ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಅನಿರುದ್ಧ್ ಜತ್ಕರ್ ಅವರಿಗೆ ಅಭಿಮಾನಿಗಳಿಂದ ಆತ್ಮೀಯ ಸನ್ಮಾನ
ಹಿರಿತೆರೆ ಹಾಗೂ ಕಿರುತೆರೆತಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ನಟ ಅನಿರುದ್ಧ್ ಜತಕರ್ ಅವರಿಗೆ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರ ಪ್ರಶಸ್ತಿಯ ಮನ್ನಣೆ ದೊರಕಿದೆ. ಇದೇ ಖುಷಿಯಲ್ಲಿ ಅವರ ಅಭಿಮಾನಿಗಳು ಆತ್ಮೀಯವಾಗಿ ಸನ್ಮಾನಿಸುವ ಮೂಲಕ ನ್ಯಾಚುರಲ್ ಸ್ಟಾರ್ ಎನ್ನುವ ಬಿರುದು ನೀಡಿ ಗೌರವಿಸಿದ್ದಾರೆ.
ಅನಿರುದ್ಧ್ ಅವರು”ಬಾಳೇ ಬಂಗಾರ” ಸಾಕ್ಷ್ಯ ಚಿತ್ರದ ನಿರ್ದೇಶನಕ್ಕಾಗಿ ಅನಿರುದ್ಧ್ ಅವರಿಗೆ ರಾಷ್ಟಪ್ರಶಸ್ತಿ ಮನ್ನಣೆ ದೊರೆತಿದೆ. ಈ ಸಂಭ್ರಮವನ್ನು ಅನಿರುದ್ಧ್ ಅವರ ಅಭಿಮಾನಿಗಳು ಸಂತೋಷದಿಂದ ಸಂಭ್ರಮಿಸಿ ತಮಗೆ ಪ್ರಶಸ್ತಿ ಬಂದಿದೆ ಏನೋ ಎನ್ನುವಂತೆ ಖುಷಿಯಲ್ಲಿ ತೇಲಾಡಿದ್ದಾರೆ
ಅನಿರುದ್ಧ್ ಜತಕರ ಅಭಿಮಾನಿ ಬಳಗದ ಹೈದರಾಬಾದ್‍ನ ನಿಶಾದ್ , ತಮಿಳುನಾಡಿನ ಗಾಯತ್ರಿ, ಸಿಂಗಪೂರದ ಸೋನಿ, ಬೆಂಗಳೂರಿನ ಪುಷ್ಪ ಸೇರಿದಂತೆ ಅನೇಕ ಅಭಿಮಾನಿಗಳು ಅನಿರುದ್ದ್ ಅವರಿಗೆ ಆತ್ಮೀಯ ಅಭಿನಂದನಾ ಸಮಾರಂಭ ಆಯೋಜಿಸಿ, ನ್ಯಾಚುರಲ್ ಸ್ಟಾರ್ ಎಂಬ ಬಿರುದು ನೀಡಿದ್ದಾರೆ.
ಹಿರಿಯ ನಟ ಬಿ.ಎಂ.ವೆಂಕಟೇಶ್ ಹಾಗೂ ನಿರ್ದೇಶಕ ಎಂ.ಆನಂದರಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಅನಿರುದ್ಧ್ ಜತಕರ್ ಕುಟುಂಬದ ಸದಸ್ಯರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಆತ್ಮೀಯ ಸನ್ಮಾನ ಸ್ವೀಕರಿಸಿ ಮಾತನಾಡಿದ ನಟ, ನಿರ್ದೇಶಕ ಅನಿರುದ್ಧ್, ಅಭಿಮಾನಿಗಳ ಈ ಪ್ರೀತಿಗೆ ಮನತುಂಬಿ ಬಂದಿದೆ. ಎಲ್ಲರಿಗೂ ನನ್ನ ಧನ್ಯವಾದ ಎಂದು ಹೇಳಿದ್ದಾರೆ.