"UI" released in over 2000 screens worldwide

“ಯುಐ” ಸಿನಿಮಾ ಪ್ರಪಂಚದಾದ್ಯಂತ 2000ಕ್ಕೂ ಅಧಿಕ ಪರದೆಗಳಲ್ಲಿ ಬಿಡುಗಡೆ - CineNewsKannada.com

“ಯುಐ” ಸಿನಿಮಾ ಪ್ರಪಂಚದಾದ್ಯಂತ 2000ಕ್ಕೂ ಅಧಿಕ ಪರದೆಗಳಲ್ಲಿ ಬಿಡುಗಡೆ

ಒಂಭತ್ತು ವರ್ಷಗಳ ನಂತರ ರಿಯಲ್ ಸ್ಟಾರ್ ಉಪೇಂದ್ರ ಅವರು ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “ಯುಐ” ಚಿತ್ರ ಡಿಸೆಂಬರ್ 20 ರಂದು ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ವಿಶ್ವದಾದ್ಯಂತ 2000ಕ್ಕೂ ಅಧಿಕಸ್ಕ್ರೀನ್ ಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.

ಪೆÇೀಸ್ಟರ್, ಹಾಡು, ಟೀಸರ್ ಹಾಗೂ ವಾರ್ನರ್ ಮೂಲಕ ಈಗಾಗಲೇ ಕುತೂಹಲ ಮೂಡಿಸಿರುವ ಈ ಚಿತ್ರವನ್ನು ನೋಡಲು ಉಪೇಂದ್ರ ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಜಿ.ಮನೋಹರನ್ ಹಾಗೂ ಕೆ.ಪಿ.ಶ್ರೀಕಾಂತ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ನವೀನ್ ಮನೋಹರ್ ಅವರ ಸಹ ನಿರ್ಮಾಣ ಹಾಗೂ ತುಳಸಿರಾಮ ನಾಯ್ಡು (ಲಹರಿ ವೇಲು), ಜಿ.ರಮೇಶ್, ಜಿ.ಆನಂದ್, ಚಂದ್ರು ಮನೋಹರನ್ ಹಾಗೂ ನಾಗೇಂದ್ರ ಅವರು ಕಾರ್ಯಕಾರಿ ನಿರ್ಮಾಪಕರಾಗಿರುವ ಈ ಚಿತ್ರದಲ್ಲಿ ಉಪೇಂದ್ರ ಅವರಿಗೆ ಜೋಡಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದಾರೆ.

ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಹೆಸರಾಂತ ಕೆ.ವಿ.ಎನ್ ಪ್ರೊಡಕ್ಷನ್ಸ್ ಸಂಸ್ಥೆ ಈ ಚಿತ್ರವನ್ನು ವಿತರಣೆ ಮಾಡುತ್ತಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin