'Vishnu Priya' romantic song released

‘ವಿಷ್ಣು ಪ್ರಿಯಾ’ ಸುಮ್ಮಸುಮ್ಮನೆ ರೊಮ್ಯಾಂಟಿಕ್ ಸಾಂಗ್ ಬಿಡುಗಡೆ - CineNewsKannada.com

‘ವಿಷ್ಣು ಪ್ರಿಯಾ’ ಸುಮ್ಮಸುಮ್ಮನೆ ರೊಮ್ಯಾಂಟಿಕ್ ಸಾಂಗ್ ಬಿಡುಗಡೆ

ಕೆ.ಮಂಜು ಪುತ್ರ ಶ್ರೇಯಸ್ ಕೆ.ಮಂಜು,ಕಣ್ಸನ್ನೆ ಬೆಡಗಿ ಪ್ರಿಯಾ ವಾರಿಯರ್ ನಟಿಸಿರುವ ‘ವಿಷ್ಣು ಪ್ರಿಯಾ’ ಫೆಬ್ರವರಿ 21ಕ್ಕೆ ರಾಜ್ಯಾದ್ಯಂತ ತೆರೆ ಕಾಣಲಿದೆ

ತೊಂಭತ್ತರ ದಶಕದ ಪ್ರೇಮಕಥೆಯನ್ನು ಹೇಳುವ ಈ ಚಿತ್ರದ ‘ಸುಮ್ಮನೆ ಸುಮ್ಮನೆ’ ಎಂಬ ಕ್ಯೂಟ್ ರೊಮ್ಯಾಂಟಿಕ್ ಸಾಂಗ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ.

ಸಖತ್ ವೈರಲ್ ಆಗುತ್ತಿದೆ‌. ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ ಇರುವ ಹಾಡಿನಲ್ಲಿ ಶ್ರೇಯಸ್, ಪ್ರಿಯಾ ವಾರಿಯರ್ ಜೋಡಿಯ ಲವಲವಿಕೆಯ ಅಭಿನಯ ನೋಡುಗರನ್ನು ಸೆಳೆಯುತ್ತಿದೆ.

ಮಲಯಾಳಂನ ವಿ.ಕೆ.ಪ್ರಕಾಶ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು. ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ಗೋಪಿಸುಂದರ್ ಈ ಚಿತ್ರಕ್ಕೆ ಮ್ಯೂಸಿಕ್ ಮಾಡಿದ್ದಾರೆ.

ಈ ಚಿತ್ರಕ್ಕೆ ರವಿ ಶ್ರೀವತ್ಸ ಚಿತ್ರಕಥೆ, ಸಂಭಾಷಣೆ ಬರೆದಿದ್ದು, ವಿನೋದ್ ಭಾರತಿ ಅವರ ಛಾಯಾಗ್ರಹಣ, ಸುರೇಶ್ ಅರಸ್ ಸಂಕಲನ ಚಿತ್ರಕ್ಕಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin