International Yoga Competition in Goa: Award to Republic School Students

ಗೋವಾದಲ್ಲಿ ಅಂತರರಾಷ್ಟ್ರೀಯ ಯೋಗ ಸ್ಪರ್ಧೆ: ರಿಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ - CineNewsKannada.com

ಗೋವಾದಲ್ಲಿ ಅಂತರರಾಷ್ಟ್ರೀಯ ಯೋಗ ಸ್ಪರ್ಧೆ: ರಿಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಗೋವಾ ಯೂತ್ ಇಂಡಿಯಾ ಯೋಗ ಫೆಡರೇಶನ್ ಹಾಗೂ ಇಂಟರ್ನ್ಯಾಷನಲ್ ಯೂತ್ ಯೋಗ ಫೆಡರೇಶನ್ ಅಂತರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಿ ಮಂಡ್ಯ ನಗರದ ರಿಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಶಾಲೆ ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾರೆ

ಎಂಟರಿಂದ ಹನ್ನೆರಡು ವರ್ಷದ ವಯೋಮಿತಿಯ ಬಾಲಕ ಬಾಲಕಿಯರ ವಿಭಾಗದಲ್ಲಿ ಐದನೇ ತರಗತಿ ವ್ಯಾಸಂಗ ಮಾಡುತ್ತಿರುವ ಜಿಶಾ ಆರ್ ಹಾಗು ತನುಷ್ ಎಚ್ ಆರ್ ಇವರು ಪ್ರಥಮ ಸ್ಥಾನವನ್ನು ಪಡೆದು ಶಾಲೆಗೆ ಹಾಗೂ ಜಿಲ್ಲೆಗೆ ಕೀರ್ತಿಯನ್ನು ಎತ್ತಿ ಹಿಡಿದಿದ್ದಾರೆ.

ಇದೇ ಸಂದರ್ಭದಲ್ಲಿ ಇವರು ಮಕ್ಕಳಿಗೆ ಬಹುಮಾನ ವಿತರಿಸಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ ಯೋಗ ಶಿಕ್ಷಕರಾದ ಕ್ಯಾತನಹಳ್ಳಿ ಬಾನು ಕುಮಾರ್ ಅವರು ಯೋಗ ತರಬೇತಿ ಪಡೆದು ಜಿಶಾ ಆರ್ ಹಾಗು ತಾನುಷ್ ‌ಎಚ್ ಆರ್ ಅವರಿಗೆ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಲು ತರಬೇತಿ ಪಡೆದಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಶಾಲೆಯ ಕಾರ್ಯದರ್ಶಿ ಮಂಜು ,ಪ್ರಾಂಶುಪಾಲರಾದ ಸುನಿತಾ ರಾಜನ , ಎಚ್ ಒಡಿ ರಂಗನ್ ಶಿಕ್ಷಕರ ವರ್ಗ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿ ಭವಿಷ್ಯದಲ್ಲಿ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin