“ಯುಐ” ಚಿತ್ರ ಅಕ್ಟೋಬರ್‍ನಲ್ಲಿ ತೆರೆಗೆ: ಕಥೆ ಏನಿರಬಹುದು ಕುತೂಹಲ ಹೆಚ್ಚಳ
ನಟ, ನಿದೇಶ್ಕ ಉಪೇಂದ್ರ ನಟಿಸಿ, ನಿರ್ದೇಶಿಸಿರುವ ಬಹು ನಿರೀಕ್ಷಿತ “ಯುಐ” ಚಿತ್ರ ಮುಹೂರ್ತದ ದಿನದಿಂದ ಒಂದಿಲ್ಲೊಂದು ಕಾರಣಕ್ಕೆ ಸದ್ದು ಮಾಡುತ್ತಿದ್ದು ಇದೀಗ ಮುಂದಿನ ತಿಂಗಳು ಚಿತ್ರ ತೆರೆಗೆ ಬರಲು ಸಜ್ಜಾಗಿದೆ.
ನಟ ಉಪೇಂದ್ರ ಅವರ ಹುಟ್ಟುಹಬ್ಬದಂದು “ಯುಐ” ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಅಕ್ಟೋಬರ್‍ನಲ್ಲಿ ಚಿತ್ರ ಬಿಡುಗಡೆ ಎನ್ನುವ ವಿಷಯ ಅಧಿಕೃತವಾಗಿ ಪ್ರಕಟಿಸಲಾಗಿದೆ.
ನಟ, ನಿರ್ದೇಶಕ ಉಪೇಂದ್ರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಚಿತ್ರದ ಬಗ್ಗೆ ತಂಡ ಒಂದಷ್ಟು ಮಾಹಿತಿ ನೀಡಿತು ನಿರ್ಮಾಪಕರಾದ ಜಿ.ಮನೋಹರನ್, ಕೆ.ಪಿ.ಶ್ರೀಕಾಂತ್, ಸಹ ನಿರ್ಮಾಪಕರಾದ ನವೀನ್, ತುಳಸಿರಾಮ ನಾಯ್ಡು (ಲಹರಿ ವೇಲು), ನಾಯಕಿ ರೀಶ್ಮಾ ನಾಣಯ್ಯ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್, ಕಲಾ ನಿರ್ದೇಶಕ ಶಿವಕುಮಾರ್ ಉಪಸ್ಥಿತರಿದ್ದರು.
ನಟ, ನಿರ್ದೇಶಕ ಉಪೇಂದ್ರ ಮಾತನಾಡಿ,ಹುಟ್ಟುಹಬ್ಬಕ್ಕೆ ಹಾರೈಸಿರುವ ಪ್ರತಿಯೊಬ್ಬರಿಗೂ ಧನ್ಯವಾದ ಐದಾರು ಮದುವೆ ಆಗಬಹುದು. ಆದರೆ ಒಂದು ಚಿತ್ರ ನಿರ್ದೇಶನ ಮಾಡುವುದು ಅದಕ್ಕಿಂತ ಕಷ್ಟ. ಇನ್ನೂ ನಾನು ಬಹಳ ವರ್ಷಗಳ ನಂತರ ನಿರ್ದೇಶಿಸಿರುವ “ಯುಐ” ಚಿತ್ರ ಬಿಡುಗಡೆಯ ಹಂತಕ್ಕೆ ತಲುಪಿದೆ. ಚಿತ್ರವನ್ನು ಅದ್ದೂರಿಯಾಗಿ ನಿರ್ಮಿಸಿರುವ ನಿರ್ಮಾಪಕರು ಅಕ್ಟೋಬರ್ ನಲ್ಲಿ ತೆರೆಗೆ ತರುವ ಪ್ರಯತ್ನದಲ್ಲಿದ್ದಾರೆ. ತಾಂತ್ರಿಕ ಕಾರ್ಯಗಳು ಹೆಚ್ಚಾಗಿರುವುದು ಹಾಗೂ ಸಿನಿಮಾ ಕನ್ನಡ ಸೇರಿದಂತೆ ಬಹು ಭಾಷೆಗಳಲ್ಲಿ ಬರುತ್ತಿರುವುದರಿಂದ ಬಿಡುಗಡೆ ಸ್ವಲ್ಪ ವಿಳಂಬವಾಗುತ್ತಿದೆ ಎಂದರು
ಜನರು ಯಾವಗಲೂ ನನಗೆ ತಲೆಯಲ್ಲಿ ಹುಳ ಬಿಡುತ್ತೀರಾ ಎನ್ನುತ್ತಾರೆ. ಅದರೆ ಈ ಚಿತ್ರದಲ್ಲಿ ಹುಳ ತೆಗೆಯುವ ಕೆಲಸ ಮಾಡುತ್ತಿದ್ದೇನೆ. ಪ್ರೇಕ್ಷಕರು ನಮಗಿಂತ ತುಂಬಾ ಬುದ್ದಿವಂತರು. ಅವರ ನಿರೀಕ್ಷೆ ಹೆಚ್ಚು ಇರುತ್ತದೆ. ಅದಕ್ಕೆ ತಕ್ಕ ಹಾಗೆ ಸಿನಿಮಾ ಮಾಡುವ ಜವಾಬ್ದಾರಿ ನಮ್ಮ ಮೇಲಿರುತ್ತದೆ. ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್, ಕಲಾ ನಿರ್ದೇಶಕ ಶಿವಕುಮಾರ್ ಸೇರಿದಂತೆ ಎಲ್ಲಾ ತಂತ್ರಜ್ಞರ ಹಾಗೂ ಕಲಾವಿದರ ಸಹಕಾರದಿಂದ “ಯುಐ” ಉತ್ತಮ ಚಿತ್ರವಾಗಿ ಬರಲಿದೆ ಎಂದರು.
ನಟಿ ರೀಷ್ಮಾ ನಾಯಣ್ಣ ಮಾತನಾಡಿ, ಉಪೇಂದ್ರ ಸರ್ ಜೊತೆ ಕೆಲಸ ಮಾಡುವ ಬಹುದಿನದ ಕನಸು ಈಡೇರಿದೆ. ಚಿತ್ರದ ಟ್ರೋಲ್ ಹಾಡು ಈಗಾಗಲೇ ಜನಪ್ರಿಯತೆ ಪಡೆದುಕೊಂಡಿದೆ. ಚಿತ್ರ ಬಿಡುಗಡೆಯಾಗುವುದನ್ನು ಎದುರು ನೋಡುತ್ತಿರುವೆ ಎಂದು ಮಾಹಿತಿ ನೀಡಿದರು
ನಿರ್ಮಾಪಕ ಜಿ.ಮನೋಹರನ್, ಇದು ಪ್ಯಾನ್ ಇಂಡಿಯಾ ಚಿತ್ರವಾಗಿರುವುದರಿಂದ ಬಿಡುಗಡೆ ಸ್ವಲ್ಪ ತಡವಾಯಿತು.ಅಕ್ಟೋಬರ್ ನಲ್ಲಿ ಚಿತ್ರ ತೆರೆಗೆ ಬರಲಿದೆ ಎಂದು ತಿಳಿಸಿದರು.
ನಿರ್ಮಾಪಕ ಕೆ.ಪಿ.ಶ್ರೀಕಾಂತ್ ಮಾತನಾಡಿ 25 ವರ್ಷಗಳ ನನ್ನ ಸಿನಿ ಜರ್ನಿಯಲ್ಲಿ ಶಿವಣ್ಣ ಅವರ ಜೊತೆಗಿನ ಒಡನಾಟ ಹಾಗೂ ಉಪೇಂದ್ರ ಅವರು ನಮ್ಮ ಬ್ಯಾನರ್ ನ ಚಿತ್ರವನ್ನು ನಿರ್ದೇಶಿಸಿರುವುದು ನನಗೆ ತುಂಬಾ ಖುಷಿಕೊಟ್ಟ ವಿಚಾರ. ಎಲ್ಲರಂತೆ ನಾನು ಉಪೇಂದ್ರ ಅವರ ನಿರ್ದೇಶನಕ್ಕೆ ಅಭಿಮಾನಿ. ಈ ಚಿತ್ರವನ್ನು ತೆರೆಯ ಮೇಲೆ ನೋಡುವ ಕಾತುರ ಅವರ ಅಭಿಮಾನಿಗಳಂತೆ ನನಗೂ ಇದೆ. ಸದ್ಯದಲ್ಲೇ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡುತ್ತೇವೆ ಎಂದರು
ಸಹ ನಿರ್ಮಾಪಕರಾದ ನವೀನ್, ತುಳಸಿರಾಮ ನಾಯ್ಡು (ಲಹರಿ ವೇಲು) ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಗೂ ಕಲಾ ನಿರ್ದೇಶಕ ಶಿವಕುಮಾರ್ ಅವರು “ಯುಐ” ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು