Upendra unveiled the title of Hulinayaka
ಹುಲಿನಾಯಕ ಚಿತ್ರದ ಶೀರ್ಷಿಕೆ ಅನಾವರಣ ಮಾಡಿದ ಉಪೇಂದ್ರ

ಮಯೂರ ಮೋಷನ್ ಪಿಕ್ಚರ್ ನಿರ್ಮಾಣದ ನೂತನ ಚಿತ್ರ “ ಹುಲಿ ನಾಯಕ” ಚಿತ್ರದ ಶೀರ್ಷಿಕೆಯನ್ನು ರಿಯಲ್ ಸ್ಟಾರ್ ಉಪೇಂದ್ರ ಅನಾವರಣ ಮಾಡುವ ಮೂಲಕ ನೂತನ ನಾಯಕನಿಗೆ ಶುಭ ಹಾರೈಸಿದ್ದಾರೆ
ಡಿ.ಜೆ.ಚಕ್ರವರ್ತಿ ನಿರ್ದೇಶನದ ಹಾಗೂ ಮಿಲಿಂದ್ ಗೌತಮ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ಹೆಸರು “ಹುಲಿ ನಾಯಕ” ಚಿತ್ರಕ್ಕೆ ಡಿ ಮಂಜುನಾಥ್ ಬಂಡವಾಳ ಹಾಕುತ್ತಿದ್ದಾರೆ.
ವರ ಮಹಾಲಕ್ಷ್ಮಿ ಹಬ್ಬದ ಶುಭ ಸಂದರ್ಭದಂದು ರಿಯಲ್ ಸ್ಟಾರ್ ಉಪೇಂದ್ರ ಅವರು ತುಂಬು ಪ್ರೀತಿಯಿಂದ ಹಾರೈಸಿದ್ದಾರೆ. ಮಯೂರ ಮೋಶನ್ ಪಿಕ್ಚರ್ಸ್ ಸಂಸ್ಥೆ ಲಾಂಛನದಲ್ಲಿ ಮಂಜುನಾಥ್ ಡಿ ಅವರು ನಿರ್ಮಿಸುತ್ತಿರುವ, ಡಿ.ಜೆ ಚಕ್ರವರ್ತಿ ನಿರ್ದೇಶನದ ಹಾಗೂ ಮಿಲಿಂದ್ ಗೌತಮ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣಗೊಳಿಸಿದ್ದಾರೆ.

ಚಿತ್ರದ ಹೆಸರು “ಹುಲಿ ನಾಯಕ” ಎಂದು ಘೋಷಣೆ ಮಾಡಿದ ಉಪೇಂದ್ರ ಅವರು, ಈ ಐತಿಹಾಸಿಕ ಚಿತ್ರ ಯಶಸ್ವಿಯಾಗಲಿ. ನಿರ್ದೇಶಕ ಡಿ.ಜೆ.ಚಕ್ರವರ್ತಿ, ನಿರ್ಮಾಪಕ ಮಂಜುನಾಥ್ ಹಾಗೂ ನಾಯಕ ಮಿಲಿಂದ್ ಗೌತಮ್ ಅವರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ.