ವಿಜಯ್ ರಾಘವೇಂದ್ರ- ರಂಜನಿ ರಾಘವನ್ ಜೋಡಿಯ “ ಸ್ವಪ್ನ” ಚಿತ್ರ ಬಿಡುಡುಗಡೆ ಸಿದ್ದತೆ
ಕನ್ನಡ ಚಿತ್ರರಂಗದ ಸದಭಿರುಚಿ ನಿರ್ದೇಶಕ ಎಂದೇ ಖ್ಯಾತಿ ಪಡೆದಿರುವ ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಅವರು ನಿರ್ದೇಶನ ಮಾಡಿರುವ “ ಸ್ವಪ್ನ” ಚಿತ್ರ ಬಿಡುಗಡೆಯಾಗಲು ಸಜ್ಜಾಗಿದೆ. ಸ್ವಪ್ನಕ್ಕೆ ಮತ್ತೊಂದು ಪ್ರಮುಖ ಆಕರ್ಷಣೆ ಕನ್ನಡದ ಎರಡು ಪ್ರತಿಭಾನ್ವಿತ ಕಲಾವಿದರಾದ ವಿಜಯ್ ರಾಘವೇಂದ್ರ ಹಾಗು ರಂಜನಿ ರಾಘವನ್ ಜೊತೆಯಾಗಿರುವುದು ಚಿತ್ರದ ಬಗ್ಗೆ ಮತ್ತಷ್ಟು ಕುತೂಹಲ ಹೆಚ್ಚುವಂತೆ ಮಾಡಿದೆ.
ಮಲೈ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ಬಾಬು ನಾಯ್ಕ್ ನಿರ್ಮಾಣ ಮಾಡಿರುವ ಸ್ವಪ್ನ ಮಂಟಪ' ಚಿತ್ರ ಇತ್ತೀಚೆಗೆ ಸೆನ್ಸಾರ್ ಆಗಿದೆ. ಸೆನ್ಸಾರ್ ಮಂಡಳಿ ಚಿತ್ರದ ಆಶಯ ಮತ್ತು ಅಭಿವ್ಯಕ್ತಿ ವಿಧಾನ ಮೆಚ್ಚಿ
ಯು’ ಪ್ರಮಾಣ ಪತ್ರ ನೀಡಿರುವುದು ಚಿತ್ರದ ಬಗ್ಗೆ ನಿರೀಕ್ಷೆ ದುಪ್ಪಟ್ಟು ಮಾಡಿದೆ.
`ಸ್ವಪ್ನ ಮಂಟಪ’ ಚಿತ್ರವನ್ನು ಬರಗೂರು ರಾಮಚಂದ್ರಪ್ಪ ಅವರು ತಮ್ಮದೇ ಕಾದಂಬರಿಯನ್ನು ಆಧರಿಸಿ ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡುವುದರ ಜೊತೆಗೆ ನಿರ್ದೇಶನ ಮಾಡಿದ್ದಾರೆ.
`ಸ್ವಪ್ನ ಮಂಟಪ’ ಚಿತ್ರ ಪಾರಂಪರಿಕ ಸ್ಥಳಗಳ ಮಹತ್ವ ಮತ್ತು ಸಂರಕ್ಷಣೆಯ ಅಗತ್ಯ ಪ್ರತಿಪಾದಿಸುವ ಕಥಾ ವಸ್ತುವನ್ನು ಒಳಗೊಂಡಿದೆ. ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ ಸ್ವಪ್ನ ಮಂಟಪ ಕೆಡವಿ ಹಾಕುವ ಪ್ರಯತ್ನವನ್ನು ಕೆಲವರು ಮಾಡಿದಾಗ ಕಥಾ ನಾಯಕ ಮತ್ತು ನಾಯಕಿ ಒಂದಾಗಿ ಜನರನ್ನು ಸಂಘಟಿಸಿ ಪಾರಂಪರಿಕ ಚಾರಿತ್ರಿಕ ಮಂಟಪವನ್ನು ಉಳಿಸುತ್ತಾರೆ. ಸಾಂಕೇತಿಕವಾದ ಈ ಕಥಾವಸ್ತುವು ಪಾರಂಪರಿಕ ಸ್ಥಳಗಳ ರಕ್ಷಣೆ ವಿಷಯದಲ್ಲಿ ಪ್ರಾತಿನಿಧಿಕವೂ ಆಗುತ್ತದೆ.
ಕಥಾ ನಾಯಕರಾಗಿ ವಿಜಯ ರಾಘವೇಂದ್ರ ಮತ್ತು ನಾಯಕಿಯಾಗಿ ರಂಜಿನಿ ರಾಘವನ್ ಅಭಿನಯಿಸಿದ್ದಾರೆ. ಇಬ್ಬರೂ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವುದು ಒಂದು ವಿಶೇಷ, ಉಳಿದ ತಾರಾಗಣದಲ್ಲಿ ಸುಂದರರಾಜ್, ಶೋಭಾ ರಾಘವೇಂದ್ರ, ರಜಿನಿ, ಸುಂದರರಾಜ ಅರಸು, ಅಂಬರೀಶ್ ಸಾರಂಗಿ, ರಾಜಪ್ಪ ದಳವಾಯಿ, ವೆಂಕಟರಾಜು, ಮೈಸೂರು ಮಂಜುಳ, ಉಮ್ಮತ್ತೂರು ಬಸವರಾಜು, ಶಿವಲಿಂಗ ಪ್ರಸಾದ್, ಭಾರತಿ ರಮೇಶ್, ಗುಂಡಿ ರಮೇಶ್ ಮುಂತಾದವರು ಇದ್ದಾರೆ.
ಈ ಚಿತ್ರಕ್ಕೆ ಸುರೇಶ್ ಅರಸು ಸಂಕಲನ, ನಾಗರಾಜ್ ಆದವಾನಿ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ, ತ್ರಿಭುವನ್ ನೃತ್ಯ ಸಂಯೋಜನೆಯನ್ನು ಒಳಗೊಂಡಿದೆ. ನಟರಾಜ್ ಶಿವು ಮತ್ತು ಪ್ರವೀಣ್, ಸಹ ನಿರ್ದೇಶಕರಾಗಿ, ಗೋಪಾಲಕೃಷ್ಣ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.