A new episode of Contract Marriage Story "My Story with You" starts from September 30.

ಸೆಪ್ಟಂಬರ್ 30ರಿಂದ ಕಾಂಟ್ರಾಕ್ಟ್ ಮದುವೆಯ ಕಥಾಹಂದದ ಹೊಸ ಧಾರಾವಾಹಿ “ನಿನ್ನ ಜೊತೆ ನನ್ನ ಕಥೆ” ಆರಂಭ - CineNewsKannada.com

ಸೆಪ್ಟಂಬರ್ 30ರಿಂದ ಕಾಂಟ್ರಾಕ್ಟ್ ಮದುವೆಯ ಕಥಾಹಂದದ ಹೊಸ ಧಾರಾವಾಹಿ “ನಿನ್ನ ಜೊತೆ ನನ್ನ ಕಥೆ” ಆರಂಭ

ಕನ್ನಡ ಕಿರುತೆರೆಯಲ್ಲಿ ಮದುವೆ ಆಧಾರಿತ ಕಥೆಗಳು ಬಂದು ಹೋಗಿವೆ. ಒಪ್ಪಂದ ಮದುವೆ ಕುರಿತ ಕತೆಯ ತಿರುಳು ಹೊಂದಿರುವ ‘ನಿನ್ನ ಜೊತೆ ನನ್ನ ಕಥೆ’ ಹೊಸ ಧಾರಾವಾಹಿ ಸೆಪ್ಟಂಬರ್ 30ರಿಂದ ಪ್ರೇಕ್ಷಕರ ಮನೆ ಮನಗಳಲ್ಲಿ ತಲುಪಲು ಮುಂದಾಗಿದೆ

ಸಕ್ಕರೆನಾಡು ಮಂಡ್ಯದಲ್ಲಿ ಕಥೆ ಕೇಂದ್ರೀಕೃತವಾಗಿರುತ್ತದೆ. ಸಾಮಾನ್ಯವಾಗಿ ಮನಸು ಮನಸುಗಳ ಬೆಸುಗೆಯಿಂದ ಮದುವೆಯಾಗುತ್ತದೆ. ಆದರೆ ಇದೊಂತರ ಡಿಫರೆಂಟ್ ಕಥೆ ಹೇಳಬಹುದು.

#NirushaGowda

ಕಥಾನಾಯಕಿ ಭೂಮಿ ಚಹಾ ಮಾರುವವಳಾಗಿದ್ದು, ಪೊಲೀಸ್ ಕಾನ್ಸ್ಟೇಬಲ್ ಆಗಬೇಕೆಂಬ ಕನಸು ಕಂಡವಳು. ಇನ್ನೊಂದು ಕಡೆ ಯಾರದ್ದೋ ಸಂಚಿಗೆ ಬಲಿಯಾಗಿ ಭೂಮಿಯ ತಾಯಿ ತಪ್ಪೇ ಮಾಡದಿದ್ರೂ ಜೈಲು ಪಾಲು

#Niranjan

ಕಥೆಯ ನಾಯಕ ಆದಿತ್ಯ, ಶ್ರೀಮಂತ ಕುಟುಂಬದಲ್ಲಿ ಬೆಳೆದಿದ್ದು ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿರುತ್ತಾನೆ. ಮದುವೆ ಅಂದ್ರೇನೆ ಇಷ್ಟವಿರದ ಆದಿಗೆ ಮನೆಯಲ್ಲಿ ಮದುವೆಯ ತಯಾರಿ ಮಾಡುತ್ತಿರುತ್ತಾರೆ. ಮುಂದೆ, ಅನಿವಾರ್ಯ ಕಾರಣಗಳಿಂದಾಗಿ ಭೂಮಿ ಹಾಗು ಆದಿ ಇಬ್ಬರು ಪರಸ್ಪರ ಷರತ್ತುಗಳಿಗೆ ಒಪ್ಪಿಕೊಂಡು ಒಂದು ವರ್ಷದ ಕಾಂಟ್ರಾಕ್ಟ್ ನೊಂದಿಗೆ ಮದುವೆಯಾಗ್ತಾರೆ. ಕಾಂಟ್ರಾಕ್ಟ್ ಮದುವೆಯಿಂದ ಒಂದಾದ ಈ ಜೀವಗಳ ಮನಸುಗಳು ಮುಂದೆ ಹೇಗೆ ಒಂದಾಗುತ್ತೆ ಎಂಬುದು ಈ ಧಾರಾವಾಹಿಯ ಮುಖ್ಯ ಕಥಾ ಹಂದರ.


ಕಥೆಯ ನಾಯಕನ ಪಾತ್ರದಲ್ಲಿ ನಟಿಸುತ್ತಿರುವ ನಟ ನಿರಂಜನ್ ವರ್ಷಗಳ ಬಳಿಕ “ನಿನ್ನ ಜೊತೆ ನನ್ನ ಕಥೆ” ಧಾರಾವಾಹಿಯ ಮೂಲಕ ಕನ್ನಡ ಕಿರುತೆರೆಗೆ ಮರಳುತ್ತಿದ್ದಾರೆ. ನಾಯಕಿಯಾಗಿ ನಟಿ ನಿರುಷ ಗೌಡ ನಟಿಸುತ್ತಿದ್ದು ಕಥೆಯು ಅದ್ಬುತ ತಾರಾಬಳಗವನ್ನು ಹೊಂದಿದೆ.

#NirushaGowda #Niranjan #ContractMarriage

ಸ್ಟಾರ್ ಸುವರ್ಣದಲ್ಲಿ “ನಿನ್ನ ಜೊತೆ ನನ್ನ ಕಥೆ” ಇದೇ ಸೋಮವಾರದಿಂದ ರಾತ್ರಿ 8 ಗಂಟೆಗೆ ಪ್ರಸಾರವಾಗಲಿದೆ

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin