"Lakshmi Tiffan Room" is the story of Varalakshmi who carries dreams from 4th March..

ಮಾರ್ಚ್ 4 ರಿಂದ ಕನಸುಗಳನ್ನು ಹೊತ್ತ ವರಲಕ್ಷ್ಮಿಯ ಕಥೆ “ಲಕ್ಷ್ಮಿ ಟಿಫನ್ ರೂಮ್” - CineNewsKannada.com

ಮಾರ್ಚ್ 4 ರಿಂದ ಕನಸುಗಳನ್ನು ಹೊತ್ತ ವರಲಕ್ಷ್ಮಿಯ ಕಥೆ “ಲಕ್ಷ್ಮಿ ಟಿಫನ್ ರೂಮ್”

ಹೊಸ ಅಲೆಯ ವಿನೂತನ ಧಾರಾವಾಹಿಗಳನ್ನು ಕನ್ನಡಿಗರಿಗೆ ನೀಡುವಲ್ಲಿ ದಿಟ್ಟ ಹೆಜ್ಜೆ ಇಡುತ್ತಿರುವ ಸ್ಟಾರ್ ಸುವರ್ಣ ವಾಹಿನಿಯು ಇದೀಗ “ಲಕ್ಷ್ಮಿ ಟಿಫನ್ ರೂಮ್” ಎಂಬ ಹೊಸ ಧಾರಾವಾಹಿಯನ್ನು ನಾಡಿನ ಜನರ ಮುಂದೆ ಇಡುತ್ತಿದೆ..

ಇದೇ ಮೊದಲ ಬಾರಿಗೆ ಹಾಸ್ಯ ಕಲಾವಿದ ಟೆನ್ನಿಸ್ ಕೃಷ್ಣ ಪೂರ್ಣ ಪ್ರಮಾಣದಲ್ಲಿ ಧಾರಾವಾಹಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೇ ಮಾಚ್ 4 ರಿಂದ ಹೊಸ ಧಾರಾವಾಹಿ ಪ್ರಸಾರವಾಗಲಿದೆ.

ಕಥಾ ನಾಯಕಿ ವರಲಕ್ಷ್ಮಿ ನೇರ ನುಡಿಯನ್ನು ಹೊಂದಿರೋಳು, ಎಂತಹ ಸಂದರ್ಭದಲ್ಲೂ ಈಕೆ ನ್ಯಾಯದ ಪರ ನಿಲ್ಲುವ ಗಟ್ಟಿಗಿತ್ತಿ. ಐಎಎಸ್ ಮಾಡಬೇಕೆಂಬ ಕನಸನ್ನು ಕಂಡಿರುತ್ತಾಳೆ. ಆದರೆ ಪರಿಸ್ಥಿತಿಯ ಕೈಗೊಂಬೆಯಾಗಿ, ಹೆಣ್ಣು ಮಕ್ಕಳು ಕೇವಲ ಅಡುಗೆ ಮನೆಗೆ ಸೀಮಿತ ಎಂಬ ಮನಸ್ಥಿತಿಯಿರುವ ಮನೆತನಕ್ಕೆ ಸೊಸೆಯಾಗಿ ಹೋಗುತ್ತಾಳೆ. ಆ ಮನೆಯ ರೀತಿ ರಿವಾಜುಗಳು, ಕಟ್ಟುಪಾಡುಗಳನ್ನು ಭೇಧಿಸಿ ತನ್ನ ಗಂಡನ ಮನೆಯಲ್ಲಿರುವ ಎಲ್ಲಾ ಸವಾಲುಗಳನ್ನು ಎದುರಿಸಿ, ವರಲಕ್ಷ್ಮಿ ತನ್ನ ಐಎಎಸ್ ಕನಸನ್ನು ನನಸಾಗಿಸುತ್ತಾಳಾ ಈ ಮೂರುಗಂಟಿನ ಬಂಧ, ವರು ಕನಸುಗಳನ್ನು ಕಟ್ಟಿಹಾಕುತ್ತಾ ಎಂಬುದು ಈ ಧಾರಾವಾಹಿಯ ಮುಖ್ಯ ಕಥಾ ಹಂದರ.

ಹೆಣ್ಣೊಬ್ಬಳು ಕೂಡು ಕುಟುಂಬಕ್ಕೆ ಸೊಸೆಯಾಗಿ ಹೋದಾಗ ತನ್ನ ಕನಸನ್ನು ನನಸಾಗಿಸಲು ಏನೆಲ್ಲಾ ಕಷ್ಟಗಳನ್ನು ಎದುರಿಸಬೇಕಾಗುತ್ತೆ ಎಂಬುದನ್ನು ಈ ಕಥೆಯಲ್ಲಿ ಅತ್ಯದ್ಭುತವಾಗಿ ತೋರಿಸಲಾಗಿದೆ.

ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಟೆನ್ನಿಸ್ ಕೃಷ್ಣ ಇದೇ ಮೊದಲ ಬಾರಿಗೆ ಸ್ಟಾರ್ ಸುವರ್ಣ ವಾಹಿನಿಯ ಮೂಲಕ ವಿಶೇಷ ಪಾತ್ರದಲ್ಲಿ ಕಿರುತೆರೆಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಜೊತೆಗೆ ಸುನೇತ್ರ ಪಂಡಿತ್, ಅನಂತವೇಲು, ವಚನ್, ಮಧುಮಿತಾ, ವಿಜಯಲತಾ, ಕಾವ್ಯ, ಪ್ರೀತಮ್ ಮಕ್ಕಿಹಾಳಿ, ಭಗತ್ ಸೇರಿದಂತೆ ಇನ್ನು ಅನೇಕ ಕಲಾವಿದರು ಈ ಧಾರಾವಾಹಿಯಲ್ಲಿ ಅಭಿನಯಿಸುತ್ತಿದ್ದಾರೆ.

ಶುರುವಾಗ್ತಿದೆ ಪ್ರೀತಿ, ಆಕಾಂಕ್ಷೆಯನ್ನೊಳಗೊಂಡ ವರಲಕ್ಷ್ಮಿಯ ಕಥೆ “ಲಕ್ಷ್ಮಿ ಟಿಫನ್ ರೂಮ್” ಇದೇ ಸೋಮವಾರದಿಂದ ಸಂಜೆ 6.30 ಕ್ಕೆ ಪ್ರಸಾರವಾಗುತ್ತಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin