ಜೀ5 ಮತ್ತು ಪಿ ಆರ್ ಕೆ ಪ್ರೊಡಕ್ಷನ್ಸ್ ಲಾಂಛನದಲ್ಲಿ “ಮಾರಿಗಲ್ಲು” ವೆಬ್ ಸರಣಿ - CineNewsKannada.com

ಜೀ5 ಮತ್ತು ಪಿ ಆರ್ ಕೆ ಪ್ರೊಡಕ್ಷನ್ಸ್ ಲಾಂಛನದಲ್ಲಿ “ಮಾರಿಗಲ್ಲು” ವೆಬ್ ಸರಣಿ

ಬೃಹತ್ ಓ ಟಿ ಟಿ ವೇದಿಕೆಯಾದ ಜೀ5, ಕನ್ನಡ ಚಿತ್ರರಂಗದ ಪ್ರಮುಖ ನಿರ್ಮಾಣ ಸಂಸ್ಥೆಗಳಲ್ಲೊಂದಾಗ ಪಿ ಆರ್ ಕೆ ಪ್ರೊಡಕ್ಷನ್ಸ್ ನ ಸಹಯೋಗದಲ್ಲಿ ವೆಬ್ ಸರಣಿ ಘೋಷಿಸಿದ್ದು. “ಮಾರಿಗಲ್ಲು” ಶೀರ್ಷಿಕೆ ಇಡಲಾಗಿದೆ

ಈ ವೆಬ್ ಸರಣಿ ಕರ್ನಾಟಕ ಜಾನಪದ ಹೇಳುವ ಒಂದು ದೈವಿಕ ಥ್ರಿಲ್ಲರ್ ಆಗಿದೆ. ಕಥೆಯು ಸದೃಢ ಸಾಂಸ್ಕೃತಿಕ ಮತ್ತು ಐತಿಹಾಸಿಕ ಆಧಾರಗಳನ್ನು ಹೊಂದಿರುತ್ತದೆ ಎಂಬುದು ಗಮನಾರ್ಹ ಸಂಗತಿ.ನಾಲ್ಕನೇ ಶತಮಾನದ ಕದಂಬರ ಆಳ್ವಿಕೆಯನ್ನು ಹೊಂದಿರುವ ಈ ಕಥೆಯು, ಕದಂಬರ ಪ್ರಥಮ ರಾಜನಾದ ಮಯೂರ ಶರ್ಮನ ಪರಂಪರೆಯನ್ನು ಸಂಭ್ರಮಿಸುತ್ತಿದೆ.

ಕದಂಬರ ಕಾಲದಿಂದಲ್ಲೂ “ಮಾರಿ” ಎಂಬ ದೇವತೆಯಿಂದ ಕಾಪಾಡಲ್ಪಟ್ಟಿರುವ ನಿಧಿಯ ಕುರಿತಾಗಿ ಕಥೆಯನ್ನು ಹೆಣೆದಿದ್ದು, ನಂಬಿಕೆ, ಸ್ವಾರ್ಥ, ದುರಾಸೆ ಮುಂತಾದ ಭಾವನೆಗಳಿಗೆ ಒಳಗಾಗಿ ಪಾತ್ರಗಳು ಯಾವ ರೀತಿ ವರ್ತಿಸುತ್ತಾರೆ, ನಿಧಿಯ ರಹಸ್ಯವನ್ನು ಹೇಗೆ ಭೇದಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಅಷ್ಟೆ ಅಲ್ಲದೆ ಈ ಕಥೆಯು ಸಾಂಸ್ಕೃತಿಕ ಶ್ರೀಮಂತಿಕೆ, ದೈವ ಭಕ್ತಿ, ಜಾನಪದ ಮುಂತಾದ ವಿಷಯಗಳನ್ನೂ ಒಳಗೊಂಡಿರುತ್ತದೆ.

ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್ ಮಾತನಾಡಿ “ನಮ್ಮ ನೆಲದ ಸಂಸ್ಕೃತಿಯನ್ನು ಬಿಂಬಿಸುವ ಕಥೆಗಳು ಹಾಗೂ ಜನರ ಜೀವನ ಪ್ರತಿಬಿಂಬಿಸುವ ಕಥೆಗಳನ್ನು ಹೆಚ್ಚು ನಂಬುತ್ತೇವೆ ಮತ್ತು ಅಂತಹ ಕಥೆಗಳಿಗೆ ಉತ್ತೇಜನ ನೀಡುತ್ತೇವೆ. “ಮಾರಿಗಲ್ಲು” ಅಂತಹ ಕಥೆಯಾಗಿದೆ. ಕಥೆಯು ಕೇವಲ ರಹಸ್ಯ, ಥ್ರಿಲ್, ಆಕ್ಷನ್ಗಳನ್ನು ಒಳಗೊಂಡದೆ, ಕರ್ನಾಟಕ ಜಾನಪದ ಸಂಸ್ಕೃತಿ, ದೈವ ಭಕ್ತಿ ಮುಂತಾದವುಗಳ್ಳನ್ನೂ ಒಳಗೊಂಡಿರುವ ವಿಭಿನ್ನ ಮಿಶ್ರಣವಾಗಿದೆ. ಇದು ಪ್ರತಿ ಒಬ್ಬರು ಕಣ್ಣರಳಿಸಿ ನೋಡುವಂಥಾ ಥ್ರಿಲ್ಲರ್ ಕಥೆಯಾಗಲಿದೆ” ಎಂದು ಹೇಳಿದ್ಧಾರೆ

ಕನ್ನಡ ಜೀ5 ಬಿಸಿನೆಸ್ ಮುಖ್ಯಸ್ಥ ದೀಪಕ್ ಶ್ರಿರಾಮುಲು ಮಾತನಾಡಿ, ” ‘ಮಾರಿಗಲ್ಲು’ ಹಿಂದೆಂದೂ ಮಾಡದ ಪ್ರಯೋಗವಾಗಿದೆ. ದುರಾಸೆ, ರಹಸ್ಯ, ಮೋಹ, ದೈವ ಭಕ್ತಿ ಮುಂತಾದ ಅನೇಕ ವಿಷಯಗಳ ವಿಭಿನ್ನ ಮಿಶ್ರಣವಾದ ಈ ಕಥೆ ಕನ್ನಡ ನಾಡಿನ ಜಾನಪದವನ್ನು ಕೂಡ ಎತ್ತಿ ಹಿಡಿಯಲಿದೆ. ಕದಂಬ ವಂಶಸ್ಥರ ಸಾಧನೆಗಳನ್ನು ಜೀವಂತವಾಗಿಸುವ ಪ್ರಯತ್ನವನ್ನು ಇದರಲ್ಲಿ ಕಾಣಬಹುದು. ‘ಮಾರಿ’ ದೇವತೆಯಿಂದ ಕಾಯಲ್ಪಟ್ಟಿದ ಕದಂಬರ ನಿಧಿಯ ಕಳವು ಮತ್ತು ಹುಡುಕಾಟದ ಸುತ್ತ ಇಡೀ ಕಥೆಯನ್ನು ಹೆಣೆಯಲಾಗಿದೆ. ಈ ಥ್ರಿಲ್ಲರ್ ವೆಬ್ ಸರಣಿಯನ್ನು ಪ್ರೇಕ್ಷಕರ ಮುಂದಿಡಲು ನಾವು ಉತ್ಸುಕರಾಗಿದ್ದೇವೆ” ಎಂದು ತಿಳಿಸಿದರು.

ಮತ್ತೊಂದು ವಿಶೇಷವೆಂದರೆ, ಇಂತಹ ಕುತೂಹಲಕಾರಿ ಕಥೆಗಳನ್ನು ಪ್ರೇಕ್ಷಕರಿಗೆ ಓ ಟಿ ಟಿ ವೇದಿಕೆಗಳ ಮೂಲಕ ಲಭ್ಯಗೊಳಿಸಬೇಕೆಂಬುದು ಪುನೀತ್ ರಾಜಕುಮಾರ್ ಕನಸಾಗಿತ್ತು. ಉತ್ತಮ ಗುಣಮಟ್ಟದ ಕಥೆಗಳನ್ನು ಜನರಿಗೆ ಓ ಟಿ ಟಿಯ ಮೂಲಕ ನೀಡಬೇಕೆಂಬ ಅವರ ಆ ಕನಸಿಗೆ “ಮಾರಿಗಲ್ಲು” ಮುನ್ನುಡಿಯಾಗಲಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin