``Unveiling'' of the director duo's dream: Adventure of HAL employees

ನಿರ್ದೇಶಕ ಜೋಡಿಯ ಕನಸಿನ `ಅನಾವರಣ’: ಎಚ್ ಎಎಲ್ ಉದ್ಯೋಗಿಗಳ ಹೊಸ ಸಾಹಸ - CineNewsKannada.com

ನಿರ್ದೇಶಕ ಜೋಡಿಯ ಕನಸಿನ `ಅನಾವರಣ’: ಎಚ್ ಎಎಲ್ ಉದ್ಯೋಗಿಗಳ  ಹೊಸ ಸಾಹಸ

ಹಿಂದೂಸ್ತಾನ್ ಏರೋನಾಟಿಕಲ್ ಲಿಮಿಟೆಡ್- ಎಚ್ ಎ ಎಲ್ ನಲ್ಲಿ ಕೆಲಸ ಮಾಡುವ ಸಿಬ್ಬಂಧಿ ಹೊಸ ಕನಸು ಕಟ್ಟಿಕೊಂಡು ಅದನ್ನು ತೆರೆಯ ಮೇಲೆ “ಅನಾವರಣ” ಮಾಡಲು ಮುಂದಾಗಿದ್ದಾರೆ.

ನಿರ್ದೇಶಕರಾದ ಮಂಜು-ಹರಿ ಜೋಡಿ, ಪ್ರೀತಿ ಅತಿಯಾದರೆ ಏನೆಲ್ಲಾ ಅವಾಂತರವಾಗಲಿದೆ.ಅದರಿಂದ ಎದುರಿಸುವ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ಮಾಡಿದ್ಧಾರೆ ಅದುವೇ “ಅನಾವರಣ “ ಚಿತ್ರದ ಮೂಲಕ

ಅದ್ವೈತ್ ಪ್ರಭಾಕರ್, ಆರ್. ರಾಮಚಂದ್ರ, ಸತ್ಯ ರಾಣಿ ಜಿ ಮತ್ತು ರಚನಾ ಬಿ. ಹೆಚ್ ನಿರ್ಮಾಣದ ಅನಾವರಣ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ.“ಏನಾಗಿದೆ” ಎನ್ನುವ ಪ್ರೇಮಗೀತೆಗೆ ಶಶಿಕುಮಾರ್ ಬೆಳಕವಾಡಿ ಸಾಹಿತ್ಯ ಬರೆದಿದ್ದು, ವಿಶಾಲ್ ಸಿ ಕೃಷ್ಣ ಸಂಗೀತ ನೀಡಿದ್ದು ಅರ್ಜುನ್ ಯೋಗಿ, ಸಾರಿಕಾ ರಾವ್ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

ಹಾಡು ಬಿಡುಗಡೆ ಬಳಿಕ ಮಾತಿಗಿಳಿದ ನಿರ್ದೇಶಕರಲ್ಲಿ ಒಬ್ಬರಾದ ಹರೀಶ್ ಕುಮಾರ್, ಸಿನಿಮಾ ನಿರ್ದೇಶನ ಹಲವು ವರ್ಷದ ವರ್ಷದ ಕನಸು.15 ವರ್ಷ ರಂಗಭೂಮಿಯಲ್ಲಿ ಕೆಲಸ ಮಾಡಿದ್ದೇವೆ, ಸಿನಿಮಾ ಸೆಳೆತ ಬಂತು. 40 ಕಿರುಚಿತ್ರ ನಿರ್ದೇಶಿಸಿದ್ದೇವೆ. ಒಳ್ಳೆ ಕಥೆ ಸಿಕ್ಕಿತು ಚಿತ್ರ ಮಾಡಲು ಹೆಜ್ಜೆ ಇಟ್ಟೆವು. ಚಿತ್ರದಲ್ಲಿ ಬರುವ ಹಲವಾರು ವಿಶೇಷತೆಗಳ ಅನಾವರಣ. ನಿರ್ದೇಶಕರ ಪಯಣಕ್ಕೆ ಅನಾವರಣ. ಒಳ್ಳೆ ಸಾಹಿತ್ಯದ ಅನಾವರಣ, ಇಬ್ಬರು ಬೆನ್ನುತಟ್ಟಿದ ನಿರ್ಮಾಪಕ ಅನಾವರಣ.. ನಮ್ಮದೇ ಕಥೆ ಅನಿಸುವ ಸಿನಿಮಾವಿದು ಎಂದರು.

ಮತ್ತೊಬ್ಬ ನಿರ್ದೇಶಕ ಮಂಜುನಾಥ್ ಮಾತನಾಡಿ, ತುಂಬಾ ಪ್ರೀತಿ ಮಾಡುವವರು, ತುಂಬಾ ಪ್ರೀತಿಯಾದರೆ ಯಾವ ರೀತಿ, ಕಾಟ, ಭಾದೆ ಇರುತ್ತದೆ ಅನ್ನುವುದನ್ನು ಸಿನಿಮಾದಲ್ಲಿ ತೋರಿಸಿದ್ದೇವೆ ಎಂದರು.

ನಾಯಕ ಅರ್ಜುನ್ ಯೋಗಿ ಮಾತನಾಡಿ, ಹಿಂದಿನ ಸಿನಿಮಾ ಚೇಸ್ ಚಿತ್ರ ಬಿಡುಗಡೆಯಾದ ದಿನವೇ ನಮ್ಮ ಕೆಲಸ ನೋಡಿ ಮೆಚ್ಚಿ ಇನ್ನೊಂದು ಕೆಲಸ ಕೊಟ್ಟರು. ಇದು ಖುಷಿ ವಿಚಾರ. ಅನಾವರಣ ಚಿತ್ರಕ್ಕೆ ಇಬ್ಬರು ನಿರ್ದೇಶಕರು. ಅವರು ಏನ್ ಕಥೆ ಹೇಳಿದ್ದರು ಅದಕ್ಕಿಂತ ದುಪ್ಪಟ್ಟಾಗಿ ಸಿನಿಮಾ ಮೂಡಿಬಂದಿದೆ. ಗ್ಲಿಂಪ್ಸ್, ಟ್ರೇಲರ್ ನೋಡಿದ್ದೇನೆ. ಈ ತಂಡ ಗೆದ್ದರೆ ಇನ್ನೊಂದಿಷ್ಟು ಸಿನಿಮಾಗಳು ಹುಟ್ಟಿಕೊಳ್ಳುತ್ತದೆ. ತುಂಬಾ ಚೆನ್ನಾಗಿ ಕಥೆ ಕಟ್ಟಿದ್ದಾರೆ. ನನಗೆ ಬಹಳ ಇಷ್ಟವಾಗಿದೆ. ನಾನು ಸಾಫ್ಟ್ ವೇರ್ ಇಂಜಿನಿಯರ್ ಪಾತ್ರ. ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡಿರುವುದು ಖುಷಿ ಕೊಟ್ಟಿದೆ ಎಂದರು.

ನಟಿ ಸಾರಿಕಾ ರಾವ್ ಮಾತನಾಡಿ, ತುಂಬಾ ಪೆÇಸೆಸಿವ್ ನೆಸ್ ಆಗಿರುವ ಹುಡುಗಿ ಪಾತ್ರ ನನ್ನದು. ನಿಮಗೆ ಎಲ್ಲರಿಗೂ ಕೋಪ ಬರುತ್ತದೆ ಅಂತಹ ಕಾರೆಕ್ಟರ್. ಗಂಡ ಎಲ್ಲಿ ಹೋಗಲಿ ಬಿಡ್ಲಿ ಅವನಿಗೆ ಅಷ್ಟು ಟಾರ್ಚರ್ ಕೊಟ್ಟಾಗಿ ಬಿಟ್ಟಿದ್ದೇನೆ. ಶೂಟಿಂಗ್ ಸೆಟ್ ನಲ್ಲಿ ಸಿಕ್ಕಾಪಟ್ಟೆ ಎಂಜಾಯ್ ಮಾಡಿದ್ದೇನೆ. ಶೂಟಿಂಗ್ ಅನಿಸುತ್ತನೆ ಇರಲಿಲ್ಲ. ಹಾಲಿಡೇ ತರ ಇತ್ತು. ಮಂಜು ಸರ್ ಜೊತೆ ಕೆಲಸ ಮಾಡಿರುವುದು ಖುಷಿ ಕೊಟ್ಟಿದೆ. ನಿಮ್ಮ ಆಶೀರ್ವಾದ ನಮ್ಮ ಇಡೀ ತಂಡದ ಮೇಲೆ ಇರಬೇಕು ಎಂದರು.

ಅರ್ಜುನ್ ಯೋಗಿ, ಸಾರಿಕಾ ರಾವ್ ನಾಯಕ ಹಾಗೂ ನಾಯಕಿಯಾಗಿ ನಟಿಸಿದ್ದು, ,ಗೌರೀಶ್ ಅಕ್ಕಿ, ನಂದ ಗೋಪಾಲ್, ಹೊನ್ನವಳ್ಳಿ ಕೃಷ್ಣ, ರತಸಪ್ತಮಿ ಅರವಿಂದ್, ಕಾಮಿಡಿ ಕಿಲಾಡಿ ಸೂರಜ್, ಸೂರ್ಯ, ಸಂತು, ವಾಣಿ, ರಾಜೇಶ್ವರಿ, ಕಮಲಾ ತಾರಾಬಳಗದಲ್ಲಿದ್ದಾರೆ.

ಹರೀಶ್ ಕುಮಾರ್, ಮಂಜುನಾಥ್ ಪಿಳ್ಳಪ್ಪ ಇಬ್ಬರು ಅನಾವರಣ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ವೆಂಕಿ ಸಂಕಲನ, ಶಶಿಕುಮಾರ್ ಸಾಹಿತ್ಯ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ವಿಶಾಲ್ ಸಿ ಕೃಷ್ಣ ಸಿನಿಮಾಕ್ಕಿದೆ. ಫ್ಯಾಮಿಲಿ ಡ್ರಾಮಾ ಜೊತೆಗೆ ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಅನಾವರಣ ಶೂಟಿಂಗ್ ಮುಗಿಸಿ ಸೆನ್ಸಾರ್ ಅಂಗಳ ಹೋಗಲು ರೆಡಿಯಾಗಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin