"Yathabhava" is a court drama genre film that has passed the censors

ಸೆನ್ಸಾರ್ ನಲ್ಲಿ ಪಾಸಾದ ಕೋರ್ಟ್‍ಡ್ರಾಮ ಜಾನರ್ “ಯಥಾಭವ” ಚಿತ್ರ - CineNewsKannada.com

ಸೆನ್ಸಾರ್ ನಲ್ಲಿ ಪಾಸಾದ ಕೋರ್ಟ್‍ಡ್ರಾಮ ಜಾನರ್ “ಯಥಾಭವ” ಚಿತ್ರ

ಗೌತಮ್ ಬಸವರಾಜು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ “ಯಥಾಭವ” ಚಿತ್ರವನ್ನು ವೀಕ್ಷಿಸಿರುವ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ಚಿತ್ರ ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಮೂಲಕ “ಯಥಾಭವ” ಜನರ ಮನ ಗೆದ್ದಿದೆ.

ಪವನ್ ಶಂಕರ್ ಹಾಗೂ ಸಹನ ಸುಧಾಕರ್ ನಾಯಕ – ನಾಯಕಿಯಾಗಿ ನಟಿಸಿದ್ದಾರೆ. ಹಿರಿಯ ನಟ ರಾಕ್ ಲೈನ್ ಸುಧಾಕರ್ ಅವರ ಪುತ್ರ ಗೌತಮ್ ಸುಧಾಕರ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ದತ್ತಣ್ಣ, ಬಾಲ ರಾಜವಾಡಿ, ಗೋಪಾಲಕೃಷ್ಣ ದೇಶಪಾಂಡೆ,ಮಾಸ್ಟರ್ ಶಮಂತ್, ನೀನಾಸಂ ಆನಂದ್, ಉಮಾ ಹೆಬ್ಬಾರ್, ಮಹೇಶ್ ಕಾಳಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಸುಜಾತ ಕುಮಾರಿ ಹಾಗೂ ಅನಿಲ್ ಕುಮಾರ್ ಬಿ.ಎನ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಹರ್ಷ್ ಮಿಶ್ರ ಛಾಯಾಗ್ರಹಣ, ಹರೀಶ್ ಚೌಧರಿ ಸಂಕಲನ, ಕುಂಗ್ಫು ಚಂದ್ರು ಸಾಹಸ ನಿರ್ದೇಶನ, ಸುಚಿತ್ ಚವ್ಹಾಣ್, ನೃತ್ಯ ನಿರ್ದೇಶನ ಹಾಗೂ ಸ್ಮಿತ ಕುಲಕರ್ಣಿ ಅವರ ಕಲಾ ನಿರ್ದೇಶನವಿದೆ. ಉತ್ಸವ್ ಶ್ರೇಯಸ್ ಸಂಗೀತ ನೀಡಿರುವ ಈ ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಸುರೇಶ್ ರೆಡ್ಡಿ ಹಾಗೂ ಅಭಿಷೇಕ್ ಅಕ್ಕಣ್ಣನವರ್ ಹಾಡುಗಳನ್ನು ಬರೆದಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin