ಬೆಳ್ಳಿತೆರೆಯಿಂದ ಕಿರುತೆರೆಗೆ ಬಂದ ಜೋಗಿ ನಿರ್ಮಾಪಕ: “ಸುವರ್ಣ ಸಂಕಲ್ಪ ಅಮೃತಘಳಿಗೆ” ಆರಂಭ
ಚಂದನವನದಲ್ಲಿ ಕಳೆದ 40 ವರ್ಷಗಳಿಂದ ಅಶ್ವಿನಿ ಆಡಿಯೋ ಕಂಪನಿ ಮುನ್ನೆಡೆಸುತ್ತಿರುವ ಅಶ್ವಿನಿ ರಾಮಪ್ರಸಾದ್ ಬೆಳ್ಳಿತೆರೆಯಿಂದ ಕಿರುತೆರೆಗೆ ಪ್ರವೇಶ ಮಾಡಿದ್ದಾರೆ

ಶಿವಣ್ಣ, ಪ್ರೇಮ್ ಕಾಂಬಿನೇಶನ್‍ನ “ಜೋಗಿ” ಚಿತ್ರ ನಿರ್ಮಿಸುವ ಮೂಲಕ ದಾಖಲೆ ಬರೆದ ಅಶ್ವಿನಿ ರಾಮ್ ಪ್ರಸಾದ್ ಆನಂತರವೂ ಹಲವಾರು ಯಶಸ್ವೀ ಚಿತ್ರ ನಿರ್ಮಿಸಿದ್ದರು. “ಘಾರ್ಗ” ಚಿತ್ರದ ಮೂಲಕ ಪುತ್ರನನ್ನೂ ಹೀರೋ ಮಾಡುತ್ತಿದ್ದಾರೆ. ಇದೆಲ್ಲದರ ನಡುವೆ ಇದೀಗ ಧಾರ್ಮಿಕ ಹಾಗೂ ವಾಸ್ತುಶಾಸ್ತ್ರದ ಹಿನ್ನೆಲೆಯ “ಸುವರ್ಣ ಸಂಕಲ್ಪ ಅಮೃತಘಳಿಗೆ” ಕಾರ್ಯಕ್ರಮ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.
ಈ ಕಾರ್ಯಕ್ರಮವನ್ನು ಕರ್ನಾಟಕ ಜ್ಯೋತಿಷ್ಯರತ್ನ ಪ್ರಶಸ್ತಿ ಪುರಸ್ಕೃತ ವಿಶ್ವನಾಥ ಭಾಗವತ ಗುರೂಜಿ ನಡೆಸಿಕೊಡಲಿದ್ದಾರೆ. ಗಾಯಕಿಯೂ ಆದ ಅಖಿಲಾ ನಿರೂಪಣೆಯ ಜವಾಬ್ದಾರಿ ಹೊತ್ತಿದ್ದಾರೆ. ಆಗಸ್ಟ್ 4 ರಿಂದ ಪ್ರತಿದಿನ ಬೆ.7-30ಕ್ಕೆ ಸುವರ್ಣ ಸಂಕಲ್ಪ ಅಮೃತಘಳಿಗೆ ಪ್ರಸಾರವಾಗಲಿದೆ.
ನಿರ್ಮಾಪಕ ರಾಮ್ ಪ್ರಸಾದ್ ಮಾತನಾಡಿ ಈಗಾಗಲೇ 6 ವರ್ಷಗಳಿಂದ ನಡೆದುಕೊಂಡು ಬಂದಿರುವ ಕಾರ್ಯಕ್ರಮವಿದು. ಇದರ ನಂತರ ನಾವೇನು ಮಾಡಬೇಕು ಅಂತ ಪ್ಲಾನ್ ಮಾಡುತ್ತಿದ್ದೇವೆ.ರಾಜ್ಯದ, ದೇಶದ ಎಲ್ಲಾ ಪ್ರಖ್ಯಾತ ದೇವಸ್ಥಾನಗಳಿಗೂ ವಿಸಿಟ್ ಮಾಡಬೇಕೆಂಬ ಪ್ಲಾನಿದೆ. ಅಲ್ಲದೆ ನಮಗೆ ಯಾರೇ ಕಾಲ್ ಮಾಡಿದರೂ ಬಡವ, ಬಲ್ಲಿದ ಅಂತ ನೋಡದೆ ಅವರ ಮನೆಗಳಿಗೆ ಹೋಗಿ ವಾಸ್ತು ಪರಿಹಾರ ಸೂಚಿಸುತ್ತೇವೆ ಎಂದು ಹೇಳಿದರು.

ಇದರ ಜತೆಗೆ ಸಂಜೀವಿನಿ ಸಂಕಲ್ಪ, ಯೋಗ ಸಂಕಲ್ಪ, ಮಂತ್ರ ಸಂಕಲ್ಪ ಹೀಗೆ ಅನೇಕ ಶೀರ್ಷಿಕೆಯಡಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ಹಂಚಿಕೊಂಡರು
ವೇದಿಕೆಯಲ್ಲಿ ವಿಶ್ವನಾಥ ಗುರೂಜಿ, ನಿರೂಪಕಿ ಅಖಿಲಾ ಹಾಗೂ ಸುವರ್ಣ ವಾಹಿನಿಯ ಮುಖ್ಯಸ್ಥರೂ ಸುವರ್ಣ ಸಂಕಲ್ಪ ಅಮೃತಘಳಿಗೆ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು

