ಕನ್ನಡ ಕಲಿತು ಡಬ್ಬಿಂಗ್ ವಿಶೇಷ ಅನುಭವ
ಅನ್ಲಾಕ್ ರಾಘವ’ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿರುವ ರೇಚಲ್ ಡೇವಿಡ್ ಕನ್ನಡ ಕಲಿತು ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡಿ ಗಮನ ಸೆಳೆದಿದ್ಧಾರೆ.
ಪಾತ್ರದಲ್ಲಿ ಕನ್ನಡ ಪದಗಳ ಉಚ್ಛಾರಣೆ ಕಲಿತು, ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡುತ್ತಿರುವುದು ವಿಶೇಷ. ಈ ಪ್ರಯತ್ನಕ್ಕೆ ಅನ್ಲಾಕ್ ರಾಘವ ಚಿತ್ರ ತಂಡ ತುಂಬಾ ಸಹಕಾರ ನೀಡುತ್ತಿದೆ ಎಂದು ನಾಯಕಿ ರೇಚಲ್ ಡೇವಿಡ್ ಹರ್ಷ ವ್ಯಕ್ತಪಡಿಸಿದ್ದಾರೆ.
ಚಿತ್ರದುರ್ಗ ಹಾಗೂ ಬೆಂಗಳೂರಿನಲ್ಲಿ 60 ದಿನಗಳ ಕಾಲ ಚಿತ್ರೀಕರಣ ನಡೆಸಿದೆ.ಚಿತ್ರದ ಡಬ್ಬಿಂಗ್ ಅನುಭವ ಹಂಚಿಕೊಂಡ ನಟಿ ರಚೆಲ್ ಡೇವಿಡ್, ಡಬ್ಬಿಂಗ್ ಅನುಭವ ಮರೆಯಲಾರದ್ದು, ಕನ್ನಡಕ್ಕೆ ಈ ಮುಂಚೆ ಯಾವುದೆ ಪಾತ್ರಕ್ಕೆ ಡಬ್ ಮಾಡಿರಲಿಲ್ಲ. ಸ್ಪಷ್ಟ ಉಚ್ಚಾರಣೆ ಬರಲಿ ಎನ್ನುವ ಕಾರಣಕ್ಕಾಗಿ ಕನ್ನಡ ಕಲಿತು ನನ್ನ ಪಾತ್ರಕ್ಕೆ ನಾನೇ ಡಬ್ಬಿಂಗ್ ಮಾಡಿದ್ದೇನೆ. ತುಂಬಾ ಚೆನ್ನಾಗಿ ಮೂಡಿ ಬಂದಿದ್ದು ಖುಷಿಯಾಗಿದೆ ಎಂದರು.
ಚಿತ್ರತಂಡಸಂಭಾಷಣೆ ಚೆನ್ನಾಗಿ ಬರಲಿ ಎನ್ನುವ ಕಾರಣಕ್ಕೆ ಸಹಕಾರ ನೀಡಿದೆ. ಈ ಕಾರಣದಿಂದ ಡಬ್ಬಿಂಗ್ ಚೆನ್ನಾಗಿ ಮೂಡಿ ಬಂದಿದೆ. ಕನ್ನಡ ಕಲಿತು ಡಬ್ಬಿಂಗ್ ಮಾಡಿದ ಅನುಭವ ವಿಶೇಷವಾಗಿತ್ತು ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಸದ್ಯ ಡಬ್ಬಿಂಗ್ ಇನ್ನೂ ಪ್ರಗತಿಯಲ್ಲಿದೆ. 13 ದಿನ ಡಬ್ಬಿಂಗ್ ಮಾಡುವ ಉದ್ದೇಶ ಹೊಂದಲಾಗಿದೆ ಎಂದು ಮಾಹಿತಿ ನೀಡಿದರು.
ಚಿತ್ರದಲ್ಲಿ ಜಾನಕಿ ಎನ್ನುವ ಪಾತ್ರ ಮಾಡಿದ್ದೇನೆ. ಚಿತ್ರದಲ್ಲಿ ಪುರಾತತ್ವಶಾಸ್ತ್ರಜ್ಷೆಯ ಪಾತ್ರ ಮಾಡಿದ್ದೇನೆ.ವಿಧಾನಸಭೆ ಚುನಾವಣೆ ಮುಗಿದ ಬಳಿಕ ಜುಲೈ ಅಥವಾ ಆಗಸ್ಟ್ ತಿಂಗಳಲ್ಲಿ ಚಿತ್ರ ತೆರೆಗೆ ಬರುವ ಉದ್ದೇಶವಿದೆ ಎಂದರು.
ಆಕ್ಷನ್ ಪ್ರಿಯರಿಗಾಗಿ ಬರೋಬ್ಬರಿ ನಾಲ್ಕು ವಿಭಿನ್ನ ಫೈಟ್ ಸಖತ್ ಮನರಂಜನೆಯಿದೆ ಎಂದು ಚಿತ್ರದ ನಿರ್ದೇಶಕ ದೀಪಕ್ ಮಧುವನಹಳ್ಳಿ ಹೇಳಿದ್ದಾರೆ.
`ಅನ್ಲಾಕ್ ರಾಘವ’ ಚಿತ್ರವನ್ನು ಜುಲೈ ಅಂತ್ಯದ ಒಳಗಾಗಿ ಬಿಡುಗಡೆ ಮಾಡುವ ಉದ್ದೇಶವಿದೆ. ಚಿತ್ರವನ್ನು ಸತ್ಯ ಹಾಗೂ ಮಯೂರ ಪಿಕ್ಚರ್ಸ್ ಬ್ಯಾನರ್ ನಡಿ ಮಂಜುನಾಥ್ ದಾಸೇಗೌಡ, ಡಿ ಸತ್ಯಪ್ರಕಾಶ್ ಹಾಗೂ ಗಿರೀಶ್ ಕುಮಾರ್ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ಮಿಲಿಂದ್ ನಾಯಕನಾಗಿ ಹಾಗೂ ರೇಚಲ್ ದೇವಿಡ್ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದಾರೆ. ಸಾಧುಕೋಕಿಲ, ಅವಿನಾಶ್, ಶೋಭರಾಜ್, ರಮೇಶ್ ಭಟ್, ವೀಣಾ ಸುಂದರ್, ಸುಂದರ್, ಧರ್ಮಣ್ಣ ಕಡೂರು, ಸಾಯಿ ಕುಡ್ಲ, ಭೂಮಿ ಶೆಟ್ಟಿ, ಮೂಗೂರು ಸುರೇಶ್, ಅಥರ್ವ ಪ್ರಕಾಶ್, ಶ್ರೀದತ್ತ, ಬೃಂದಾ ವಿಕ್ರಮ್ ಮೊದಲಾದವರು ಚಿತ್ರದ ಪ್ರಮುಖ ತಾರಾಗಣದಲ್ಲಿದ್ದಾರೆ.
ಲವಿತ್ ಛಾಯಾಗ್ರಾಹಣ, ಅನೂಪ್ ಸೀಳಿನ್ ಸಂಗೀತವಿದೆ