ಚಿತ್ರರಂಗದ ಸಮಸ್ಯೆ ಬಗ್ಗೆ ಮುಖ್ಯಮಂತ್ರಿಗೆ ಮನವರಿಕೆ ಮಾಡಿದ ಸಿನಿಮಾ ನಿಯೋಗ
ನಿರ್ಮಾಪಕರ ಸಂಘದ ಪದಾಧಿಕಾರಿಗಳು ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾ ರಾ ಗೋವಿಂದು ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚಿತ್ರರಂಗದ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟು ಈಡೇರಿಸಲು ಮನವಿ ಮಾಡಿದೆ.
ಚಿತ್ರರಂಗಕ್ಕೆ ಸಂಬಂಧಪಟ್ಟ ಸಮಸ್ಯೆಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು.ಬಾಕಿ ಉಳಿದುಕೊಂಡಿರುವ ಸಬ್ಸಿಡಿ ಹಣ,ರಾಜ್ಯ ಪ್ರಶಸ್ತಿಗಳು. ಮುಚ್ಚುತ್ತಿರುವ ಚಿತ್ರಮಂದಿರಗಳ ಪರಿಸ್ಥಿತಿ.ಮೈಸೂರಿನಲ್ಲಿ ಚಿತ್ರನಗರಿ. ಪೈರಸಿ ಇಂದ ಉದ್ಯಮಕ್ಕೆ ಆಗುತ್ತಿರುವ ನಷ್ಟ. ತೆರಿಗೆಇಂದ ಆಗುತ್ತಿರುವ ಸಮಸ್ಯೆ ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ಸುದೀರ್ಘವಾದಂತಹ ಚರ್ಚೆ ಮಾಡಿದೆ.
ಸಮಸ್ಯೆಗಳ ಚರ್ಚೆಗೆ ಸಮಯವನ್ನು ನಿಗದಿಪಡಿಸಿ ಪರಿಹಾರಕ್ಕೆ ಅಧಿಕಾರಿಗಳೊಂದಿಗೆ ಅತಿ ಶೀಘ್ರದಲ್ಲೇ ದಿನಾಂಕವನ್ನು ನಿಗದಿಪಡಿಸುತ್ತೇನೆಂದು ತುಂಬು ಹೃದಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಗಕ್ಕೆ ಭರವಸೆ ನೀಡಿದ್ದಾರೆ.
ನಿರ್ಮಾಪಕರು ಹಾಗೂ ಚಿತ್ರಮಂದಿರಗಳ ಬಗ್ಗೆ ಅವರಿಗೆ ತಿಳಿದಿದ್ದ ಕೆಲವು ವಿಷಯಗಳನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಾರೆ. ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಕಾರ್ಯದರ್ಶಿಗಳಾದಂತಪ್ರವೀಣ್ ಕುಮಾರ್( ಡಿ. ಕೆ. ರಾಮಕೃಷ್ಣ ) ಹಾಗೂ ಉಪಾಧ್ಯಕ್ಷರಾದಂತಹ ಎಂ. ಜಿ.ರಾಮಮೂರ್ತಿ ನಿರ್ಮಾಪಕ ಎನ್.ಎಂ ಸುರೇಶ್ ಅವರು ನಿಯೋಗದಲ್ಲಿ ಇದ್ದರು