Young actor Virat's film 'Royal' to release on January 24

ಯುವ ನಟ ವಿರಾಟ್ ಅಭಿನಯದ `ರಾಯಲ್’ ಚಿತ್ರ ಜನವರಿ 24ಕ್ಕೆ ಬಿಡುಗಡೆ - CineNewsKannada.com

ಯುವ ನಟ ವಿರಾಟ್ ಅಭಿನಯದ `ರಾಯಲ್’ ಚಿತ್ರ ಜನವರಿ 24ಕ್ಕೆ ಬಿಡುಗಡೆ

ಜಯಣ್ಣ ಕಂಬೈನ್ಸ್ ಬ್ಯಾನರ್ ಅಡಿ ಜಯಣ್ಣ ಮತ್ತು ಭೋಗೇಂದ್ರ ಜೊತೆಯಾಗಿ ನಿರ್ಮಿಸಿರುವ, ದಿನಕರ್ ತೂಗುದೀಪ ನಿರ್ದೇಶನದಲ್ಲಿ ವಿರಾಟ್ ಅಭಿನಯಿಸಿರುವ `ರಾಯಲ್’ ಚಿತ್ರ ಜನವರಿ 24ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರದ ಮೂರು ಹಾಡುಗಳು ಬಿಡುಗಡೆಯಾಗಿದ್ದು, ಸದ್ಯದಲ್ಲೇ ಚಿತ್ರದ ಟ್ರೇಲರ್ ಬಿಡುಗಡೆ ಆಗಲಿದೆ.

ನಿರ್ದೇಶಕ ದಿನಕರ್ ತೂಗುದೀಪ ಮಾಹಿತಿ ನೀಡಿ, `ಚಿತ್ರದ ಹಾಡುಗಳು ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಿವೆ. ಚಿತ್ರ ಚೆನ್ನಾಗಿ ಮೂಡಿಬರುವುದಕ್ಕೆ ಕಾರಣ ಕಥೆಗಾರ ರಘು ನಿಡುವಳ್ಳಿ. ಸಂಭಾಷಣೆಯನ್ನೂ ಅವರೇ ಬರೆದಿದ್ದಾರೆ. ತಂತ್ರಜ್ಞರ ಸಹಕಾರದಿಂದ ಬಹಳ ಚೆನ್ನಾಗಿ ಮೂಡಿಬಂದಿದೆ. ನಿರ್ಮಾಪಕರು ಕೇಳಿದ್ದೆಲ್ಲವನ್ನೂ ಕೊಟ್ಟಿದ್ದಾರೆ. ಚಿತ್ರದಿಂದ ದುಡ್ಡು ಮಾಡಬೇಕು ಎನ್ನುವುದಕ್ಕಿಂತ, ಚಿತ್ರರಂಗಕ್ಕೊಬ್ಬ ಒಳ್ಳೆಯ ಹೀರೋ ಕೊಡಬೇಕು ಎಂದು ಸಹಕಾರ ಕೊಟ್ಟಿದ್ದಾರೆ ಎಂದರು

ವಿರಾಟ್ ಎರಡನೆಯ ಸಿನಿಮಾಗೆ ಇಷ್ಟೊಂದು ಖರ್ಚು ಮಾಡಬೇಕಿತ್ತಾ ಎಂದನಿಸಬಹುದು. ಆದರೆ, ವಿರಾಟ್‍ನನ್ನು ಕೊಡುಗೆಯಾಗಿ ಕೊಡಬೇಕು ಎಂಬ ಉದ್ದೇಶದಿಂದ ಚಿತ್ರ ಮಾಡಿದ್ದಾರೆ. ಬೆಂಗಳೂರು, ಮೈಸೂರು, ಮಂಗಳೂರು, ಗೋವಾ ಮುಂತಾದ ಕಡೆ ಚಿತ್ರೀಕರಣ ಮಾಡಿದ್ದೇವೆ. ಜನವರಿ ಎರಡನೇ ವಾರದಲ್ಲಿ ಟ್ರೇಲರ್ ಬಿಡುಗಡೆ ಮಾಡುತ್ತಿದ್ದೇವೆ’ ಎಂದು ಮಾಹಿತಿ ನೀಡಿದರು.

ನಾಯಕ ವಿರಾಟ್ ಮಾತನಾಡಿ `ಈ ಚಿತ್ರ ಆಗುವುದಕ್ಕೆ ಪ್ರಮುಖ ಕಾರಣ ನಿರ್ಮಾಪಕರಾದ ಜಯಣ್ಣ ಮತ್ತು ಭೋಗೇಂದ್ರ. ಬ್ಯಾನರ್‍ನಲ್ಲಿ ನನಗೆ ಇದು ಎರಡನೆಯ ಸಿನಿಮಾ. ದಿನಕರ್ ನಿರ್ದೇಶನದಲ್ಲಿ ಅಭಿನಯ ಮಾಡುವುದಕ್ಕೆ ನನಗೆ ಅವಕಾಶ ಸಿಕ್ಕಿದ್ದು ನನ್ನ ಪುಣ್ಯ. ಅವರಿಂದ ಸಾಕಷ್ಟು ಕಲಿತಿದ್ದೇನೆ. ಚಿತ್ರ ನಿಜಕ್ಕೂ ರಾಯಲ್ ಆಗಿ ಬಂದಿದೆ. ಚಿತ್ರದಲ್ಲಿ ಸಾಕಷ್ಟು ಪ್ರತಿಭಾವಂತ ಕಲಾವಿದರಿದ್ದಾರೆ. ಎಂದರು.

ನಾಯಕಿ ಸಂಜನಾ ಮಾತನಾಡಿ, `ಚಿತ್ರ ಚೆನ್ನಾಗಿ ಬಂದಿದೆ. ಹಾಡುಗಳು ಯಶಸ್ವಿಯಾಗಿವೆ. ದಿನಕರ್ ಅವರ ಚಿತ್ರಗಳನ್ನು ಎಲ್ಲರೂ ನೋಡಿದ್ದಾರೆ. ಇಷ್ಟಪಟ್ಟಿದ್ದಾರೆ. ಅವರ ಚಿತ್ರಜೀವನದಲ್ಲೇ ಇದು ವಿಭಿನ್ನವಾದ ಚಿತ್ರ. ಇನ್ನು, ಇದು ನನ್ನ ಅತ್ಯಂತ ವಿಶೇಷವಾದ ಚಿತ್ರ. ಬಹಳ ಚೆನ್ನಾಗಿ ಮೂಡಿಬಂದಿದೆ. ಚಿತ್ರದಲ್ಲಿ ಹಲವು ಸರ್ಪ್ರೈಸ್‍ಗಳಿವೆ. ಹೊಸ ವರ್ಷಕ್ಕೆ ಒಂದು ವಿಶೇಷ ಚಿತ್ರವಾಗಲಿದೆ’ ಎಂದರು.

`ರಾಯಲ್’ ಚಿತ್ರದಲ್ಲಿ ವಿರಾಟ್ ಮತ್ತು ಸಂಜನಾ ಆನಂದ್ ಜೊತೆಗೆ ರಘು ಮುಖರ್ಜಿ, ಛಾಯಾ ಸಿಂಗ್, ಅಚ್ಯುತ್ ಕುಮಾರ್, ರಂಗಾಯಣ ರಘು, ಪ್ರಮೋದ್ ಶೆಟ್ಟಿ, ರವಿ ಭಟ್, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಸಂಕೇತ್ ಛಾಯಾಗ್ರಹಣ, ಚರಣ್ ರಾಜ್ ಸಂಗೀತ, ಕೆ.ಎಂ. ಪ್ರಕಾಶ್ ಸಂಕಲನ, ಮೋಹನ್ ಬಿ. ಕೆರೆ ಕಲಾ ನಿರ್ದೇಶನ, ರವಿ ವರ್ಮ ಸಾಹಸ ನಿರ್ದೇಶನವಿದೆ. ಪ್ರೇಮ್ ಮತ್ತು ಜಯಂತ್ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin