Young talent "Keerthi"'s "I Love You" movie is all set for release

ಯುವ ಪ್ರತಿಭೆಗಳ “ಕೀರ್ತಿ” ನ ಐ ಲವ್ ಯು” ಚಿತ್ರ ಬಿಡುಗಡೆಗೆ ಸಜ್ಜು - CineNewsKannada.com

ಯುವ ಪ್ರತಿಭೆಗಳ “ಕೀರ್ತಿ” ನ ಐ ಲವ್ ಯು” ಚಿತ್ರ ಬಿಡುಗಡೆಗೆ ಸಜ್ಜು

ಪ್ರೀತಿಯ ಕುರಿತಾದ ಅನೇಕ ಚಿತ್ರಗಳು ಬಂದಿದೆ. ಆದರೆ ಒಂದರ ಹಾಗೆ ಒಂದು ಇಲ್ಲ. ಅದೇ ರೀತಿ ಹೊಸತಂಡ “ಕೀರ್ತಿ ಐ ಲವ್ ಯು” ಎಂಬ ಲವ್ ಜಾನರ್ ನ ಚಿತ್ರ ತೆರೆಯ ಮೇಲೆ ತರುತ್ತಿದೆ. ಎಲ್ಲಾ ಅಂದುಕೊಂಡಂತೆ ಆದರೆ ಸದ್ಯದಲ್ಲಿಯೇ ಚಿತ್ರ ತೆರೆಗೆ ಬರಲಿದೆ

ಪೂಜಿತ ಎಸ್ ರಾವ್ ನಿರ್ಮಾಣದಲ್ಲಿ, ನಿರಂಜನ್ ಆರಾಧ್ಯ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಿತ್ರದ ನಾಯಕನಾಗಿ ಪ್ರಜ್ಯೋತ್ ಎಸ್ ರಾವ್ ನಟಿಸಿದ್ದಾರೆ. ನಿಧಿ ಗೌಡ ಚಿತ್ರದ ನಾಯಕಿ. ಚಿತ್ರದ ಮೊದಲ ಹಾಡು “ಮುದ್ದಾದ ಮೂಗುತಿ” ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಪ್ರಚಾರಕ್ಕೆ ಚಾಲನೆ ನೀಡಿದೆ. ಸಿರಿಮ್ಯೂಸಿಕ್ ನಲ್ಲಿ ಹಾಡು ಲಭ್ಯವಿದೆ

ನಿರ್ದೇಶಕ ನಿರಂಜನ್ ಆರಾಧ್ಯ ಮಾತನಾಡಿ ನೃತ್ಯ ಕಲಾವಿದನಾಗಿರುವ ನನಗೆ ಮೊದಲಿನಿಂದಲೂ ನಿರ್ದೇಶನದ ಬಗ್ಗೆ ಆಸಕ್ತಿ. ಮೊದಲ ನಿರ್ದೇಶನದ ಚಿತ್ರ. ಪ್ರೀತಿಯ ಕುರಿತು ಹಲವು ಚಿತ್ರಗಳು ಬಂದಿದೆಯಾದರೂ ಚಿತ್ರದಲ್ಲಿ ಪ್ರೀತಿಯ ಬಗ್ಗೆ ಹೇಳಿರುವ ವ್ಯಾಖ್ಯಾನವೇ ಬೇರೆ. ಅದರಲ್ಲೂ ಈಗಂತೂ ಚಿಕ್ಕವಯಸ್ಸಿನಲ್ಲೇ ಲವ್, ಡೇಟಿಂಗ್ ಎನ್ನುತ್ತಾರೆ. ಅದೆಲ್ಲಾ ತಪ್ಪು ಎಂದು ಯುವಜನತೆಗೆ ಜಾಗೃತಿ ಮೂಡಿಸುವ ಚಿತ್ರವೂ ಹೌದು. ಅಭಿರಾಮ್ ಸಂಗೀತ ನೀಡಿರುವ ಮೂರು ಹಾಡುಗಳು ಚಿತ್ರದಲ್ಲಿದೆ. ಆ ಪೈಕಿ ಅರುಣ್ ಕುಮಾರ್ ಬರೆದು, ಆರ್ಫಾಜ್ ಉಲ್ಲಾಳ್ ಹಾಡಿರುವ ಮೊದಲ ಹಾಡು ಬಿಡುಗಡೆಯಾಗಿದೆ. ಚಿತ್ರದ ಚಿತ್ರೀಕರಣ ಬಹುತೇಕ ಮುಗಿದಿದೆ. ಚಿತ್ರ ಜುಲೈ 31 ರಂದು ತೆರೆಗೆ ಬರುತ್ತಿದೆ ಎಂದು ತಿಳಿಸಿದರು.

ನಾಯಕ ಪ್ರಜ್ಯೋತ್ ಎಸ್ ರಾವ್ ಮಾತನಾಡಿ ಆದರ್ಶ ಫಿಲಂ ಇನ್ಸ್ಟಿಟ್ಯೂಟ್ ನಲ್ಲಿ ನಟನೆ ಕಲಿತಿದ್ದೇನೆ. ನಾಯಕನಟನಾಗಲು ಕಿಚ್ಚ ಸುದೀಪ್ ಅವರು ಸ್ಪೂರ್ತಿ. ಅವರು ನನ್ನ ಆರಾಧ್ಯ ದೈವ. ನನ್ನ ಅಕ್ಕ ಪೂಜಿತಾ ಎಸ್ ರಾವ್ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ ಎಂದರು

ನಿರ್ಮಾಪಕಿ ಪೂಜಿತಾ ಎಸ್ ರಾವ್ ಮಾತನಾಡಿ ಸಹೋದರ ಪ್ರಜ್ಯೋತ್ ಎಸ್ ರಾವ್ ಗೆ ಮೊದಲಿನಿಂದಲೂ ನಾಯಕನಾಗಬೇಕೆಂಬ ಆಸೆ. ಅವನ ಆಸೆಯನ್ನು ಈ ಚಿತ್ರ ನಿರ್ಮಾಣ ಮಾಡುವ ಮೂಲಕ ಪೂರ್ಣ ಮಾಡಿದ್ದೇನೆ. ಈಗಿನ ಯುವಜನತೆ ನೋಡಲೇ ಬೇಕಾದ ಚಿತ್ರವಿದು ಎಂದು ಹೇಳಿದರು.

ನಾಯಕಿ ನಿಧಿ ಗೌಡ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಸಿರಿ ಮ್ಯೂಸಿಕ್ ಸುರೇಶ್ ಚಿಕ್ಕಣ್ಣ, ಸಂಗೀತ ನಿರ್ದೇಶಕ ಅಭಿರಾಮ್, ಛಾಯಾಗ್ರಾಹಕರಾದ ಅಭಿಷೇಕ್, ರೋಹಿತ್ ದನಿ, ಸಹ ನಿರ್ಮಾಪಕ ಯತೀಶ್ ಕುಮಾರ್, ಐ ಟು ಐ ಇನ್ಫೊಟೆಕ್ ನ ಶಮಂತ್ ಶೆಟ್ಟಿ, ನಟ ಹರೀಶ್ ಕುಮಾರ್ ಹಾಗೂ ಕಾರ್ಯಕಾರಿ ನಿರ್ಮಾಪಕ ಲಿಯಾನ್ ಗೌಡ ಮುಂತಾದವರಿದ್ದರು

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin