'Vishnu Priya' trailer released by Kiccha Sudeep: Curiosity increases

ವಿಷ್ಣು ಪ್ರಿಯಾ’ ಟ್ರೈಲರ್ ಕಿಚ್ಚ ಸುದೀಪ್ ಬಿಡುಗಡೆ : ಕುತೂಹಲ ಹೆಚ್ಚಳ - CineNewsKannada.com

ವಿಷ್ಣು ಪ್ರಿಯಾ’ ಟ್ರೈಲರ್ ಕಿಚ್ಚ ಸುದೀಪ್ ಬಿಡುಗಡೆ : ಕುತೂಹಲ ಹೆಚ್ಚಳ

ಯುವ ನಟ ಶ್ರೇಯಸ್ ಮಂಜು ಮತ್ತು ಮಲೆಯಾಳಿ ಬೆಡಗಿ ಕಣ್ಸನ್ನೆ ನಾಯಕಿ ಪ್ರಿಯಾ ವಾರಿಯರ್ ಅಭಿನಯದ “ವಿಷ್ಣು ಪ್ರಿಯಾ” ಚಿತ್ರ ಬಿಡುಗಡೆಗೆ ಸಜ್ಜಾಗಿರುವ ಹಿನ್ನೆಲೆಯಲ್ಲಿ ಚಿತ್ರದ ಟ್ರೈಲರ್ ಅನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿ ಶುಭ ಹಾರೈಸಿದ್ಧಾರೆ

ಈ ವೇಳೆ ಹಿರಿಯ ನಿರ್ದೇಶಕ ಎಸ್. ನಾರಾಯಣ್, ಭಾರತಿ ವಿಷ್ಣುವರ್ಧನ್, ನಾಗತಿಹಳ್ಳಿ ಚಂದ್ರಶೇಖರ್, ಇಂದ್ರಜಿತ್ ಲಂಕೇಶ್, ಗುರು ದೇಶಪಾಂಡೆ ಮತ್ತಿತರರು ಸಾಕ್ಷಿಯಾಗಿ ತಂಡಕ್ಕೆ ಶುಭ ಹಾರೈಸಿದರು

ಕಿಚ್ಚ ಸುದೀಪ್ ಮಾತನಾಡಿ ಲವ್ ಸ್ಟೋರಿಗಳನ್ನು ಎಲ್ಲರೂ ಮಾಡಿದರೂ, ಅದನ್ನು ಪ್ರೆಸೆಂಟ್ ಮಾಡುವ ಸ್ಟೈಲ್ ಮೇಲೆ ಅದರ ಸೋಲು, ಗೆಲುವು ನಿಂತಿರುತ್ತೆ. ಒಬ್ಬನೇ ವ್ಯಕ್ತಿ 50 ಸಿನಿಮಾ ಪೆÇ್ರಡ್ಯೂಸ್ ಮಾಡುವುದು ಚಿಕ್ಕ ವಿಷಯವಲ್ಲ.ಒಬ್ಬ ನಿರ್ಮಾಪಕನಾಗಿ ಕನ್ನಡ ಚಿತ್ರರಂಗದಲ್ಲಿ ಇದು ದೊಡ್ಡ ಸಾಧನೆ. ಈಗ ನೋಡಿದ ಮೂರೂ ಹಾಡುಗಳು ಸುಂದರವಾಗಿವೆ. ಟ್ರೈಲರನ್ನೂ ಚೆನ್ನಾಗಿ ಕಟ್ ಮಾಡಿದ್ದಾರೆ, ಶ್ರೇಯಸ್ ನಲ್ಲಿರುವ ಶ್ರದ್ಧೆಯೇ ಆತನನ್ನು ಬೆಳೆಸುತ್ತದೆ ಎಂದು ಹೇಳಿದರು.

ಎಸ್.ನಾರಾಯಣ್ ಮಾತನಾಡಿ ವಿಷ್ಣು ಎಂಬ ಹೆಸರಲ್ಲಿ ಪ್ರೀತಿ, ಭಾವ, ಭಾವನೆಯಿದೆ. ಒಟ್ಟಾರೆ ಒಂದು ಶಕ್ತಿಯಿದೆ.ಆಥರದ ಶಕ್ತಿಯಿಟ್ಡುಕೊಂಡು ತೊಂಭತ್ತರ ದಶಕದ ಪ್ರೇಮಕಥೆ ಮಾಡಿದ್ದಾರೆ. ಕಣ್ಣಿಗೆ, ಮನಸಿಗೆ ಮುದ ಕೊಡುವ ಹಾಡುಗಳು, ಶ್ರೇಯಸ್ ಭವಿಷ್ಯದ ಪೈರು. ಚಿತ್ರೀಕರಣ ಸಮಯದಲ್ಲಿ ನನಗಿಂತ ಮೊದಲು ಶೂಟಿಂಗ್ ಸೆಟ್ ಗೆ ಬರೋರು ಇಬ್ಬರು, ಸುದೀಪ್, ಇನ್ನೊಂದು ಶ್ರೇಯಸ್, ತುಂಬಾ ಶ್ರದ್ಧೆ ಇರುವ ಹುಡುಗ. ಬಹಳ ದಿನಗಳ ನಂತರ ಒಂದು ಒಳ್ಳೆ ಲವ್ ಸ್ಟೋರಿ ತೆರೆಗೆ ಬರ್ತಿದೆ. ಇಂಥ ಸಿನಿಮಾಗಳು ಗೆಲ್ಲಬೇಕು. ಕನ್ನಡದಲ್ಲಿ 48 ಸಿನಿಮಾ ಮಾಡಿ ಸೋಲು ಗೆಲುವುಗಳೆರಡನ್ನೂ ಸಮನಾಗಿ ಸ್ವೀಕರಿಸಿದಂಥ ನಿರ್ಮಾಪಕ ಮಂಜು ಬೇಗನೇ 50ನೇ ಚಿತ್ರ ಮಾಡಲಿ, ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು ಎಂದು ಹೇಳಿದರು.

ಭಾರತಿ ವಿಷ್ಣುವರ್ಧನ್ ಮಾತನಾಡಿ ಇವತ್ತು ನಮ್ಮೆಜಮಾನ್ರು ಇದ್ದಿದ್ರೆ ತುಂಬಾ ಖುಷಿಪಡ್ತಿದ್ರು. ನನ್ನ ಬಿಟ್ಟು ನಿನ್ ಮಗನ್ನ ಹಾಕ್ಕೊಂಡು ಸಿನಿಮಾ ಮಾಡು ಅಂತ ಆಗಾಗ ಹೇಳ್ತಿದ್ದರು. ಈಚೆಗೆ ಜನ ಥೇಟರಿಗೆ ಬರೋದು ಕಮ್ಮಿಯಾಗಿದೆ. ಫ್ಯಾಮಿಲಿ ನೋಡುವಂಥ ಚಿತ್ರಗಳು ಬಂದರೆ ಚಿತ್ರಮಂದಿರಗಳು ತುಂಬುತ್ತವೆ. ದೇವರು ಎಲ್ಲರಿಗೂ ಒಂದು ಅದೃಷ್ಟ ಅಂತ ಕೊಟ್ಟಿರ್ತಾನೆ. ಅದು ಯಾವಾಗ ಬರುತ್ತೆ ಅಂತ ಗೊತ್ತಿರಲ್ಲ, ಬರೋವರ್ಗೂ ನಾವು ಕಾಯಬೇಕು. ಖಂಡಿತ ಸಿಕ್ಕೇ ಸಿಗುತ್ತೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಕೆ.ಮಂಜುಗೆ ಒಳ್ಳೇದಾಗಲಿ ಎಂದರು.

ನಂತರ ನಿರ್ದೇಶಕರಾದ ಇಂದ್ರಜಿತ್ ಲಂಕೇಶ್, ಗುರು ದೇಶಪಾಂಡೆ, ನಟಿ ನಿಶ್ವಿಕಾ ನಾಯ್ಡು, ಚಿತ್ರದ ನಿರ್ದೇಶಕ ವಿ.ಕೆ. ಪ್ರಕಾಶ್ ಎಲ್ಲರೂ ತಂದೆ, ಮಗ ಇಬ್ಬರಿಗೂ ಶುಭಾಶಯ ಕೋರಿದರು.

ಫೆಬ್ರವರಿ 21ಕ್ಕೆ ರಾಜ್ಯಾದ್ಯಂತ ತೆರೆ ಕಾಣಲಿರುವ ವಿಷ್ಣುಪ್ರಿಯಾ ತೊಂಭತ್ತರ ದಶಕದಲ್ಲಿ ನಡೆಯುವ ಅಪರೂಪದ ಇನ್ ಟೆನ್ಸ್ ಲವ್ ಸ್ಟೋರಿಯನ್ನು ಹೇಳೋ ಚಿತ್ರ. ಈಗಾಗಲೇ ‘ಸುಮ್ಮನೆ ಸುಮ್ಮನೆ’ ಸೇರಿ ಮೂರೂ ಹಾಡುಗಳು ಎಲ್ಲರ ಬಾಯಲ್ಲಿ ಗುನುಗುತ್ತಿವೆ.

ಮಲಯಾಳಂ ಸೇರಿದಂತೆ ಹಲವಾರು ಯಶಸ್ವಿ ಚಿತ್ರಗಳ ನಿರ್ದೇಶಕ ವಿ.ಕೆ.ಪ್ರಕಾಶ್ ಅವರು ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು. ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ಗೋಪಿ ಸುಂದರ್ ಚಿತ್ರದ ಹಾಡುಗಳಿಗೆ ಮ್ಯೂಸಿಕ್ ಕಂಪೆÇೀಜ್ ಮಾಡಿದ್ದಾರೆ. ಅಲ್ಲದೆ ವಿಷ್ಣು ಪ್ರಿಯಾ ಚಿತ್ರಕ್ಕೆ ವಿನೋದ್ ಭಾರತಿ ಛಾಯಾಗ್ರಹಣ ಹಾಗೂ ಸುರೇಶ್ ಅರಸ್ ಸಂಕಲನವಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin