ಹಿರಿಯ ನಟಿ ಭಾಗ್ಯಶ್ರೀ ಪುತ್ರಿ ಅವಂತಿಕಾ ದಸ್ಸಾನಿ ಕನ್ನಡಕ್ಕೆ ಪ್ರವೇಶ
‘ಸಂಜು ವೆಡ್ಸ್ ಗೀತಾ’ ಚಿತ್ರದ ಚಿತ್ರೀಕರಣ ಮುಗಿದು ಪೋಸ್ಟ್ ಪ್ರೊಡಕ್ಷನ್ಸ್ ಕೆಲಸಗಳು ನಡೆಯುತ್ತಿದೆ. ಅದರ ಹಿಂದೆಯೇ ನಾಗಶೇಖರ್ ತಮ್ಮ ಮುಂದಿನ ಪ್ರಾಜೆಕ್ಟನ್ನು ಪ್ರಕಟಿಸಿದ್ದಾರೆ. ಅಷ್ಟೇ ಅಲ್ಲ ಕನ್ನಡ ಸೇರಿದಂತೆ ಬಾಲಿವುಡ್‍ನಲ್ಲಿ ನಟಿಸಿರುವ “ಮೈನೆ ಪ್ಯಾರ್ ಕಿಯಾ” ಖ್ಯಾತಿಯ ಹಿರಿಯ ನಟಿ ಭಾಗ್ಯಶ್ರೀ ಪುತ್ರಿ ಅವಂತಿಕಾ ದಸ್ಸಾನಿ ಅವರನ್ನು ಕನ್ನಡ ಚಿತ್ರರಂಗಕ್ಕೆ ನಾಯಕಿಯಾಗಿ ಪರಿಚಯ ಮಾಡುತ್ತಿದ್ದಾರೆ.
ಚಿತ್ರಕ್ಕೆ “ಕ್ಯೂ’ ಎಂದು ಹೆಸರಿಟ್ಟಿದ್ದು ರಿಯಲ್ ಸ್ಟಾರ್ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಳ್ಳಲಿದ್ದು ಅವರೊಂದಿಗೆ ಅವಂತಿಕಾ ದಸ್ಸಾನಿ ನಾಯಕಿಯಾಗಿ ಕನ್ನಡ ಚಿತ್ರರಂಗದಲ್ಲಿ ಅದೃಷ್ಠ ಪರೀಕ್ಷೆಗೆ ಮುಂದಾಗಿದ್ದಾರೆ
ಕನ್ನಡ, ತೆಲುಗು, ತಮಿಳು ಸೇರಿದಂತೆ 3 ಭಾಷೆಗಳಲ್ಲಿ, ಬಿಗ್ ಬಜೆಟ್ ನಲ್ಲಿ ನಿರ್ಮಾಣವಾಗುತ್ತಿರುವ ಆ ಚಿತ್ರದ ಹೆಸರು “ಕ್ಯೂ” (ಕಿ). ತಮ್ಮದೇ ಆದ ನಾಗಶೇಖರ್ ಮ್ಯಾಜಿಕ್ಸ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸುತ್ತಿರುವ ನಾಗಶೇಖರ್ ಕಥೆ, ಚಿತ್ರಕಥೆಯ ಜೊತೆಗೆ ಸಂಗೀತದ ಜವಾಬ್ದಾರಿಯನ್ನೂ ಸಹ ತಾವೇ ಹೊತ್ತಿದ್ದಾರೆ.
ರಾಮ್ ಚಿರು ಲೈನ್ ಪ್ರೊಡ್ಯೂಸರ್ ಆಗಿರುವ ಈ ಚಿತ್ರವನ್ನು ಭಾವನಾ ರವಿ ಅವರು ಪ್ರೆಸೆಂಟ್ ಮಾಡುತ್ತಿದ್ದಾರೆ. ಮುಂದಿನ ತಿಂಗಳಿಂದ ಈ ಚಿತ್ರದ ಶೂಟಿಂಗ್ ಆರಂಭವಾಗಲಿದ್ದು, ಡಿ.ಜೆ. ಚಕ್ರವರ್ತಿ ಸಂಭಾಷಣೆ ರಚಿಸಿದ್ದಾರೆ.