ್ಮಿಸುತ್ತಿದ್ದು, ಟಿ.ಎನ್. ಸೀತಾರಾಮ್ ಅವರಂತಹ ದಿಗ್ಗಜರೊಂದಿಗೆ ಪಳಗಿದ ಮೈಸೂರಿನ ವಿಜಯ್ ಭಾರದ್ವಾಜ್ ಆಕ್ಷನ್ ಕಟ್ ಹೇಳಿದ್ದಾರೆ.ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ‘ಗಟ್ಟಿಮೇಳ’ ಧಾರಾವಾಹಿಯ ಆದ್ಯ ಪಾತ್ರದಿಂದ ಹೆಸರಾದ ಅನ್ವಿತಾ ಸಾಗರ್ ‘ನಮೋ ವೆಂಕಟೇಶ’ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ಶ್ಯಾಮ್ ಸುಂದರ್, ನಾಗರಾಜರಾವ್, ರವಿಕುಮಾರ್, ದೀಪಾ, ಮಂಜುನಾಥ್ ಹೆಗ್ಡೆ, ಸುಧಾ ಪ್ರಸನ್ನ ಹಾಗೂ ಇತರರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ನಾಯಕಿ ಅನ್ವಿತಾ ಸಾಗರ ಮಾತನಾಡಿ ಚಿತ್ರದಲ್ಲಿ ರಶ್ಮಿ ಎಂಬ ಆರ್ಕಿಟೆಕ್ಟ್ ಸ್ಟೂಡೆಂಟ್ ಪಾತ್ರ ಮಾಡಿದ್ದೇನೆ. ಇನ್ನೋಸೆಂಟ್ ಅಷ್ಟೇ ಕೋಪಿಷ್ಠೆ ಕೂಡ, ತಂದೆಯ ಕಟ್ಟುಪಾಡುಗಳನ್ನು ಮೀರಿ ನಾನೊಬ್ಬ ಹುಡುಗನನ್ನು ಲವ್ ಮಾಡಿ, ನಂತರ ಆಯ್ಕೆ ಪ್ರಶ್ನೆ ಬಂದಾಗ ನಾನು ಫ್ಯಾಮಿಲಿಯನ್ನೇ ಆಯ್ಕೆ ಮಾಡಿಕೊಳ್ಳುತ್ತೇನೆ, ಆದರೆ ನಾಯಕ, ನನ್ನ ಕುಟುಂಬವನ್ನು ಹೇಗೆ ಒಪ್ಪಿಸಿ ಮದುವೆಯಾಗ್ತಾನೆ ಅನ್ನೋದೇ ಚಿತ್ರದ ಎಳೆ ಎಂದು ಹೇಳಿದರು,

ನಾಯಕ ವಿಜಯ್ ಭಾರದ್ವಾಜ್ ಮಾತನಾಡಿ ನಾಯಕನ ಹೆಸರು ವೆಂಕಟೇಶ, ಆತ ಏಕೆ ನಮೋ ವೆಂಕಟೇಶ ಏಕೆ ಆದ ಅನ್ನೋದನ್ನು ಚಿತ್ರದಲ್ಲಿ ನೋಡಿಯೇ ತಿಳಿಯಬೇಕು. ಎರಡು ಬೇರೆ, ಬೇರೆ ಪೀಳಿಗೆಗೆ ಸೇರಿದ ಇಬ್ಬರು ವ್ಯಕ್ತಿಗಳ ಸುತ್ತ ಸುತ್ತುವ ಕಥೆ. ಒಂದು ಪೀಳಿಗೆಯ ವ್ಯಕ್ತಿಗಳ ಭಿನ್ನ, ವಿಭಿನ್ನ ಆಲೋಚನೆಗಳಿಂದ ಮತ್ತೊಂದು ಪೀಳಿಗೆಗೆ ಸೇರಿದ ವ್ಯಕ್ತಿಗಳ ಜೀವನದ ಮೇಲೆ ಬೀರುವ ಸೂಕ್ಷ್ಮ ಪ್ರಭಾವಗಳು, ಅದರಿಂದ ಅವರವವರ ಬದುಕು ಪಡೆದುಕೊಳ್ಳುವ ತಿರುವುಗಳು, ಆ ತಿರುವುಗಳಿಂದ ಕೆಲವೊಮ್ಮೆ ಸೃಷ್ಠಿಯಾಗುವ ಹೊಸ ದಾರಿಗಳ ಸುತ್ತ ನಡೆವ ಕಥೆಯಿದು, ಯಾವುದೇ ಲಾಂಗು, ಮಚ್ಚು, ಬ್ಲಡ್ ಇಲ್ಲದ ಸುಂದರ ದೃಶ್ಯಗಳ ಹೂರಣವೇ ನಮೋ ವೆಂಕಟೇಶ. ಚಿತ್ರ ರಿಲೀಸಿಗೆ ರೆಡಿಯಾಗಿದ್ದು ಸದ್ಯದಲ್ಲೇ ಪ್ರೇಕ್ಷಕರ ಮುಂದೆ ಬರುತ್ತೇವೆ ಎಂದು ಹೇಳಿದರು,

ಹಿರಿಯ ಕಲಾವಿದರಾದ ಕೆವಿ. ಮಂಜಯ್ಯ, ನಾಗರಾಜರಾವ್, ಸುಧಾಪ್ರಸನ್ನ, ವಿ.ಮನೋಹರ್, ರವಿಕುಮಾರ್, ದೀಪ, ಪಾರ್ವತಿ ಮುಂತಾದವರು ನಿರ್ದೇಶಕರ ಜತೆ ಕೆಲಸ ಮಾಡಿದ ಅನುಭವಗಳನ್ನು ಹಂಚಿಕೊಂಡರು.

ಚಿತ್ರದಲ್ಲಿ ಒಟ್ಟು ಐದು ಹಾಡುಗಳಿದ್ದು, ಶರತ್ ಆರೋಹಣ ಸಂಗೀತ ಸಂಯೋಜನೆಯಿದೆ, ಹಿರಿಯ ಸಂಗೀತ ನಿರ್ದೇಶಕ ವಿ. ಮನೋಹರ್ ಶೀರ್ಷಿಕೆ ಹಾಡನ್ನು ರಚಿಸಿದ್ದು, ಉಳಿದ ಮೂರು ಹಾಡುಗಳಿಗೆ ನಿರ್ಮಾಪಕ ಶ್ರೀನಿವಾಸ ಗೆಜ್ಜಲಗೆರೆ ಅವರೇ ಸಾಹಿತ್ಯ ರಚಿಸಿದ್ದಾರೆ, ಮತ್ತೊಂದು ಗೀತೆಗೆ ಗಣೇಶ್ ಪ್ರಸಾದ್ ಸಾಲುಗಳನ್ನು ಬರೆದು, ಹಾಡಿದ್ದಾರೆ.

ನಿರಂಜನ್‍ದಾಸ್ ಮತ್ತು ವಿನೋದ್ ಲೋಕಣ್ಣನವರ್ ಛಾಯಾಗ್ರಹಣ, ಸಮೀರ್ ನಗರದ್ ಸಂಕಲನ ಈ ಚಿತ್ರಕ್ಕಿದೆ, ಮೈಸೂರು, ಚಿಕ್ಕಮಗಳೂರಿನ ಬಾಳೂರು, ಕೊಟ್ಟಿಗೆಹಾರ, ದೇವರಮನೆ, ಬಣಕಲ್, ದೇವರಮನೆ ಮುಂತಾದ ಸುಂದರ ತಾಣಗಳಲ್ಲಿ ನಮೋ ವೆಂಕಟೇಶ ಚಿತ್ರದ ಚಿತ್ರೀಕರಣ ನಡೆಸಲಾಗಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin