“ಉಗ್ರ ತಾಂಡವ” ಟೀಸರ್ ಬಿಡುಗಡೆ: ಕಳೆದುಕೊಂಡ ಜಾಗದಲ್ಲಿ ಗಳಿಸಲು ಬಂದ ನಿರ್ಮಾಪಕ
ಮಲೆನಾಡ ಸೊಗಡಿನಲ್ಲಿ ತಯಾರಾಗುತ್ತಿರುವ ಆಕ್ಷನ್, ಡ್ರಾಮ ಕಥಾಹಂದರ “ ಉಗ್ರ ತಾಂಡವ” ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಗಮನ ಸೆಳೆದಿದೆ. ಚಿತ್ರದ ಚಿತ್ರೀಕರಣ ಇನ್ನಷ್ಟೇ ಆರಂಭವಾಗಬೇಕಾಗಿದ್ದು ಕರಾವಳಿಯಲ್ಲಿ ನಡೆಯುವ ರಾಜಕೀಯ, ಮಾಫಿಯಾ ಹಾಗೂ ಜಮೀನ್ದಾರ-ಕಾರ್ಮಿಕರ ಸುತ್ತ ಚಿತ್ರದ ಕಥೆ ಸಾಗುತ್ತದೆ.

ಉದ್ಯಮಿ ಡಾ.ಎನ್. ನರಸಿಂಹಮೂರ್ತಿ ಚಿತ್ರಕ್ಕೆ ಬಂಡವಾಳ ಹಾಕುತ್ತಿದ್ದು ಗೌತಮ ಸೂರ್ಯ ನಿರ್ದೇಶಿಸುತ್ತಿರುವ ಚಿತ್ರದ ನಾಯಕನಾಗಿ ಚಿರಂತ ನಟಿಸುತ್ತಿದ್ದಾರೆ. ಕಳೆದುಕೊಂಡ ಜಾಗದಲ್ಲಿ ಮತ್ತೆ ಗಳಿಸಲು ನಿರ್ಮಾಪಕ ನರಸಿಂಹಮೂರ್ತಿ ಮುಂದಾಗಿದ್ದಾರೆ
ನಿರ್ಮಾಪಕ ನರಸಿಂಹಮೂರ್ತಿ ಮಾತನಾಡಿ ಟೀಸರ್ ಚೆನ್ನಾಗಿ ಬಂದಿದೆ, ಸಿನಿಮಾ ಕೂಡ ಉತ್ತಮವಾಗಿ ಬರುವ ವಿಶ್ವಾಸವಿದೆ ಹಳ್ಳಿಯಲ್ಲಿ ನಡೆಯುವ ಕಥೆ ಮೇಲು, ಕೀಳು, ರಾಜಕೀಯ ಹಾಗೂ ಒಬ್ಬ ವ್ಯಕ್ತಿಗೆ ಅನ್ಯಾಯ ಆದಾಗ ಹೇಗೆ ಸಿಡಿದೆದ್ದು ನಿಲ್ಲುತ್ತಾನೆ ಎಂಬುದು ಸಿನಿಮಾದ ಸಾರಾಂಶ. 80-90ರ ದಶಕದಲ್ಲಿ ಸಮುದಾಯದಲ್ಲಿ ನಟಿಸಿದ್ದೆ. ನಂತರ ಸಿನಿಮಾ ಮಾಡಲು ಹೋಗಿ ನಷ್ಟ ಅನುಭವಿಸಿದೆ. ಆ ನಂಟಿನಿಂದ ಈಗ ಮತ್ತೆ ಸಿನಿಮಾ ಮಾಡುವಂತೆ ಆಯ್ತು ಎಂದರು
ನಾಯಕ ಚಿರಂತ ಮಾತನಾಡಿ, “ಆತ್ಮ” ಸಿನಿಮಾ ಮಾಡಿದ್ದೆ.ಎರಡನೇ ಸಿನಿಮಾ. ಕಥೆ ಮಾಡುವಾಗ ರಾಜಕೀಯ ಹಿನ್ನೆಲೆಯಲ್ಲಿ ಮಾಡಬೇಕು ಎಂದು ಹೊರಟಿದ್ದು. ಜಾತಿಯ ಎಳೆ ಇಟ್ಟುಕೊಂಡು ಕಥೆ ಮಾಡಿದ್ದೀವಿ. ಸಮಾಜದಲ್ಲಿ ನಡೆಯುವ ಕಥೆಯೇ ಚಿತ್ರದಲ್ಲಿ ಇರಲಿದೆ. ಅದರಲ್ಲೂ ಮಲೆನಾಡಿನಲ್ಲಿ ನಡೆಯುವ ಜಮೀನ್ದಾರರ ಹಾಗೂ ಕಾರ್ಮಿಕರ ನಡುವೆ ನಡೆಯುವ ಕಥೆಯನ್ನು ಆಕ್ಷನ್, ಡ್ರಾಮಾ ಮೂಲಕ ಹೇಳ ಹೊರಟಿದ್ದೇವೆ.ಇದೇ ತಿಂಗಳಿನಿಂದ ಚಿತ್ರೀಕರಣ ನಡೆಯಲಿದೆ ಎಂದು ಮಾಹಿತಿ ನೀಡಿದರು

‘ನನಗೆ ಚಿಕ್ಕ ವಯಸ್ಸಿನಿಂದ ನಟಿ ಆಗಬೇಕು ಎಂಬ ಆಸೆ. ಈಗ ನಿರ್ಮಾಪಕ ನರಸಿಂಹಮೂರ್ತಿ ಅವರ ಸಹಕಾರದಿಂದ ಚಿತ್ರದ ನಾಯಕಿಯಾಗಿ ನಟಿಸುತ್ತಿದ್ದೇನೆ. ಜೊತೆಗೆ ನಿರ್ಮಾಪಕರು ಮುಂದಿನ ಎರಡು ಸಿನಿಮಾಗಳಲ್ಲಿ ನಟಿಸಲು ಅವಕಾಶ ಮಾಡಿ ಕೊಟ್ಡಿದ್ದಾರೆ ಎಂದರು.
ನಿರ್ದೇಶಕ ಗೌತಮ್ ಸೂರ್ಯ ಮಾತನಾಡಿ ಹಿರಿಯ ನಿರ್ದೇಶಕರಾದ ದಿನೇಶ್ ಬಾಬು, ಪಿ. ವಾಸು ಮುಂತಾದವರ ಜೊತೆ ಕೆಲಸ ಮಾಡಿದ್ದೇನೆ ಚಿತ್ರ ನಿರ್ದೇಶಿಸಲು ಅವಕಾಶ ನೀಡಿದ ನಿರ್ಮಾಪಕರಿಗೆ ಹಾಗೂ ಚಿರಂತ್ ಅವರಿಗೆ ಧನ್ಯವಾದ ಎಂದು ಹೇಳಿದರು.
ಇನ್ನೋರ್ವ ನಟಿಯಾಗಿ ಮಧುಬಾಲ ಪೊಲೀಸ್ ಅಧಿಕಾರಿ ಪಾತ್ರ ಮಾಡುತ್ತಿದ್ದಾರೆ. ಜೊತೆಗೆ ಹುಬ್ಬಳ್ಳಿ ಮೂಲದ ಅಶ್ವಿನಿ ಎಸ್. ರೀಲ್ಸ್ ಮಾಡುವ ಮಾಡೆಲ್ ಹುಡುಗಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.ಜೊತೆ ಕಿರಣ್ ಕೂಡ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಶ್ರೀ ಸುರೇಶ್ ಸಂಗೀತ ಸಂಯೋಜಿಸುತ್ತಿರುವ ಚಿತ್ರದ ಸಹ ನಿರ್ಮಾಪಕರಾಗಿ ಸಂಜಯ್ ಹಾಗೂ ಭುವನ ಸಾಥ್ ನೀಡಿದ್ದಾರೆ.


