ಕಿಚ್ಚ ಸುದೀಪ್ ಕಾಂಗ್ರೆಸ್ ಸೇರ್ತಾರಾ..
ಡಿಕೆ ಶಿವಕುಮಾರ್ ಭೇಟಿ, ಕುತೂಹಲ
ರಾಜ್ಯಾದ್ಯಂತ ಅತಿದೊಡ್ಡ ಅಭಿಮಾನಿ ಬಳಗ ಹೊಂದಿರುವ ಕಿಚ್ಚ ಸುದೀಪ್ ಏನೇ ಮಾಡಿದರೂ ಅದರಲ್ಲೊಂದು ವಿಶೇಷತೆ, ವಿಭಿನ್ನತೆ ಇರುತ್ತದೆ. ಇದೀಗ ಹೊಸದೊಂದು ಸುದ್ದಿ ಹರಿದಾಡುತ್ತಿದೆ. ಅದು ರಾಜ್ಯ ವಿಧಾನಸಭೆಗೆ ಇನ್ನೂ ಕೆಲವೇ ದಿನಗಳು ಬಾಕಿ ಇರುವಾಗ.
ಕಿಚ್ಚ ಸುದೀಪ್ ಕಾಂಗ್ರೆಸ್ ಸೇರುತ್ತಾರೆ ಎನ್ನುವ ಊಹಾಪೋಹಗಳ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ.
ಕಾಂಗ್ರೆಸ್, ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷಗಳ ನಾಯಕರ ಜೊತೆ ಉತ್ತಮ ಬಾಂಧವ್ಯ ಮತ್ತು ಒಡನಾಟ ಹೊಂದಿರುವ ಸುದೀಪ್ ಅವರು ಡಿ.ಕೆ ಶಿವಕುಮಾರ್ ಅವರನ್ನು ಭೇಡಿ ಮಾಡಿ ಇಬ್ಬರೂ ರಾತ್ರಿ ಒಟ್ಟಿಗೆ ಭೋಜನ ಮಾಡಿ ಹಲವು ವುಷಯ ಚರ್ಚಿಸಿರುವುಸು ಕುತೂಹಲ ಕೆರಳಿಸಿದೆ.
ಪ್ರತಿಬಾರಿ ವಿಧಾನ ಸಭೆ ಚುನಾವಣೆ ಎದುರಾದಾಗಲೆಲ್ಲ ನಟ ಸುದೀಪ್ ಅವರು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆ ಎನ್ನುವ ಊಹಾಪಗಳು ಕೇಳಿ ಬರುತ್ತಿವೆ. ಈ ಬಾರಿ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಸುದೀಪ್ ಕಾಂಗ್ರೆಸ್ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸುತ್ತಾರಾ ಎನ್ನುವ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರ ಸಭೆಗಳಿಗೆ ಬರುವಂತೆ ನಟ ಸುದೀಪ್ ಅವರಿಗೆ ಡಿಕೆ ಶಿವಕುಮಾರ್ ಆಹ್ವಾನ ನೀಡಿದ್ದಾರೆ ಎಂದು ಮೂಲಗಳು ತಿಳಿಸಿದೆ.ರಾಜ್ಯದ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ವಾಲ್ಮೀಕಿ ಸಮುದಾಯದ ಮತಗಳು ನಿರ್ಣಾಯಕವಾಗಿರುವ ಕಾರಣ ಆಹ್ವಾನ ನೀಡಿರುವ ಸುದೀಪ್ ಮೂಲಕ ವಾಲ್ಮೀಕಿ ಮತ ಸೆಳೆಯಲು ಕಸರತ್ತು ನಡೆಸಲಾಗಿದೆ.ಆದರೆ ಈ ಬಗ್ಗೆ ನಟ ಸುದೀಪ್ ಅವರಾಗಲಿ ಅಥವಾ ಕಾಂಗ್ರೆಸ್ ಮೂಲಗಳಾಗಲಿ ಕಾಂಗ್ರೆಸ್ ಪಕ್ಷ ಸೇರುವ ಕುರಿತು ಅಧಿಕೃತವಾಗಿ ಯಾವುದೇ ಮಾಹಿತಿ ಸದ್ಯಕ್ಕೆ ನೀಡಿಲ್ಲ