I am more attracted to villains than heroes - Vinay Gowda

ಹಿರೋಗಳಿಗಿಂತ ವಿಲನ್ ನೋಡಿಯೇ ಹೆಚ್ಚು ಆಕರ್ಷಿತನಾಗಿದ್ದೇನೆ- ವಿನಯ್ ಗೌಡ - CineNewsKannada.com

ಹಿರೋಗಳಿಗಿಂತ ವಿಲನ್ ನೋಡಿಯೇ ಹೆಚ್ಚು ಆಕರ್ಷಿತನಾಗಿದ್ದೇನೆ- ವಿನಯ್ ಗೌಡ

“ಬಲರಾಮನ ದಿನಗಳು” ಕನ್ನಡ ಚಿತ್ರರಂಗದಲ್ಲಿ ಬಾರಿ ನಿರೀಕ್ಷೆ ಹುಟ್ಟು ಹಾಕಿರುವ ಚಿತ್ರ. “ ಆ ದಿನಗಳು” ಚಿತ್ರದ ಬಳಿಕ ಅದೇ ಮಾದರಿಯ ಚಿತ್ರ ನಿರ್ದೇಶನ ಮಾಡಲು ಕೆ.ಎಂ ಚೈತನ್ಯ ಮುಂದಾಗಿದ್ಧಾರೆ. ಹೀಗಾಗಿ ಚಿತರದ ಬಗ್ಗೆ ಕುತೂಹಲ ಹೆಚ್ಚು ಮಾಡಿದೆ.

#KMchaitanya

ಇತ್ತೀಚಗಷ್ಟೇ ಆಶಿಶ್ ವಿದ್ಯಾರ್ಥಿ, ಅತುಲ್ ಕುಲಕರ್ಣಿ ಯಂತಹ ದೈತ್ಯ ಪ್ರತಿಭೆಗಳಳು ನಟ ವಿನೋದ್ ಪ್ರಭಾಕರ್ ಎದುರು ಅಬ್ಬರಿಸಲು ಚಿತ್ರತಂಡ ಸೇರಿಕೊಂಡಿದ್ದಾರೆ. ಇದೀಗ ಬಿಗ್ ಬಾಸ್ 10ರ ಸ್ಪರ್ಧಿ ವಿನಯ್ ಗೌಡ ಹೊಸ ಎಂಟ್ರಿ.

ಬಿಗ್ ಬಾಸ್ ಮೂಲಕವೇ ಹೆಚ್ಚು ಜನಪ್ರಿಯತೆ ಪಡೆದವರು ನಟ ವಿನಯ್ ಗೌಡ. 2012ರಲ್ಲಿಯೇ ಕಿರುತೆರೆಯ ಧಾರಾವಾಹಿ ಮೂಲಕ ಬಣ್ಣದ ಲೋಕಕ್ಕೆ ಬಂದ ವಿನಯ್ ಗೌಡ ಬದುಕು ಬದಲಿಸಿದ್ದು ಮಾತ್ರ ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10. ಅಲ್ಲಿಂದ ಹೊಸ ಪಥದತ್ತ ವಿನಯ್ ಮುಖಮಾಡಿದ್ದಾರೆ.

ಸ್ಟಾರ್ ನಟರ ಸಿನಿಮಾಗಳಲ್ಲಿ ಖಡಕ್ ಖಳನಾಗುವ ತಮ್ಮ ಬಹುವರ್ಷಗಳ ಕನಸನ್ನು ಸಾಕಾರ ಮಾಡಿಕೊಂಡಿದ್ದಾರೆ. ಅದರಂತೆ, “ಬಲರಾಮನ ದಿನಗಳು” ಸಿನಿಮಾದಲ್ಲಿ, ವಿನೋದ್ ಪ್ರಭಾಕರ್ ಎದುರು ಖಡಕ್ ಗತ್ತಿನ್ನ ಖಳನಾಗಿ ಎಂಟ್ರಿಕೊಟ್ಟಿದ್ದಾರೆ ವಿನಯ್ ಗೌಡ.

ಚಂದನವನದಲ್ಲಿ ಸೂಕ್ಷ್ಮ ಸಂವೇದಿ ನಿರ್ದೇಶಕರಲ್ಲಿ ಒಬ್ಬರಾಗಿರುವ ಕೆ.ಎಂ ಚೈತನ್ಯ, ಇದೀಗ “ಬಲರಾಮನ ದಿನಗಳು” ಸಿನಿಮಾ ಕೈಗೆತ್ತಿಕೊಂಡು, ಒಂದಷ್ಟು ಭಾಗದ ಶೂಟಿಂಗ್ ಸಹ ಮುಗಿಸಿದ್ದಾರೆ. “ಆ ದಿನಗಳು” ಸಿನಿಮಾ ಬಳಿಕ ಬೆಂಗಳೂರು ಭೂಗತಲೋಕದ ಮತ್ತೊಂದು ರಕ್ತಚರಿತ್ರೆಯ ಕಥೆಯನ್ನು ಕೆ. ಎಂ ಚೈತನ್ಯ ಈ ಸಿನಿಮಾದಲ್ಲಿಯೂ ಮುಂದುವರಿಸಲಿದ್ದಾರೆ.

#VinodPrabhakar

“ಮರಿ ಟೈಗರ್” ವಿನೋದ್ ಪ್ರಭಾಕರ್ ನಾಯಕನಾಗಿ ನಟಿಸುತ್ತಿರುವ ಈ ಸಿನಿಮಾದಲ್ಲಿ, ಖಳನ ಪಾತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ವಿನಯ್ ಗೌಡ ನಟಿಸುತ್ತಿದ್ದಾರೆ. ಈ ಅವಕಾಶ ಸಿಕ್ಕಿದ್ದು ಹೇಗೆ ಮತ್ತು “ಬಲರಾಮನ ದಿನಗಳು” ಚಿತ್ರದ ಬಗ್ಗೆ ಒಂದಷ್ಟು ಮಾತನಾಡಿದ್ದಾರೆ. ವಿನಯ್ ಗೌಡ.

ಹೀರೋ ಅಂದ್ರೆ ಅಲ್ಲಿ ಒಂದು ಚೌಕಟ್ಟು ಇರುತ್ತೆ

“ಬಲರಾಮನ ದಿನಗಳು ಚಿತ್ರದ ನಿರ್ಮಾಪಕ ಶ್ರೇಯಸ್ ನನ್ನನ್ನು ಬಿಗ್ ಬಾಸ್‍ನಲ್ಲಿ ನೋಡಿದ್ದರು. ಕತ್ತಿ ಅನ್ನೋ ಪಾತ್ರಕ್ಕೆ ವಿನಯ್ ಅವರೇ ಸೂಕ್ತ. ವಿನೋದ್ ಪ್ರಭಾಕರ್ ಎದುರು ನಿಲ್ಲೋಕೆ ಹೀರೋ ಸರಿಸಮ ಪಾತ್ರಬೇಕು ಅನ್ನೋ ಕಾರಣಕ್ಕೆ, ನಿರ್ದೇಶಕ ಚೈತನ್ಯ ಅವರಿಗೆ ನನ್ನನ್ನು ರೆಫರ್ ಮಾಡಿದ್ರು. ನಿರ್ದೇಶಕರೂ, ನನ್ನನ್ನು ಒಪ್ಪಿಕೊಂಡರು. ಅಲ್ಲಿಂದ ಈ ಸಿನಿಮಾ ಜರ್ನಿ ಶುರುವಾಯ್ತು”,

“20 ರಿಂದ 25 ದಿನಗಳ ಶೂಟಿಂಗ್ ಮುಗಿದರೆ, ನನ್ನ ಭಾಗದ ಕೆಲಸ ಮುಗಿದಂತೆ. ದೊಡ್ಡ ಫೈಟ್ ಸೀನ್ ಇದೆ. ಅದು ಮುಗಿಯುತ್ತಿದ್ದಂತೆ, ಬಹುತೇಕ ನನ್ನ ಭಾಗದ ಶೂಟಿಂಗ್ ಮುಗಿಯುತ್ತೆ. ಈಗಾಗಲೇ ಶೇ. 50 ಭಾಗದ ಚಿತ್ರೀಕರಣ ಮುಗಿದಿದೆ. ಮೇಜರ್ ಫೈಟ್ ಸೀಕ್ವೆನ್ಸ್ ಇವೆ. ಅದು ಮುಗಿದರೆ, ಸಿನಿಮಾ ಮುಗಿದಂತೆ”.

#Vinaygowda

“ಚಿಕ್ಕ ವಯಸ್ಸಿನಲ್ಲಿ, ಸಿನಿಮಾಗಳಲ್ಲಿ ಹೀರೋಗಿಂತ ವಿಲನ್‍ಗಳನ್ನೇ ನೋಡಿ ಹೆಚ್ಚು ಆಕರ್ಷಿತನಾಗಿದ್ದೆ. ನನಗೆ ವಜ್ರಮುನಿ ಅವರೆಂದರೆ ತುಂಬ ಇಷ್ಟ. ತಮಿಳಿನ ರಘುವರನ್ ಸಹ ಇಷ್ಟ. ವಜ್ರಮುನಿ ಅವರು ಒಂದು ರೀತಿ ನೀರಿದ್ದಂತೆ, ಯಾವ ಪಾತ್ರೆಗೆ ಹಾಕಿದರೂ, ಅದೇ ಶೇಪ್‍ಗೆ ಬರ್ತಾರೆ. ಹೀರೋ ಅಂದ್ರೆ ಅಲ್ಲಿ ಒಂದು ಚೌಕಟ್ಟು ಇರುತ್ತೆ. ಒಳ್ಳೆಯ ಮಗನಾಗಿ, ಒಳ್ಳೆಯ ಗಂಡನಾಗಿ, ಒಳ್ಳೆಯ ಬಾಯ್‍ಫ್ರೆಂಡ್ ಇರಬೇಕು. ಆದರೆ, ವಿಲನ್‍ಗೆ ಅದ್ಯಾವುದೂ ಇರಲ್ಲ. ಹಾಗಾಗಿ ನಾನು ವಿಲನ್ ಆಗಿಯೇ ಗುರುತಿಸಿಕೊಳ್ಳಬೇಕು.” ಎಂದಿದ್ದಾರೆ.

“ಬಲರಾಮನ ದಿನಗಳು” ಚಿತ್ರವನ್ನು ಪದ್ಮಾವತಿ ಜಯರಾಮ್ ಮತ್ತು ಶ್ರೇಯಸ್ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದಲ್ಲಿ ದೊಡ್ಡ ತಾರಾಗಣ, ತಂತ್ರಜ್ಞರು ಚಿತ್ರದಲ್ಲಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin