ಯುವರಾಜ್ ಕುಮಾರ್ ಎರಡನೇ ಚಿತ್ರ “ಎಕ್ಕ” ಶೀರ್ಷಿಕೆ ಘೋಷಣೆ
ಯುವರಾಜ್ ಕುಮಾರ್ ಅಭಿನಯದ ಎರಡನೇ ಚಿತ್ರಕ್ಕೆ “ಎಕ್ಕ” ಶೀರ್ಷಿಕೆಯನ್ನ ಚಿತ್ರ ತಂಡ ಇಂದು ಘೋಷಿಸಿದೆ. ಒಬ್ಬ ಮನುಷ್ಯನು ಭೂಗತ ಜಗತ್ತಿಗೆ ತುತ್ತಾದಾಗ ಆತನಿಗೆ ಆಗುವ ಅನುಭವವನ್ನು ಹೇಳುವ ಕಥೆಯೇ “ಎಕ್ಕ”.
“ಎಕ್ಕ” ಚಿತ್ರವನ್ನು ರೋಹಿತ್ ಪದಕಿ ಹಾಗೂ ವಿಕ್ರಂ ಹತ್ವಾರ್ ಬರೆದು, ರೋಹಿತ್ ಪದಕಿ ನಿರ್ದೇಶಿಸಲಿದ್ದಾರೆ.ಯುವ ರಾಜ್ ಕುಮಾರ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ, ಚಿತ್ರದ ತಾರಾಬಳಗವನ್ನು ಚಿತ್ರ ತಂಡ ಮುಂಬರುವ ದಿನಗಳಲ್ಲಿ ಪರಿಚಯಿಸಲಿದೆ.
ಚಿತ್ರಕ್ಕೆ ಚರಣ್ ರಾಜ್ ಸಂಗೀತ ಸಂಯೋಜನೆ ಮಾಡಲಿದ್ದು, ಸತ್ಯ ಹೆಗಡೆ ಮುಖ್ಯ ಛಾಯಾಗ್ರಾಹಕರಾಗಿರುತ್ತಾರೆ, ದೀಪು ಎಸ್ ಕುಮಾರ್ ಸಂಕಲನಕಾರರಾಗಿರುತ್ತಾರೆ ಮತ್ತು ವಿಶ್ವಾಸ್ ಕಶ್ಯಪ್ ಪ್ರೊಡಕ್ಷನ್ಸ್ ವಿನ್ಯಾಸ ಮಾಡಿರುತ್ತಾರೆ.
ಈ ಚಿತ್ರವನ್ನು ಶ್ವಿನಿ ಪುನೀತ್ ರಾಜ್ ಕುಮಾರ್ ಪಿ.ಆರ್.ಕೆ. ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ, ಜಯಣ್ಣ ಹಾಗೂ ಭೋಗೇಂದ್ರ ಜಯಣ್ಣ ಕಂಬೈನ್ಸ್ ಲಾಂಛನದಲ್ಲಿ ಮತ್ತು ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಕೆ.ಆರ್.ಜಿ.ಸ್ಟೂಡಿಯೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಿದ್ದಾರೆ. ಇದೇ ನವೆಂಬರ್ 28ಕ್ಕೆ ಚಿತ್ರೀಕರಣ ಆರಂಭವಾಗಲಿದ್ದು, 2025ಕ್ಕೆ ಚಿತ್ರ ತೆರೆ ಕಾಣಲಿದೆ.