TV's Biggest Celebrity Battle: "Golden Celebrity League" Begins From September 15

ಕಿರುತೆರೆಯಲ್ಲಿ ಸೆಲೆಬ್ರಿಟಿಗಳ ಬಹುದೊಡ್ಡ ಸಮರ: “ಸುವರ್ಣ ಸೆಲೆಬ್ರಿಟಿ ಲೀಗ್” ಸೆಪ್ಟಂಬರ್ 15ರಿಂದ ಆರಂಭ - CineNewsKannada.com

ಕಿರುತೆರೆಯಲ್ಲಿ ಸೆಲೆಬ್ರಿಟಿಗಳ ಬಹುದೊಡ್ಡ ಸಮರ: “ಸುವರ್ಣ ಸೆಲೆಬ್ರಿಟಿ ಲೀಗ್” ಸೆಪ್ಟಂಬರ್ 15ರಿಂದ ಆರಂಭ

ರಿಯಾಲಿಟಿ ಶೋ ಮೂಲಕ ಕನ್ನಡ ಕಿರುತೆರೆಯಲ್ಲಿ ಹೊಸತನದ ಸಂಚಲನ ಸೃಷ್ಟಿಸಲು ಸ್ಟಾರ್ ಸುವರ್ಣ ಸಜ್ಜಾಗಿದೆ. ವೀಕೆಂಡ್ ನಲ್ಲಿ ಪ್ರೇಕ್ಷಕರಿಗೆ ಮತ್ತಷ್ಟು ಮನರಂಜನೆಯ ರಸದೌತಣ ನೀಡಲು ಹೊತ್ತು ತರ್ತಿದೆ ಹೊಚ್ಚ ಹೊಸ ಶೋ “ಸುವರ್ಣ ಸೆಲೆಬ್ರಿಟಿ ಲೀಗ್”,

ಇದೊಂದು ಕಿರುತೆರೆಯ ಜನಪ್ರಿಯ ಸೆಲೆಬ್ರಿಟಿಗಳನ್ನು ಒಳಗೊಂಡ ವಿನೂತನ ರೀತಿಯ ರಿಯಾಲಿಟಿ ಶೋ. ಇದರಲ್ಲಿ ಒಟ್ಟು 2 ತಂಡಗಳಿರುತ್ತದೆ. 10 ಜನ ಸೆಲೆಬ್ರಿಟಿ ಸ್ಪರ್ಧಿಗಳ ನಡುವೆ ಸರಿ ಸುಮಾರು 8 ವಾರಗಳ ಕಾಲ ನಡೆಯುವ ಸಮರ ಇದಾಗಿದೆ.

ಈ ಜಟಾಪಟಿಯಲ್ಲಿ ಯಾವ ತಂಡ ಗೆದ್ದು “ಸುವರ್ಣ ಸೆಲೆಬ್ರಿಟಿ ಲೀಗ್” ಪಟ್ಟವನ್ನು ತನ್ನದಾಗಿಸಿಕೊಳ್ಳುತ್ತದೆ ಎಂಬುದು ಈ ಕಾರ್ಯಕ್ರಮದ ಶೈಲಿಯಾಗಿದೆ. ಜೊತೆಗೆ ಮೋಜು-ಮಸ್ತಿ, ತರ್ಲೆ ತುಂಟಾಟದ ಜೊತೆ ಪೈಪೆÇೀಟಿಯ ಮಹಾ ಯುದ್ಧವೇ ನಡೆಯಲಿದೆ.

`ಸುವರ್ಣ ಸೆಲೆಬ್ರಿಟಿ ಲೀಗ್’ ಶೋ ಲಾಂಚ್ ಗೆ ಭರ್ಜರಿಯಾಗಿ ತಯಾರಿ ನಡೆದಿದ್ದು, ಪೆÇ್ರಮೋಗಳಿಂದ ವೀಕ್ಷಕರಲ್ಲಿ ಕಾತುರತೆ ಹೆಚ್ಚಾಗಿದೆ.

ಇನ್ನು ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ನಟನೆಯ ಮೂಲಕ ಕನ್ನಡಿಗರ ಮನಸ್ಸನ್ನು ಅದ್ದೂರಿಯಾಗಿ ಗೆದ್ದ ನಟ ಕಾರ್ತಿಕ್ ಮಹೇಶ್ ಇದೇ ಮೊದಲ ಬಾರಿಗೆ `ಸುವರ್ಣ ಸೆಲೆಬ್ರಿಟಿ ಲೀಗ್’ ನ ನಿರೂಪಣೆಯ ಜವಾಬ್ದಾರಿ ಹೊತ್ತಿದ್ದಾರೆ. ಇದು ಈ ಕಾರ್ಯಕ್ರಮದ ಮತ್ತೊಂದು ವಿಶೇಷತೆ.

10 ಸ್ಪರ್ಧಿಗಳಾಗಿ ಕಿರುತೆರೆ ಕಲಾವಿದರುಗಳಾದ ವಿನಯ್ ಗೌಡ, ನಮ್ರತಾ ಗೌಡ, ‘ಕಥೆಯೊಂದು ಶುರುವಾಗಿದೆ’

ಧಾರಾವಾಹಿ ಖ್ಯಾತಿಯ ಚಂದು ಗೌಡ, ‘ಆಸೆ’ ಧಾರಾವಾಹಿ ಖ್ಯಾತಿಯ ಪ್ರಿಯಾಂಕಾ ಮತ್ತು ನಿನಾದ್ ಹರಿತ್ಸ, ‘ಗೌರಿಶಂಕರ’ ಧಾರಾವಾಹಿ ಖ್ಯಾತಿಯ ಅಭಿಜ್ಞಾ ಭಟ್, ತನಿಷಾ ಕುಪ್ಪಂಡ, ಪ್ರಿಯಾಂಕಾ ಶಿವಣ್ಣ, ರಕ್ಷಕ್ ಬುಲೆಟ್ ಹಾಗೂ ‘ಕಾಮಿಡಿ ಗ್ಯಾಂಗ್ಸ್’ ಖ್ಯಾತಿಯ ಹಿತೇಶ್ ಭಾಗವಹಿಸಲಿದ್ದಾರೆ.

ಇನ್ಮುಂದೆ ವಾರಾಂತ್ಯದಲ್ಲಿ ಶುರುವಾಗಲಿದೆ ಸೆಲೆಬ್ರಿಟಿಗಳ ಬಹುದೊಡ್ಡ ಸಮರ “ಸುವರ್ಣ ಸೆಲೆಬ್ರಿಟಿ ಲೀಗ್” ಇದೇ ಭಾನುವಾರದಿಂದ ಪ್ರತೀ ಭಾನುವಾರ ರಾತ್ರಿ 7 ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ತಪ್ಪದೇ ವೀಕ್ಷಿಸಿ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin