Rakshasa Dolly Dhananjaya is an actor who also entered the field of advertising

ಜಾಹೀರಾತು ಕ್ಷೇತ್ರಕ್ಕೂ ಕಾಲಿಟ್ಟ ನಟ ರಾಕ್ಷಸ ಡಾಲಿ ಧನಂಜಯ - CineNewsKannada.com

ಜಾಹೀರಾತು ಕ್ಷೇತ್ರಕ್ಕೂ ಕಾಲಿಟ್ಟ ನಟ ರಾಕ್ಷಸ ಡಾಲಿ ಧನಂಜಯ

ನಟ, ಖಳನಟ, ಗೀತರಚನೆಕಾರ, ನಿರ್ಮಾಪಕ ಹೀಗೆ ಚಿತ್ರರಂಗದಲ್ಲಿ ಒಂದೊದೇ ವಿಭಾಗದಲ್ಲಿಯೂ ಛಾಪು ಮೂಡಿಸುತ್ತಿರುವ ನಟ ರಾಕ್ಷಸ ಡಾಲಿ ಧನಂಜಯ ಇದೀಗ ಜಾಹೀರಾತು ಕ್ಷೇತ್ರಕ್ಕೂ ಕಾಲಿರಿಸಿದ್ದಾರೆ. ಲಿಡ್ಕರ್‍ಗೆ ಡಾಲಿ ಧನಂಜಯ ರಾಯಬಾರಿಯಾಗಿದ್ದು ಉತ್ಪನ್ನಗಳನ್ನು ಪ್ರಚಾರ ಮಾಡಲು ಮುಂದಾಗಿದ್ದಾರೆ.

ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮಕ್ಕೆ ಇದೇ ಮೊದಲ ಬಾರಿಗೆ ರಾಯಭಾರಿ ಆಯ್ಕೆ ಮಾಡಿದೆ. ನಟರಾಕ್ಷಸ ಡಾಲಿ ಧನಂಜಯ್ ಲಿಡ್ಕರ್‍ಗೆ ರಾಯಭಾರಿಯಾಗಿದ್ದಾರೆ. ನಟನೆ ಜೊತೆಗೆ ನಿರ್ಮಾಣದಲೂ ಬ್ಯುಸಿ ಇರುವ ಸ್ಟಾರ್ ಡಾಲಿ ಧನಂಜಯ ಇದೀಗ ನಟನೆ, ನಿರ್ಮಾಣದ ಜೊತೆಗೀಗ ಧನಂಜಯ ಜಾಹೀರಾತು ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ. ಮೊದಲ ಬಾರಿಗೆ ಡಾಲಿ ಸರ್ಕಾರದ ಜಾಹೀರಾತಿನಲ್ಲಿ ಮಿಂಚುವ ಮೂಲಕ ಲಿಡ್ಕರ್ ಬ್ರಾಂಡ್ ಪ್ರಮೋಟ್ ಮಾಡುತ್ತಿದ್ದಾರೆ.

ಲಿಡ್ಕರ್‍ನಲ್ಲಿ 50 ಸಾವಿರಕ್ಕೂ ಹೆಚ್ಚು ಚರ್ಮ ಕುಶಲಕರ್ಮಿಗಳ ಕುಟುಂಬವಿದೆ. ಚರ್ಮ ಕೈಗಾರಿಕೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸರ್ಕಾರ ಸ್ಯಾಂಡಲ್‍ವುಡ್ ಸ್ಟಾರ್ ಧನಂಜಯ್ ಅವರನ್ನು ರಾಯಾಭಾರಿಯಾಗಿ ನೇಮಕಮಾಡಿದೆ. ಈಗಾಗಲೇ ಡಾಲಿ ಜೊತೆ ಮಾತುಕತೆಯಾಗಿದ್ದು ಧನಂಜಯ ಕೂಡ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಅಧಿಕೃತ ಪ್ರಕಟಣೆಯೊಂದೆ ಬಾಕಿ ಇದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಲಿಡ್ಕರ್ ವ್ಯವಸ್ಥಾಪಕ ನಿರ್ದೇಶಕಿ ಕೆ.ಎಂ.ಎಸ್ ವಸುಂಧರಾ, ‘ಧನಂಜಯ್ ಅವರು ರಾಯಭಾರಿಯಾಗಿದ್ದು ತುಂಬಾ ಖುಷಿ ಇದೆ. ಅವರು ಸ್ಯಾಂಡಲ್‍ವುಡ್‍ನ ಲೀಡಿಂಗ್ ನಟ. ಎಲ್ಲಾ ವರ್ಗದ ಜನರಿಗೆ ತಲುಪುವ ಕಲಾವಿದ ಹಾಗಾಗಿ ಅವರನ್ನು ಆಯ್ಕೆ ಮಾಡಿದ್ದೇವೆ. ಸಚಿವರು ಕೂಡ ಇದಕ್ಕೆ ಒಪ್ಪಿಗೆ ಸೂಚಿಸಿದ್ದು ಆದಷ್ಟು ಬೇಗ ಜಾಹೀರಾತಿನ ಚಿತ್ರೀಕರಣ ನಡೆಯಲಿದೆ’ ಎಂದರು.

ಡಾಲಿ ಧನಂಜಯ ಸದ್ಯ ಸಾಲು ಸಾಲು ಸಿನಿಮಾಗಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ಧನಂಜಯ್ ತಮ್ಮದೇ ಡಾಲಿ ಸಂಸ್ಥೆ ನಿರ್ಮಾಣದ ‘ಟಗರು ಪಲ್ಯ’ ಸಿನಿಮಾ ಬಿಡುಗಡೆ ಮಾಡಿದ್ದರು. ಟಗರು ಪಲ್ಯ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಿರ್ಮಾಣದ ಜೊತೆಗೆ ಡಾಲಿ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಕನ್ನಡದ ಜೊತೆಗೆ ತೆಲುಗಿನ ಪುಷ್ಪ-2 ಸಿನಿಮಾದಲ್ಲೂ ಕಾಣಿಸಿಕೊಂಡಿದ್ದಾರೆ ಈ ನಡುವೆ ಜಾಹೀರಾತು ಲೋಕಕ್ಕೆ ಡಾಲಿ ಲಗ್ಗೆ ಇಟ್ಟಿರುವುದು ಅವರ ಅಭಿಮಾನಿ ಬಳಗಕ್ಕೆ ಸಂತಸ ತಂದಿದೆ .

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin