Vicky Varun-Dhanya Ramkumar's 'Kalapathar' releases on September 13

ವಿಕ್ಕಿ ವರುಣ್ – ಧನ್ಯಾ ರಾಮಕುಮಾರ್ ಜೋಡಿಯ “ಕಾಲಾಪತ್ಥರ್” ಸೆಪ್ಟಂಬರ್ 13ಕ್ಕೆ ಬಿಡುಗಡೆ - CineNewsKannada.com

ವಿಕ್ಕಿ ವರುಣ್ – ಧನ್ಯಾ ರಾಮಕುಮಾರ್ ಜೋಡಿಯ “ಕಾಲಾಪತ್ಥರ್” ಸೆಪ್ಟಂಬರ್ 13ಕ್ಕೆ ಬಿಡುಗಡೆ

ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ “ಕಾಲಾಪತ್ಥರ್” ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 13 ರಂದು ಬಿಡುಗಡೆಯಾಗಲಿದೆ. ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ ಚಿತ್ರ , ಆರಂಭದಿಂದಲೂ ಕುತೂಹಲ ಕೆರಳಿಸಿದೆ

ನಾಯಕ, ನಿರ್ದೇಶಕ ವಿಕ್ಕಿ ವರುಣ್ ಮಾತನಾಡಿ ಕನ್ನಡ ಚಿತ್ರರಂಗಕ್ಕೆ ಬಂದು ಹದಿನೈದು ವರ್ಷಗಳಾಯಿತು. ಸೆಪ್ಟೆಂಬರ್ ಗೆ ಸೂರಿ ಅವರ ನಿರ್ದೇಶನದಲ್ಲಿ ನಾಯಕನಾಗಿ ನಟಿಸಿದ್ದ “ಕೆಂಡಸಂಪಿಗೆ” ಚಿತ್ರ ತೆರೆಕಂಡು ಒಂಭತ್ತು ವರ್ಷಗಳಾಗುತ್ತಿದೆ. ನಿರ್ದೇಶಿಸಿ, ನಾಯಕನಾಗೂ ನಟಿಸಿರುವ “ಕಾಲಾಪತ್ಥರ್” ಚಿತ್ರ ಕೂಡ ಸೆಪ್ಟೆಂಬರ್ ನಲ್ಲೇ ಬಿಡುಗಡೆಯಾಗುತ್ತಿರುವುದು ಖುಷಿಯಾಗಿದೆ ಎಂದರು.

“ಕಾಲಾಪತ್ಥರ್”, ಕಪ್ಪುಕಲ್ಲಿಗೆ ಸಂಬಂಧಿಸಿದ ಕಥೆ. ಸತ್ಯಪ್ರಕಾಶ್ ಕಥೆ ಬರೆದಿದ್ದಾರೆ. ವಿಜಾಪುರದ ಬಳಿ ಹೆಚ್ಚು ಚಿತ್ರೀಕರಣವಾಗಿದೆ. ಆಲಮಟ್ಟಿಯ ಹಿನ್ನೀರಿನ ಜೈನಾಪುರ ಎಂಬ ಸ್ಥಳದಲ್ಲಿ ಚಿತ್ರೀಕರಣ ನಡೆದಿದ್ದು, ಚಿತ್ರದ ಚಿತ್ರೀಕರಣವಾಗಿ ಕೆಲವೇ ತಿಂಗಳಲ್ಲೇ ಈ ಹಳ್ಳಿ ನೀರಿನಲ್ಲಿ ಮುಳುಗಡೆಯಾಗಿದೆ ಎಂದು ಮಾಹಿತಿ ನೀಡಿದರು

ನಾಯಕಿ ಧನ್ಯ ರಾಮ್ ಕುಮಾರ್ ಮಾತನಾಡಿ ಚಿತ್ರದಲ್ಲಿ ಶಿಕ್ಷಕಿಯ ಪಾತ್ರ. ಗಂಗ ನನ್ನ ಪಾತ್ರದ ಹೆಸರು. ನನ್ನ ಪಾತ್ರ ಹಾಗೂ ಚಿತ್ರ ಎರಡು ಚೆನ್ನಾಗಿದೆ. ನನಗೆ ಈಗಷ್ಟೇ ವಿಕ್ಕಿ ಅವರು ಚಿತ್ರದ ತುಣುಕು ತೋರಿಸಿದ್ದರು. ಅದನ್ನು ನೋಡಿದ ಮೇಲೆ ನಾನಂತೂ ಚಿತ್ರ ನೋಡಲು ಕಾತುರದಿಂದ ಕಾಯುತ್ತಿದ್ದೇನೆ ಎಂದರು

ಛಾಯಾಗ್ರಾಹಕ ಸಂದೀಪ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin