Vinay Rajkumar is the hero for Simple Suni's next film

ಸಿಂಪಲ್ ಸುನಿ ಮುಂದಿನ ಚಿತ್ರಕ್ಕೆ ವಿನಯ್ ರಾಜ್ ಕುಮಾರ್ ನಾಯಕ - CineNewsKannada.com

ಸಿಂಪಲ್ ಸುನಿ ಮುಂದಿನ ಚಿತ್ರಕ್ಕೆ ವಿನಯ್ ರಾಜ್ ಕುಮಾರ್ ನಾಯಕ

ರೋಮ್ಯಾಂಟಿಕ್ ಸಬ್ಜೆಕ್ಟ್ ಚಿತ್ರದಲ್ಲಿ ದೊಡ್ಮನೆ ಹುಡುಗ.

ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ನಿರ್ದೇಶಕ ಸಿಂಪಲ್ ಸುನಿ ಹೊಸದೊಂದು ಚಿತ್ರಕ್ಕೆ ಆಕ್ಷನ್ ಕಟ್ ಹೇಳಲು ತಯಾರಿ ನಡೆಸುತ್ತಿದ್ದಾರೆ. ವಿಶೇಷ ಅಂದ್ರೆ ಈ ಚಿತ್ರದ ಮೂಲಕ ಇದೇ ಮೊದಲ ಬಾರಿಗೆ ದೊಡ್ಮನೆ ಹುಡುಗ ವಿನಯ್ ರಾಜ್ ಕುಮಾರ್ ಗೆ ಸಿಂಪಲ್ ಸುನಿ ಆಕ್ಷನ್ ಕಟ್ ಹೇಳುತ್ತಿದ್ದಾರೆ.

Simlpe suni

ಸಿಂಪಲ್ ಸುನಿ ಮುಂದಿನ ಚಿತ್ರ ರೋಮ್ಯಾಂಟಿಕ್ ಸಬ್ಜೆಕ್ಟ್ ಒಳಗೊಂಡಿದ್ದು, ಈ ಚಿತ್ರದಲ್ಲಿ ನಾಯಕ ನಟನಾಗಿ ವಿನಯ್ ರಾಜ್ ಕುಮಾರ್ ನಟಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಸಿಂಪಲ್ ಸುನಿ ಹಾಗೂ ವಿನಯ್ ರಾಜ್ ಕುಮಾರ್ ಒಟ್ಟಿಗೆ ಕೆಲಸ ಮಾಡುತ್ತಿದ್ದು, ಇಬ್ಬರ ಕಾಂಬಿನೇಶನ್ ನಿರೀಕ್ಷೆ ಮೂಡಿಸಿದೆ. ಚಿತ್ರಕ್ಕೆ ಪ್ರಸನ್ನ ಕಥೆ ಬರೆದಿದ್ದು, ಚಿತ್ರಕಥೆ, ಸಂಭಾಷಣೆ ಬರೆದು ಸಿಂಪಲ್ ಸುನಿ ಆಕ್ಷನ್ ಕಟ್ ಹೇಳುತ್ತಿದ್ದಾರೆ.

Vinay Rajkumar

ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಸಿಂಪಲ್ ಸುನಿ ಸದ್ಯದಲ್ಲೇ ಚಿತ್ರದ ಟೈಟಲ್, ತಾರಾಬಳಗ ಎಲ್ಲದರ ಬಗ್ಗೆ ಅಧೀಕೃತ ಮಾಹಿತಿ ಹಂಚಿಕೊಳ್ಳೋದಾಗಿ ತಿಳಿಸಿದ್ದಾರೆ. ವಿನಯ್ ರಾಜ್ ಕುಮಾರ್ ಅಭಿನಯದ ‘ಪೆಪೆ’, ‘ಗ್ರಾಮಾಯಣ’, ‘ಅದೊಂದಿತ್ತು ಕಾಲ’ ಸಿನಿಮಾಗಳು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಈ ಬಾರಿ ದೊಡ್ಮನೆ ಅಭಿಮಾನಿಗಳಿಗೆ ಬ್ಯಾಕ್ ಟು ಬ್ಯಾಕ್ ಸಿನಿಮಾಗಳ ಉಡುಗೊರೆ ನೀಡೋಕೆ ವಿನಯ್ ರಾಜ್ ಕುಮಾರ್ ಕೂಡ ರೆಡಿಯಾಗಿದ್ದಾರೆ.

ಅಂದ್ಹಾಗೆ ಸಿಂಪಲ್ ಸುನಿ, ವಿನಯ್ ರಾಜ್ ಕುಮಾರ್ ಕಾಂಬಿನೇಶನ್ ಮೊದಲ ಚಿತ್ರಕ್ಕೆ ಮೈಸೂರು ರಮೇಶ್ ಬಂಡವಾಳ ಹೂಡುತ್ತಿದ್ದು, ವೀರ್ ಸಮರ್ಥ್ ಸಂಗೀತ ನಿರ್ದೇಶನ, ಸಭಾ ಛಾಯಾಗ್ರಾಹಣವಿರಲಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin