ಸಿಸಿಎಲ್ ಬಳಿಕ ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ಮೂಲಕ ರೇಸಿಂಗ್ ಕಣಕ್ಕೆ ಕಿಚ್ಚ ಸುದೀಪ್
ಇದೇ ತಿಂಗಳ ಫೆಬ್ರವರಿ 14 ಮತ್ತು 15ರಂದು ಗೋವಾದ ರಸ್ತೆಗಳು ಇಂಡಿಯನ್ ರೇಸಿಂಗ್ ಫೆಸ್ಟಿವಲ್‍ಗಾಗಿ ಹೈಇಂಟೆನ್ಸಿಟಿ ರೇಸಿಂಗ್ ಕಣವಾಗಿ ಮಾರ್ಪಡಲು ಸಜ್ಜಾಗುತ್ತಿದೆ. ಕಿಚ್ಚಾಸ್ ಕಿಂಗ್ಸ್ ಬೆಂಗಳೂರು’ ಮೂಲಕ ನಟ ಕಿಚ್ಚ ಸುದೀಪ್ ಅವರು ರೇಸಿಂಗ್ ಅಖಾಡಕ್ಕೆ ಧುಮಿಕಿದ್ದಾರೆ

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಕಿಚ್ಚ ಸುದೀಪ್, ಸ್ಟ್ರೀಟ್ ರೇಸಿಂಗ್ ಎನ್ನುವುದು ಸಮಯಸ್ಪೂರ್ತಿ, ಧೈರ್ಯ ಮತ್ತು ಸಂಯಮದ ಪರಮ ಪರೀಕ್ಷೆಯಾಗಿದ್ದು, `ಕಿಚ್ಚಾಸ್ ಕಿಂಗ್ಸ್ ಬೆಂಗಳೂರು’ ತಂಡ ನಿರ್ಧರಿಸುತ್ತವೆ .ಕೇವಲ ಪರಿಪೂರ್ಣತೆ ಮುಖ್ಯವಲ್ಲ; ಎದುರಾಗುವ ಸವಾಲುಗಳನ್ನು ಎದುರಿಸಿ ನಿಲ್ಲುವ ಸ್ಥಿತಿಸ್ಥಾಪಕತ್ವವೇ ಅತ್ಯಂತ ಮುಖ್ಯ. ಕೇವಲ ರೇಸ್ ಅಲ್ಲ, ಮನೋಭಾವ ಮತ್ತು ಧೈರ್ಯದ ಪರೀಕ್ಷೆ ಎಂದಿದ್ದಾರೆ
ಸ್ಟ್ರೀಟ್ ರೇಸಿಂಗ್ ಮೋಟಾರ್ ಸ್ಪೋರ್ಟ್ ಅನ್ನು ಜನರಿಗೆ ಇನ್ನಷ್ಟು ಹತ್ತಿರ ತರುತ್ತದೆ. ಕ್ರೀಡೆಯನ್ನು ಮುಚ್ಚಿದ ಸರ್ಕ್ಯೂಟ್‍ಗಳಿಂದ ಹೊರತಂದು ನಗರದ ಹೃದಯಭಾಗಕ್ಕೆ ಕರೆದೊಯ್ಯುತ್ತದೆ. ಭಾರೀ ಅಬ್ಬರದ, ತೀವ್ರದ ಸ್ಪರ್ಧೆಯಾಗಿರುತ್ತದೆ. ಸಣ್ಣ ತಪ್ಪಿಗೂ ಜಾಗವಿಲ್ಲ. ಜನರ ಶಕ್ತಿಯೇ ತಂಡವನ್ನು ಸದಾ ಜಾಗೃತವಾಗಿಯೂ ಶಾರ್ಪ್ ಆಗಿಯೂ ಇಡುತ್ತದೆ. ಆ ಶಕ್ತಿ ಪ್ರತಿಕ್ಷಣವೂ ಎಲ್ಲರನ್ನೂ ಎಚ್ಚರದಲ್ಲಿರಿಸುತ್ತದೆ ಎಂದುಹೇಳಿದ್ದಾರೆ.
ಮುಂಚೂಣಿಯಲ್ಲಿ ಫ್ರೆಂಚ್ ರೇಸರ್ ಸಚೆಲ್ ರೊಟ್ಗೆಇದ್ದಾರೆ. ಯುರೋಪಿನ ಉದಯೋನ್ಮುಖ ಸಿಂಗಲ್-ಸೀಟರ್ ಪ್ರತಿಭೆಯಾಗಿದ್ದು, 2025ರ ಎಫ್4 ಇಂಡಿಯಾ ವೈಸ್ ಚಾಂಪಿಯನ್. ಎಫ್4 ಶೂಟೌಟ್ ಕಾರ್ಯಕ್ರಮದ ಮೂಲಕ ಪೂರ್ಣ ಪ್ರಮಾಣದ ವಿದ್ಯಾರ್ಥಿವೇತನ ಕೂಡ ಪಡೆದಿದ್ದಾರೆ. “ ಯುವ ಯುರೋಪಿಯನ್ ರೇಸರ್ ಭಾರತವನ್ನು ತನ್ನ ಪ್ರತಿಭೆ ಸಾಬೀತುಪಡಿಸುವ ವೇದಿಕೆಯಾಗಿ ಆಯ್ಕೆ ಮಾಡುತ್ತಿರುವುದು, ಜಾಗತಿಕ ಮಟ್ಟದ ಪ್ರತಿಭೆಗಳಿಗೆ ನಮ್ಮ ರೇಸಿಂಗ್ ವ್ಯವಸ್ಥೆಯ ಮೇಲೆ ಇರುವ ವಿಶ್ವಾಸವನ್ನು ತೋರಿಸುತ್ತದೆ,” ಎಂದು ಸುದೀಪ್ ಹೇಳಿದ್ದಾರೆ.

ಬೆಂಗಳೂರು ಹಾಗೂ ಭಾರತದ ಭರವಸೆಯ ಆಶಾಕಿರಣವಾಗಿ ರುಹಾನ್ ಆಳ್ವಾ ಮುಂದಿದ್ದಾರೆ. ಅಇಂಡಿಯನ್ ರೇಸಿಂಗ್ ಲೀಗ್ ಇತಿಹಾಸದಲ್ಲೇ ಅತಿ ಕಿರಿಯ ವಯಸ್ಸಿನ ರೇಸ್ ವಿಜೇತ ಹಾಗೂ 2024ರ ಎಫ್4 ಇಂಡಿಯಾ ವೈಸ್ ಚಾಂಪಿಯನ್. ಈಗಾಗಲೇ ಬ್ರಿಟನ್‍ನ ರೇಸ್‍ಗಳಲ್ಲಿ ಪೆÇೀಡಿಯಂ ಫಿನಿಶ್ ಸಾಧಿಸುವ ಮೂಲಕ ಜಾಗತಿಕ ಗಮನ ಸೆಳೆದಿದ್ದಾರೆ
ತಂಡಕ್ಕೆ ಇನ್ನಷ್ಟು ಬಲ ತುಂಬುತ್ತಿರುವವರು ಕೈಲ್ ಕುಮಾರನ್ ಮಧ್ಯಪ್ರಾಚ್ಯದಾದ್ಯಂತ ಕಾರ್ಟಿಂಗ್‍ನಲ್ಲಿ ವೈಸ್ ವರ್ಲ್ಡ್ ಚಾಂಪಿಯನ್ ಆಗಿದ್ದು, ಅಂತರಾಷ್ಟ್ರೀಯ ಮಟ್ಟದ ತೀವ್ರ ಪೈಪೆÇೀಟಿಗಳ ಮೂಲಕ ರೇಸಿಂಗ್ ಕೌಶಲವನ್ನು ರೂಪಿಸಿಕೊಂಡಿದ್ದಾರೆ. ಬ್ರಿಟಿಷ್ ರೇಸರ್ ಹಾಗೂ ತಂಡದ ಮಹಿಳಾ ಚಾಲಕಿ ಜೆಮ್ ಹೆಪ್ವರ್ತ್ ಅವರು ರಾಫಾ ರೇಸಿಂಗ್ ತಂಡದ ಚಾಲಕಿಯಾಗಿದ್ದು, ಮೆಕ್ಲಾರೆನ್ ಟ್ರೋಫಿ ಸ್ಪರ್ಧೆಯಲ್ಲಿ ಪೆÇೀಡಿಯಂ ಫಿನಿಶ್ ಸಾಧಿಸಿರುವ ಅನುಭವ ಹೊಂದಿದ್ದಾರೆ.

