“ಕಾಂತಾರ” ಚಿತ್ರ ವೀಕ್ಷಿಸಿ ಕೊಂಡಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ
ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರ್ ನಿರ್ಮಿಸಿ, ನಟ, ನಿರ್ದೇಶಕ ರಿಷಬ್ ಶೆಟ್ಟಿ ನಿರ್ದೇಶನದ ಜೊತೆಗೆ ನಾಯಕರಾಗೂ ನಟಿಸಿರುವ “ಕಾಂತಾರ” ಚಿತ್ರ ಕಳೆದ ಅಕ್ಟೋಬರ್ 2 ರಂದು ವಿಶ್ವದಾದ್ಯಂತ ಬಿಡುಗಡೆಯಾಗಿ ವಿಶ್ವದ ಜನರ ಮನ ಗೆಲ್ಲುತ್ತಿದೆ.

ಬಿಡುಗಡೆಯಾದ ಎಲ್ಲಾ ಕಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಚಿತ್ರ ದೆಹಲಿಯಲ್ಲಿ ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ಅವರ ಜೊತೆಗೆ ವೀಕ್ಷಿಸಿದ್ದಾರೆ. ಚಿತ್ರ ವೀಕ್ಷಣೆ ನಂತರ “ಕಾಂತಾರ” ಚಿತ್ರವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.
ಚಿತ್ರ ನಿರ್ಮಾಪಕರು ಮತ್ತು ವಿರಕರೂ ಆಗಿರುವ ಎಚ್.ಡಿ ಕುಮಾರಸ್ವಾಮಿ ಅವರು “ಕನ್ನಡ ಅಸ್ಮಿತೆಯ ಸಮೃದ್ಧ ವೈಭವೀಕರಣ. ಮನ ಮಿಡಿಯುವ ಅಂತಃಕರಣದ ನಿಜ ಹೂರಣ. ತುಳುನಾಡ ಸಾಂಸ್ಕೃತಿಕ ಮತ್ತು ದೈವತ್ವದ ಪರಂಪರೆಯ ವಿರಾಟ್ ಅನಾವರಣ. ಈ ಚಿತ್ರ ಪದಗಳಿಗೂ ಮೀರಿದ ಸೃಜನಶೀಲ ಸೃಷ್ಟಿ . ನಿರ್ಮಾಪಕ ವಿಜಯ್ ಕಿರಗಂದೂರ್, ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಹಾಗೂ ಮತ್ತವರ ತಂಡದ ಪ್ರಯತ್ನಕ್ಕೆ ಹೃದಯಪೂರ್ವಕ ಅಭಿನಂದನೆಗಳು. ನಿಮ್ಮಿಂದ ಇನ್ನಷ್ಟು ಅತ್ಯುತ್ತಮ ಚಿತ್ರಗಳು ಮೂಡಿಬರಲಿ ಹಾರಸಿದ್ದಾರೆ

