Actress Sampada's entry as the heroine in the film "Karavali".

“ಕರಾವಳಿ” ಚಿತ್ರಕ್ಕೆ ನಾಯಕಿಯಾಗಿ ನಟಿ ಸಂಪದಾ ಪ್ರವೇಶ - CineNewsKannada.com

“ಕರಾವಳಿ” ಚಿತ್ರಕ್ಕೆ ನಾಯಕಿಯಾಗಿ ನಟಿ ಸಂಪದಾ ಪ್ರವೇಶ

ಕರಾವಳಿ, ಫಸ್ಟ್ ಲುಕ್ ಮತ್ತು ಟೀಸರ್ ಮೂಲಕ ಭಾರಿ ನಿರೀಕ್ಷೆ ಮೂಡಿಸಿರುವ ಸಿನಿಮಾ. ಗುರುದತ್ ಗಾಣಿಗ ನಿರ್ದೇಶದ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಸಿನಿಮಾದ ಅಪ್‍ಡೇಟ್ ಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಇದೀಗ ಸಿನಿಮಾದಿಂದ ನಾಯಕಿ ಯಾರು ಎನ್ನುವ ಮಾಹಿತಿ ಬಹಿರಂಗವಾಗಿದೆ. ಕರಾವಳಿಗೆ ನಾಯಕಿ ಯಾರಾಗಲಿದ್ದಾರೆ ಕನ್ನಡದವರೆನಾ ಅಥವಾ ಪರಭಾಷೆ ನಟಿನಾ ಎನ್ನುವ ಕುತೂಹಲ ಅಭಿಮಾನಿಗಳಲ್ಲಿತ್ತು. ಆದರೀಗ ಆ ಕುತೂಹಲಕ್ಕೆ ತೆರೆ ಎಳೆದಿದೆ ಸಿನಿಮಾತಂಡ.

ನಟಿ ಸಂಪದಾ ನಾಯಕಿಯಾಗಿ ಕರಾವಳಿ ಸಿನಿಮಾಗೆ ಪ್ರವೇಶ ಮಾಡಿದ್ದಾರೆ. ಕಿರುತೆರೆಯಲ್ಲಿ ಮಿಂಚಿದ್ದ ಸಂಪದಾ ಇದೀಗ ಪ್ಜಜ್ವಲ್‍ಗೆ ನಾಯಕಿಯಾಗುವ ಮೂಲಕ ಸಿನಿಮಾದಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಕಿರುತೆರೆ ಬಳಿಕ ಹೆಚ್ಚಾಗಿ ಎಲ್ಲೂ ಕಾಣಿಸಿಕೊಳ್ಳದ ಸಂಪದಾ ಇದೀಗ ಬಹುನಿರೀಕ್ಷೆಯ ಸಿನಿಮಾಗೆ ನಾಯಕಿಯಾಗಿ ಪದಾರ್ಪಣೆ ಮಾಡಿದ್ದಾರೆ. ಅಂದಹಾಗೆ ಸಂಪದಾಗೆ ಇದು ಮೊದಲ ಸಿನಿಮಾವಲ್ಲ. ಈಗಾಗಲೇ ನಿಖಿಲ್ ಕುಮಾರ್ ನಟನೆಯ ರೈಡರ್ ಸಿನಿಮಾದಲ್ಲಿ ನಟಿಸಿದ್ದರು. ಇದೀಗ ಕರಾವಳಿ ಕಥೆ ಕೇಳಿ ಇಂಪ್ರೆಸ್ ಆದ ಸಂಪದಾ ಪ್ರಜ್ವಲ್ ಜೊತೆ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಪ್ರೇಮಿಗಳ ದಿನದ ವಿಶೇಷವಾಗಿ ಕರಾವಳಿ ಸಿನಿಮಾತಂಡ ನಾಯಕಿ ಯಾರೆಂದು ರಿವೀಲ್ ಮಾಡಿದೆ. ಸದ್ಯ ರಿಲೀಸ್ ಆಗಿರುವ ಪೆÇೀಸ್ಟರ್ ನಲ್ಲಿ ಸಂಪದಾ ಕೆಂಪು ಸೀರೆಯಲ್ಲಿ ಕಾಣಿಸಿಕೊಂಡಿದ್ದಾರೆ. ಟೈಟಲ್ ಹೇಳುವ ಹಾಗೆ ಇದು ಪಕ್ಕಾ ಕರಾವಳಿ ಭಾಗದ ಸಿನಿಮಾ. ಸಂಪದಾ ಕೂಡ ಕರಾವಳಿ ಹುಡುಗಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಕರಾವಳಿ ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಭಿಮನ್ಯೂ ಸದಾನಂದನ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಪ್ರಜ್ವಲ್ ನಟನೆಯ 40ನೇ ಸಿನಿಮಾ ಇದಾಗಿದೆ. ಡೈನಾಮಿಕ್ ಪ್ರಿನ್ಸ್ ಈ ಸಿನಿಮಾದಲ್ಲಿ ಇದುವರೆಗೂ ಕಾಣಿಸಿಕೊಳ್ಳದೆ ಇರುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಸದ್ಯ ಫಸ್ಟ್ ಮತ್ತು ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ ಕರಾವಳಿ ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭ ಮಾಡಲಿದೆ. ಸಂಪೂರ್ಣ ಚಿತ್ರೀಕರಣ ಮಂಗಳೂರು ಸುತ್ತಮುತ್ತ ನಡೆಯಲಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin