ಟ್ರಾವಲ್ ಅಡ್ವೆಂಚರ್ ಡ್ರಾಮ ಕತೆಯ #ಪಾರುಪಾರ್ವತಿ ಜನವರಿ 31ಕ್ಕೆ ಬಿಡುಗಡೆ

ಬಹಳ ದಿನಗಳ ನಂತರ ನಟಿ ದೀಪಿಕಾ ದಾಸ್ ನಾಯಕಿಯಾಗಿ ಕಾಣಿಸಿಕೊಂಡಿರುವ #ಪಾರುಪಾರ್ವತಿ ಚಿತ್ರ ಇದೇ ತಿಂಗಳ 31 ರಂದು ತೆರೆಗೆ ಬರಲು ಸಜ್ಜಾಗಿದೆ. ಈ ನಡುವೆ ಚಿತ್ರದ ನಾಲ್ಕನೇ ಪ್ರಮುಖ ಪಾತ್ರದಾರಿಯನ್ನು ಪರಿಚಯಿಸಲಾಗಿದೆ. ಅದುವೇ ಕಾರು.

ಪಿ.ಬಿ.ಪ್ರೇಂನಾಥ್ ನಿರ್ಮಿಸಿರುವ, ರೋಹಿತ್ ಕೀರ್ತಿ ನಿರ್ದೇಶನದಲ್ಲಿನಟಿ ದೀಪಿಕಾ ದಾಸ್, ಪೂನಂ ಸರ್ ನಾಯಕ್ ಹಾಗೂ ಫವಾಜ್ ಅಶ್ರಫ್ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿರುವ ಚಿತ್ರ “#ಪಾರುಪಾರ್ವತಿ”.ಪ್ರಮುಖ ಪಾತ್ರಧಾರಿ ಬೇರೆ ಯಾರು ಅಲ್ಲ. ಚಿತ್ರದಲ್ಲಿ ಎಂಟು ರಾಜ್ಯಗಳನ್ನು ಸುತ್ತಿದೆ ಈ ಕಾರು.
ನಿರ್ದೇಶಕ ರೋಹಿತ್ ಮಾತನಾಡಿ, ಇದೊಂದು ಟ್ರಾವೆಲ್ ಅಡ್ವೆಂಚರ್ ಡ್ರಾಮ ಜಾನರ್ ಚಿತ್ರ, ಮೂರು ಪ್ರಮುಖ ಪಾತ್ರಗಳ ಜೊತೆಗೆ ಸಾಗುತ್ತದೆ. ದೀಪಿಕಾ ದಾಸ್, ಪೂನಂ ಸರ್ ನಾಯಕ್ ಹಾಗೂ ಫವಾಜ್ ಆಶ್ರಫ್ ಮೂರು ಪ್ರಮುಖ ಪಾತ್ರಧಾರಿಗಳು. ಇವರೊಟ್ಟಿಗೆ ಮತ್ತೊಂದು ಪ್ರಮುಖಪಾತ್ರಧಾರಿ ಎಂದರೆ ಅದು ಕಾರು. ಟ್ರಾವೆಲ್ ಕಥಾಹಂದರ ಹೊಂದಿರುವ ಚಿತ್ರವಾಗಿರುವುದರಿಂದ ಕಾರು ಸಹ ಚಿತ್ರದಲ್ಲಿ ಪ್ರಮುಖಪಾತ್ರ ವಹಿಸುತ್ತದೆ. ಜನವರಿ 31ರಂದು ನಮ್ಮ ಚಿತ್ರ ಬಿಡುಗಡೆಯಾಗಲಿದ್ದು, ಸಂಕ್ರಾಂತಿಯಂದು ಚಿತ್ರದ ಟ್ರೇಲರ್ ಅನಾವರಣವಾಗಲಿದೆ. ಪ್ರಚಾರದ ಸಲುವಾಗಿ ಕರ್ನಾಟಕದಾದ್ಯಂತ ಚಲಿಸಲಿದೆ ಎಂದರು.

ನಾಯಕಿ ದೀಪಿಕಾ ದಾಸ್ ಮಾತನಾಡಿ ಇದೊಂದು ಪ್ರಯಾಣ ಹಾಗೂ ಅಡ್ವೆಂಚರ್ಸ್ ಕಥೆ. ಆದರೆ ಈ ಚಿತ್ರದಲ್ಲಿ ಬರೀ ಪ್ರವಾಸ ಮಾತ್ರ ಇಲ್ಲ. ಪ್ರೇಕ್ಷಕರು ಕುಟುಂಬ ಸಮೇತ ನೋಡಬಹುದಾದ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ. ಕಾರಿನ ಜೊತೆಗೆ ಕರ್ನಾಟಕದಿಂದ ಉತ್ತರ ಖಂಡದವರೆಗೂ ಎಂಟು ರಾಜ್ಯಗಳನ್ನು ಸಂಚರಿಸಿದ ಅನುಭವ ಎಂದಿಗೂ ಮರೆಯಲು ಸಾಧ್ಯವಿಲ್ಲ. ಪಾಯಲ್ ನನ್ನ ಪಾತ್ರದ ಹೆಸರು ಎಂದರು
ನಿರ್ಮಾಪಕ ಪಿ.ಬಿ.ಪ್ರೇಮ್ ನಾಥ್ ಮಾತನಾಡಿ ಜನವರಿ 31 ರಂದು ಬಿಡುಗಡೆಯಾಗಲಿರುವ ಚಿತ್ರಕ್ಕೆ ಎಲ್ಲರ ಪ್ರೋತ್ಸಾಹವಿರಲಿ ಎಂದು ಮನವಿ ಮಾಡಿದರು.

ಛಾಯಾಗ್ರಾಹಕ ಅಬಿನ್ ರಾಜೇಶ್ ಚಿತ್ರೀಕರಣ ಸಮಯದ ಅನುಭವ ಹಂಚಿಕೊಂಡರು.