“ಕಾಲೇಜು ಕುಮಾರ್” ನಿಂದ ನೇರ “ಡಿಸ್ಕೋ”ಗೆ ಬಂದ ವಿಕ್ಕಿ-ಸಂತೂ ಜೋಡಿ
ಕಾಲೇಜು ಕುಮಾರ ಚಿತ್ರದ ಮೂಲಕ ಮೋಡಿ ಮಾಡಿದ್ದ ನಿರ್ದೇಶಕ ಹರಿ ಸಂತೂ ಮತ್ತು ನಟ ವಿಕ್ಕಿ ವರುಣ್ ಇದೀಗ “ಡಿಸ್ಕೋ” ಚಿತ್ರದ ಮೂಲಕ ಮತ್ತೊಮ್ಮೆ ಜೊತೆಯಾಗಿದ್ದಾರೆ. ಕಾಲೇಜು ಮುಗಿಸಿಕೊಂಡು ನೇರವಾಗಿ ಡಿಸ್ಕೋಗೆ ಹೆಜ್ಜೆ ಹಾಕಿದ್ದಾರೆ
“ಅಲೆಮಾರಿ” ಚಿತ್ರದೊಂದಿಗೆ ನಿರ್ದೇಶಕನಾಗಿ ಸಿನಿ ಜರ್ನಿ ಆರಂಭಿಸಿ, ಇಲ್ಲಿಯವರೆಗೂ ಹತ್ತು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಹರಿ ಸಂತೋಷ್, ಸಾರಥ್ಯದ ಎರಡು ಚಿತ್ರಗಳ ಆರಂಭೋತ್ಸವ ಕಾರ್ತಿಕ ಸೋಮವಾರದ ಶುಭದಿನದಂದು ನೆರವೇರಿತು.

ಕೆ.ವಿ.ಎನ್ ಪ್ರೊಡಕ್ಷನ್ಸ್ ಮುಖ್ಯಸ್ಥ ವೆಂಕಟ್ ನಾರಾಯಣ್ ಹಾಗೂ ರವಿಕುಮಾರ್ ಪೋಸ್ಟರ್ ಅನಾವರಣ ಮಾಡುವ ಮೂಲಕ ನೂತನ ಚಿತ್ರಗಳಿಗೆ ಚಾಲನೆ ನೀಡಿದರು. ಡಿ.ಎಸ್ ಮ್ಯಾಕ್ಸ್‍ನ ದಯಾನಂದ್ ಸೇರಿದಂತೆ ಹಲವು ಗಣ್ಯರು ಸಮಾರಂಭಕ್ಕೆ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

ನಿರ್ದೇಶಕ ಹರಿ ಸಂತೂ ಮಾತನಾಡಿ “ಡಿಸ್ಕೋ” ಇದು ನಾಯಕನ ಅಡ್ಡ ಹೆಸರು.ವಿಕ್ಕಿ ವರುಣ್ ಚಿತ್ರದ ನಾಯಕ. ನನ್ನ ಹಾಗೂ ವಿಕ್ಕಿ ವರಣ್ ಕಾಂಬಿನೇಶನ್ ನಲ್ಲಿ “ಕಾಲೇಜ್ ಕುಮಾರ” ಚಿತ್ರದ ನಂತರ ಈ ಚಿತ್ರ ಮೂಡಿಬರುತ್ತಿದೆ. ಇದೊಂದು ಹಳ್ಳಿಯಲ್ಲಿ ನಡೆಯುವ ಕಥೆ. ನಮ್ಮ ಪೆನ್ ಎನ್ ಪೇಪರ್ ಸ್ಟುಡಿಯೋಸ್ ಹಾಗೂ ಕಲ್ಲೂರ್ ಸಿನಿಮಾಸ್ ಬ್ಯನಾರ್ ನಲ್ಲಿ ಈ ಚಿತ್ರ ಮೂಡಿ ಬರುತ್ತಿದೆ. ಪ್ರಶಾಂತ್ ಕಲ್ಲೂರ್ ಹಾಗೂ ಹರೀಶ್ ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ. ಧ್ರುವ್ ಸಂಗೀತ ನೀಡಲಿದ್ದಾರೆ ಎಂದರು

ನಾಯಕ ವಿಕ್ಕಿ ವರುಣ್ ಮಾತನಾಡಿ ನಾಯಕನಾಗಿ ನಟಿಸುತ್ತಿರುವ ನಾಲ್ಕನೇ ಚಿತ್ರ. ಹಿಂದಿನ ಮೂರು ಚಿತ್ರಗಳೆ ಬೇರೆ ತರಹ. ಇದೇ ಬೇರೆ ತರಹ. ನಾನು ಹೇಗೆ ಇದ್ದಿನೊ ಅದೇ ತರಹ ಪಾತ್ರ ಎನ್ನಬಹುದು. ಚಿತ್ರಕ್ಕೆ ನಾನೇ ಕಥೆ ಬರೆದಿದ್ದೇನೆ. ಇದು ಹಳ್ಳಿಯಿಂದ ಸಿಟಿಗೆ ಬಂದ ಹುಡುಗನ ಕಥೆ ಅಲ್ಲ. ಹಳ್ಳಿಯನ್ನೇ ಸಿಟಿ ಮಾಡಲು ಹೊರಟ ಹುಡುಗನ ಕಥೆ. ಹರಿ ಸಂತೋಷ್ ಈ ಚಿತ್ರಕ್ಕೆ ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ ಎಂದರು
ಸಹ ನಿರ್ಮಾಪಕರಾದ ಪ್ರಶಾಂತ್ ಕಲ್ಲೂರ್, ಹರೀಶ್ ಹಾಗೂ ಸಂಗೀತ ನಿರ್ದೇಶಕ ಧ್ರುವ್ “ಡಿಸ್ಕೊ” ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

